Get Updates
Get notified of breaking news, exclusive insights, and must-see stories!

India vs South Africa: ಟಿ20 ವಿಶ್ವಕಪ್‌ ಫೈನಲ್‌; ಭಾರತ - ದಕ್ಷಿಣ ಆಫ್ರಿಕಾ ಮುಖಾಮುಖಿ

ಟಿ20 ವಿಶ್ವಕಪ್ ವೇದಿಕೆಯಲ್ಲಿ ಮತ್ತೊಮ್ಮೆ ಭಾರತ - ದಕ್ಷಿಣ ಆಫ್ರಿಕಾ ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಗಿವೆ. 2024ರ ಟಿ20 ವಿಶ್ವಕಪ್‌ನಲ್ಲಿ ಭಾರತದ ಪುರುಷರ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಫೈನಲ್‌ನಲ್ಲಿ ರೋಚಕ ಗೆಲುವು ಸಾಧಿಸಿ ವಿಶ್ವಕಪ್‌ ಗೆದ್ದು ಬೀಗಿತ್ತು. ಈಗ ಮತ್ತೊಮ್ಮೆ ಮಹಿಳಾ ತಂಡ ವಿಶ್ವಕಪ್ ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ.

ಕೌಲಾಲಂಪುರದಲ್ಲಿ ನಡೆಯುತ್ತಿರುವ ಅಂಡರ್ 19 ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಫೈನಲ್‌ಗೆ ಪ್ರವೇಶ ಪಡೆದುಕೊಂಡಿವೆ. ಎರಡೂ ತಂಡಗಳು ಕಪ್ ಗೆಲ್ಲುವ ವಿಶ್ವಾಸದಲ್ಲಿದ್ದು ಫೆಬ್ರವರಿ 2ರಂದು ಮುಖಾಮುಖಿಯಾಗಲಿವೆ.

india south africa icc u19 womens t20 world cup 2025

ಸೆಮಿಫೈನಲ್‌ನಲ್ಲಿ ಆಂಗ್ಲರ ವಿರುದ್ಧ ಗೆಲುವು

ಇಂದು (ಜನವರಿ 31, ಶುಕ್ರವಾರ) ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಇಂಗ್ಲೆಂಡ್ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಫೈನಲ್‌ಗೆ ಲಗ್ಗೆಯಿಟ್ಟಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 113 ರನ್ ಕಲೆಹಾಕಿತು.

ಪರುಣಿಕಾ ಸಿಸೋಡಿಯಾ ಮತ್ತು ವೈಷ್ಣವಿ ಶರ್ಮಾ ತಲಾ 3 ವಿಕೆಟ್ ಪಡೆಯುವ ಮೂಲಕ ಇಂಗ್ಲೆಂಡ್ ತಂಡವನ್ನು ಕಡಿಮೆ ಮೊತ್ತಕ್ಕೆ ಕಟ್ಟಿಹಾಕಲು ಕಾರಣವಾದರು. ಆಯುಷಿ ಶುಕ್ಲಾ 2 ವಿಕೆಟ್ ಪಡೆದುಕೊಂಡರು. ಗೊಂಗಾಡಿ ತ್ರಿಷಾ ಯಾವುದೇ ವಿಕೆಟ್ ಪಡೆಯದೇ ಇದ್ದರೂ 4 ಓವರ್ ಗಳಲ್ಲಿ ಕೇವಲ 18 ರನ್ ಬಿಟ್ಟುಕೊಟ್ಟು ಆಂಗ್ಲರ ರನ್ ಗಳಿಕೆಗೆ ಕಡಿವಾಣ ಹಾಕಿದರು.

9 ವಿಕೆಟ್‌ಗಳ ಭರ್ಜರಿ ಗೆಲುವು

114 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ 15 ಓವರ್ ಗಳಲ್ಲಿ ಒಂದು ವಿಕೆಟ್ ಕಳೆದುಕೊಂಡು 117 ರನ್ ಗಳಿಸುವ ಮೂಲಕ 9 ವಿಕೆಟ್‌ಗಳ ಭರ್ಜರಿ ಗೆಲುವಿನೊಂದಿಗೆ ಫೈನಲ್‌ಗೆ ಪ್ರವೇಶ ಪಡೆದುಕೊಂಡಿತು. ಜಿ ಕಮಲಿನಿ 50 ಎಸೆತಗಳಲ್ಲಿ 8 ಬೌಂಡರಿ ಮೂಲಕ ಅಜೇಯ 56 ರನ್ ಗಳಿಸಿದರೆ, ಗೊಂಗಾಡಿ ತ್ರಿಷಾ 29 ಎಸೆತಗಳಲ್ಲಿ 5 ಬೌಂಡರಿ ಸಹಿತ 35 ರನ್ ಗಳಿಸಿದರು. ಸನಿಕಾ ಚಾಕ್ಲೆ 12 ಎಸೆತಗಳಲ್ಲಿ 11 ರನ್ ಗಳಿಸಿದರು.

ಮತ್ತೊಂದು ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಫೈನಲ್‌ಗೆ ಪ್ರವೇಶಿಸಿದೆ. ಎರಡೂ ತಂಡಗಳು ಫೆಬ್ರವರಿ 2ರಂದು ಕೌಲಾಲಂಪುರದ ಬೇಮಸ್ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್‌ನಲ್ಲಿ ಮುಖಾಮುಖಿಯಾಗಲಿದ್ದು, ಚಾಂಪಿಯನ್ ಪಟ್ಟಕ್ಕಾಗಿ ಸೆಣೆಸಾಡಲಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+