WTC Points Table: ಸೋಲಿನ ಜೊತೆ ಭಾರತಕ್ಕೆ ಮತ್ತೊಂದು ಆಘಾತ; WTC ಅಂಕಪಟ್ಟಿ ಹೇಗಿದೆ?
ಬಾಂಗ್ಲಾದೇಶ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ್ದ ಭಾರತ, ನ್ಯೂಜಿಲೆಂಡ್ ವಿರುದ್ಧ ಮುಗ್ಗರಿಸಿದೆ. ಮುಂಬೈನಲ್ಲಿ ನಡೆದ ಸರಣಿಯ ಕೊನೆಯ ಪಂದ್ಯದಲ್ಲು ಭಾರತ 25 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಇದೇ ಮೊದಲ ಬಾರಿಗೆ ಭಾರತ 3 ಪಂದ್ಯಗಳ ಸರಣಿಯನ್ನು 0-3 ಅಂತರದಲ್ಲಿ ಸೋತು ಕೆಟ್ಟ ದಾಖಲೆ ಬರೆಯಿತು. ಸರಣಿ ಸೋಲಿನ ಆಘಾತದ ನಡುವೆ ಭಾರತಕ್ಕೆ ಮತ್ತೊಂದು ಆಘಾತ ಸಿಕ್ಕಿದೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಇಷ್ಟು ದಿನ ಮೊದಲ ಸ್ಥಾನದಲ್ಲಿದ್ದ ಭಾರತ ಇದೀಗ ಎರಡನೇ ಸ್ಥಾನಕ್ಕೆ ಕುಸಿದಿದೆ. ಬಾಂಗ್ಲಾದೇಶದ ವಿರುದ್ಧದ ಸರಣಿ ಗೆದ್ದ ಬಳಿಕ 74.24 ಪಿಸಿಟಿ (ಗೆಲುವಿನ ಸರಾಸರಿ) ಹೊಂದಿದ್ಧ ಭಾರತ ಇದೀಗ 58.330 ಪಿಸಿಟಿ ಹೊಂದಿದ್ದು, ಎರಡನೇ ಸ್ಥಾನಕ್ಕೆ ಕುಸಿತ ಕಂಡಿದೆ.

62.500 ಪಿಸಿಟಿ ಹೊಂದಿರುವ ಆಸ್ಟ್ರೇಲಿಯಾ ಸದ್ಯ ಮೊದಲನೇ ಸ್ಥಾನಕ್ಕೇರಿದೆ. ಭಾರತ ಸರಣಿಯ ಕೊನೆಯ ಪಂದ್ಯ ಗೆದ್ದಿದ್ದರೆ ಮೊದಲನೇ ಸ್ಥಾನದಲ್ಲೇ ಉಳಿಯುತ್ತಿತ್ತು, ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಹಾದಿ ಕೂಡ ಸುಲಭವಾಗುತ್ತಿತ್ತು. ಆದರೆ ಭಾರತ 3 ಪಂದ್ಯಗಳನ್ನು ಸೋಲುವ ಮೂಲಕ ಮುಂದಿನ ಹಾದಿ ಮತ್ತಷ್ಟು ಕಠಿಣವಾಗಿದೆ.
ಭಾರತಕ್ಕೆ ಕಠಿಣ ಸವಾಲು
ನ್ಯೂಜಿಲೆಂಡ್ ವಿರುದ್ಧ ಸರಣಿ ಸೋತಿದ್ದು ಭಾರತಕ್ಕೆ ದುಬಾರಿಯಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪಲು ಭಾರತ ಕಠಿಣ ಸವಾಲು ಎದುರಿಸಬೇಕಾಗಿದೆ. ಭಾರತ ಆಸ್ಟ್ರೇಲಿಯಾ ವಿರುದ್ಧ 5 ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಆಡಲಿದ್ದು, ಈ ಸರಣಿಯಲ್ಲಿ 4 ಪಂದ್ಯಗಳನ್ನು ಗೆದ್ದು ಒಂದು ಪಂದ್ಯ ಡ್ರಾ ಮಾಡಿಕೊಂಡರೆ ಮಾತ್ರ ಭಾರತ ಯಾವುದೇ ತಂಡಗಳ ಫಲಿತಾಂಶಗಳ ಮೇಲೆ ಅವಲಂಬಿಸದೆ ಫೈನಲ್‌ಗೆ ಪ್ರವೇಶ ಪಡೆಯಲಿದೆ.
ಭಾರತ ಕನಿಷ್ಠ 2 ಪಂದ್ಯಗಳನ್ನು ಗೆದ್ದರೂ ಫೈನಲ್ ರೇಸ್‌ನಲ್ಲಿ ಉಳಿಯಲಿದೆ. ಆದರೆ ಉಳಿದ ತಂಡಗಳ ಸೋಲು ಗೆಲುವು ಭಾರತದ ಫೈನಲ್ ಅವಕಾಶವನ್ನು ನಿರ್ಧರಿಸಲಿವೆ. ಭಾರತ ಈ ಸರಣಿ ಸೋಲುವ ಮೂಲಕ ಈಗ ಐದು ತಂಡಗಳು ಫೈನಲ್ ರೇಸ್‌ನಲ್ಲಿವೆ.
ಭಾರತ, ಆಸ್ಟ್ರೇಲಿಯಾ ಜೊತೆಗೆ ಶ್ರೀಲಂಕಾ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ತಂಡಗಳು ಫೈನಲ್ ರೇಸ್‌ನಲ್ಲಿದ್ದು, ಫೈನಲ್ ತಲುಪಲು ಎಲ್ಲಾ ತಂಡಗಳಿಗೂ ಮುಂದಿನ ಪಂದ್ಯಗಳಲ್ಲಿ ಗೆಲ್ಲುವ ಅನಿವಾರ್ಯತೆ ಇದೆ. ಭಾರತ ಮತ್ತು ಆಸ್ಟ್ರೇಲಿಯಾ ಈ ರೇಸ್‌ನಲ್ಲಿ ಮುಂದಿದ್ದರೂ, ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಎರಡೂ ತಂಡಗಳ ಫೈನಲ್ ಸ್ಥಾನವನ್ನು ನಿರ್ಧರಿಸಲಿದೆ.
ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ಸರಣಿ ಸೋತ ಬಳಿಕ ರೋಹಿತ್ ಶರ್ಮಾ ಪ್ರತಿಕ್ರಿಯೆ ನೀಡಿದ್ದು, ಬೇಸರ ವ್ಯಕ್ತಪಡಿಸಿದ್ದಾರೆ. ತಾವು ನಿರೀಕ್ಷೆಗೆ ತಕ್ಕಂತೆ ಪ್ರದರ್ಶನ ನೀಡಿಲ್ಲ, ನಾನೂ ಕೂಡ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದೇನೆ ಎಂದು ಹೇಳಿದ್ದಾರೆ.
-
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications