T20 World Cup: ಸೂರ್ಯ ಅರ್ಧಶತಕ; ಅಫ್ಘಾನಿಸ್ತಾನಕ್ಕೆ 182 ರನ್‌ಗಳ ಗುರಿ ನೀಡಿದ ಭಾರತ
ಟಿ20 ವಿಶ್ವಕಪ್‌ನ ಸೂಪರ್ 8 ಪಂದ್ಯದಲ್ಲಿ ಭಾರತ ಅಫ್ಘಾನಿಸ್ತಾನ ತಂಡಕ್ಕೆ 182 ರನ್‌ಗಳ ಸವಾಲಿನ ಗುರಿ ನೀಡಿದೆ. ಸೂರ್ಯಕುಮಾರ್ ಯಾದವ್ ಅರ್ಧಶತಕ ಗಳಿಸುವ ಮೂಲಕ ಭಾರತಕ್ಕೆ ಆಸರೆಯಾದರು.
ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭದಲ್ಲೇ ನಾಯಕ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿತು.

13 ಎಸೆತಗಳಲ್ಲಿ ಕೇವಲ 8 ರನ್ ಗಳಿಸಿದ ರೋಹಿತ್ ಶರ್ಮಾ ಫಜಲ್ಹಕ್ ಫರೂಕಿ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿದರು. ಬಳಿಕ ಜೊತೆಯಾದ ರಿಷಬ್ ಪಂತ್ ಮತ್ತು ವಿರಾಟ್ ಕೊಹ್ಲಿ ಎರಡನೇ ವಿಕೆಟ್‌ಗೆ 43 ರನ್‌ಗಳ ಜೊತೆಯಾಟ ಆಡಿದರು.
ರಿಷಬ್ ಪಂತ್ 11 ಎಸೆತಗಳಲ್ಲಿ 20 ರನ್ ಗಳಿಸಿ ಔಟಾದರೆ, ವಿರಾಟ್ ಕೊಹ್ಲಿ 24 ಎಸೆತಗಳಲ್ಲಿ 24 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಬಳಿಕ ಬಂದ ಶಿವಂ ದುಬೆ ಕೂಡ 7 ಎಸೆತಗಳಲ್ಲಿ 10 ರನ್ ಗಳಿಸಿ ಔಟಾದರು.
ಸೂರ್ಯ-ಪಾಂಡ್ಯ ಆಸರೆ
10.5 ಓವರ್ ಗಳಲ್ಲಿ ಭಾರತ 90 ರನ್ ಗಳಿಸಿ 4 ವಿಕೆಟ್ ಕಳೆದುಕೊಂಡಿತ್ತು. ಈ ಹಂತದಲ್ಲಿ ಜೊತೆಯಾದ ಹಾರ್ದಿಕ್ ಪಾಂಡ್ಯ ಮತ್ತು ಸೂರ್ಯಕುಮಾರ್ ಯಾದವ್ ಅಫ್ಘಾನಿಸ್ತಾನ ಬೌಲರ್ ಗಳನ್ನು ದಂಡಿಸಿದರು.
ಸೂರ್ಯಕುಮಾರ್ ಯಾದವ್ 28 ಎಸೆತಗಳಲ್ಲಿ 53 ರನ್ ಗಳಿಸಿದರೆ, ಹಾರ್ದಿಕ್ ಪಾಂಡ್ಯ 24 ಎಸೆತಗಳಲ್ಲಿ 32 ರನ್ ಗಳಿಸಿದರು. ಜಡೇಜಾ 5 ಎಸೆತಗಳಲ್ಲಿ 7 ರನ್ ಗಳಿಸಿದರೆ, ಅಕ್ಷರ್ ಪಟೇಲ್ 6 ಎಸೆತಗಳಲ್ಲಿ 12 ರನ್ ಗಳಿಸಿದರು. ಅಂತಿಮವಾಗಿ ಭಾರತ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 181 ರನ್ ಗಳಿಸಿತು.
ಉಭಯ ತಂಡಗಳ ಆಡುವ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.
ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ಹಜರತುಲ್ಲಾ ಝಜೈ, ಗುಲ್ಬದಿನ್ ನೈಬ್, ನಜೀಬುಲ್ಲಾ ಝದ್ರಾನ್, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ರಶೀದ್ ಖಾನ್ (ನಾಯಕ), ನೂರ್ ಅಹ್ಮದ್, ನವೀನ್-ಉಲ್-ಹಕ್, ಫಜಲ್ಹಕ್ ಫಾರೂಕಿ.












Click it and Unblock the Notifications