T20 WC Final: ಫೈನಲ್‌ನಲ್ಲಿ ಕಿಂಗ್ ಕೊಹ್ಲಿ, ಅಕ್ಷರ್ ಅಬ್ಬರ! ದಕ್ಷಿಣ ಆಫ್ರಿಕಾಗೆ ಸವಾಲಿನ ಗುರಿ

ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ, ವಿರಾಟ್ ಕೊಹ್ಲಿ ಅವರ ಅರ್ಧಶತಕದ ನೆರವಿನಿಂದ 20 ಓವರ್ ಗಳಲ್ಲಿ 176 ರನ್ ಕಲೆ ಹಾಕಿದೆ.

ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಮೊದಲ ಓವರ್ ನಲ್ಲೇ ಭಾರತ 15 ರನ್ ಗಳಿಸುವ ಮೂಲಕ ಸ್ಫೋಟಕ ಆರಂಭವನ್ನೇ ಪಡೆಯಿತು.

India sets 177-run target for South Africa in T20 World Cup final

ಎರಡನೇ ಓವರ್ ನ ಮೊದಲ ಎರಡು ಎಸೆತಗಳಲ್ಲಿ ಬೌಂಡರಿ ಬಂದ ನಂತರ, ಭಾರತ ಎರಡು ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿತು. ಕೇಶವ್ ಮಹಾರಾಜ್ ಅವರ ಬೌಲಿಂಗ್‌ನಲ್ಲಿ ರೋಹಿತ್ ಶರ್ಮಾ (9 ರನ್) ಮತ್ತು ರಿಷಬ್ ಪಂತ್ (0) ಅವರ ವಿಕೆಟ್ ಕಳೆದುಕೊಂಡಿತು.

ನಂತರ ಬಂದ ಸೂರ್ಯಕುಮಾರ್ ಯಾದವ್ ಕೂಡ 4 ರನ್ ಗಳಿಸಿ ಔಟಾದರು. ತಂಡ ಕಷ್ಟದಲ್ಲಿದ್ದಾಗ ಬ್ಯಾಟಿಂಗ್‌ನಲ್ಲಿ ಬಡ್ತಿ ಪಡೆದ ಅಕ್ಷರ್ ಪಟೇಲ್ ಭಾರತದ ಆತಂಕವನ್ನು ದೂರ ಮಾಡಿದರು.

ಒಂದು ಕಡೆ ಕೊಹ್ಲಿ ಎಚ್ಚರಿಕೆಯಿಂದ ಬ್ಯಾಟಿಂಗ್ ಮಾಡುತ್ತಿದ್ದರೆ, ಅಕ್ಷರ್ ಪಟೇಲ್ ಅಬ್ಬರಿಸಿದರು. 31 ಎಸೆತಗಳಲ್ಲಿ 1 ಬೌಂಡರಿ 4 ಭರ್ಜರಿ ಸಿಕ್ಸರ್ ಸಹಿತ 47 ರನ್ ಗಳಿಸಿದ ಅಕ್ಷರ್ ರನೌಟ್‌ ಆದರು. ಆದರೆ ಕೊಹ್ಲಿ-ಅಕ್ಷರ್ ಜೋಡಿ 72 ರನ್ ಕಲೆಹಾಕಿದ್ದರು.

ವಿರಾಟ್ ಕೊಹ್ಲಿ ಅದ್ಭುತ ಇನ್ನಿಂಗ್ಸ್

ಈ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಆರಂಭಿಕರಾಗಿ ಅವರು ವಿಫಲವಾದರೂ ನಾಯಕ ರೋಹಿತ್ ಮತ್ತು ಕೋಚ್ ರಾಹುಲ್ ದ್ರಾವಿಡ್ ಕೊಹ್ಲಿ ಮೇಲೆ ನಂಬಿಕೆ ಇಟ್ಟಿದ್ದರೂ, ಫೈನಲ್‌ನಲ್ಲಿ ಕೊಹ್ಲಿ ದೊಡ್ಡ ಇನ್ನಿಂಗ್ಸ್ ಆಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರೂ, ಅವರ ನಂಬಿಕೆಯನ್ನು ಕೊಹ್ಲಿ ಹುಸಿ ಮಾಡಲಿಲ್ಲ.

3 ವಿಕೆಟ್ ಬಿದ್ದ ಬಳಿಕ ಕ್ರೀಸ್ ಕಚ್ಚಿ ನಿಂತ ಅವರು ಪ್ರಮುಖ ಪಂದ್ಯದಲ್ಲಿ ಅರ್ಧಶತಕ ಗಳಿಸಿದರು. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಇದು ಅವರ 38ನೇ ಅರ್ಧಶತಕವಾಗಿದೆ. 59 ಎಸೆತಗಳಲ್ಲಿ 6 ಬೌಂಡರಿ ಮತ್ತು ಎರಡು ಸಿಕ್ಸರ್ ಸಹಿತ 76 ರನ್ ಗಳಿಸಿದರು. ಕೊನೆಯ ಓವರ್ ಗಳಲ್ಲಿ ಶಿವಂ ದುಬೆ ಕೂಡ ಕೊಹ್ಲಿ ಜೊತೆ ಉತ್ತಮ ಬ್ಯಾಟಿಂಗ್ ಮಾಡಿದರು. ದುಬೆ 16 ಎಸೆತಗಳಲ್ಲಿ 27 ರನ್ ಗಳಿಸಿದರು.

ಟಿ20 ವಿಶ್ವಕಪ್ ಫೈನಲ್‌ನಲ್ಲಿ ಇತಿಹಾಸದಲ್ಲಿ ಇದು ಅತ್ಯಧಿಕ ಸ್ಕೋರ್ ಆಗಿದ್ದು, ಬಲಿಷ್ಠ ಬೌಲಿಂಗ್ ಪಡೆಯನ್ನು ಹೊಂದಿರುವ ಭಾರತ ಈ ಪಂದ್ಯವನ್ನು ಗೆಲ್ಲುವ ವಿಶ್ವಾಸದಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+