IND vs AFG: ಅಫ್ಘಾನಿಸ್ತಾನ ಸರಣಿಗೆ ಟೀಂ ಇಂಡಿಯಾ ಪ್ರಕಟ: ಪಂತ್‌ಗೆ ಗೇಟ್‌ಪಾಸ್ ಕನ್ನಡಿಗನಿಗೆ ಉಪನಾಯಕನ ಪಟ್ಟ
India Squad for Afghanistan Series: ಅಫ್ಘಾನಿಸ್ತಾನ ವಿರುದ್ಧದ ಮುಂಬರುವ ಟೆಸ್ಟ್ ಮತ್ತು ಏಕದಿನ ಸರಣಿಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ (ಮೇ 19) ಬಲಿಷ್ಠ ತಂಡವನ್ನು ಘೋಷಣೆ ಮಾಡಿದೆ. ಈ ಆಯ್ಕೆಯಲ್ಲಿ ಕೆಲವು ಅಚ್ಚರಿಯ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಟೆಸ್ಟ್ ತಂಡದ ಉಪನಾಯಕನ ಸ್ಥಾನದಿಂದ ರಿಷಭ್ ಪಂತ್ ಅವರನ್ನು ಕೈಬಿಡಲಾಗಿದ್ದು, ಕರ್ನಾಟಕದ ಸ್ಟಾರ್ ಆಟಗಾರನನ್ನು ಆಯ್ಕೆ ಮಾಡಲಾಗಿದೆ.
ಈ ಸರಣಿಯ ಪ್ರಮುಖ ಆಕರ್ಷಣೆ ಎಂದರೆ ತಂಡದಲ್ಲಿ ಕರ್ನಾಟಕದ ಆಟಗಾರನಿಗೆ ಸಿಕ್ಕಿರುವ ಉಪನಾಯಕನ ಸ್ಥಾನ. ದೇಶೀಯ ಕ್ರಿಕೆಟ್‌ನಲ್ಲಿ ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತಿರುವ ಕನ್ನಡಿಗನಿಗೆ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ಶಕ್ತಿ ಪ್ರದರ್ಶಿಸಲು ಬಿಸಿಸಿಐ ದೊಡ್ಡ ವೇದಿಕೆ ಕಲ್ಪಿಸಿಕೊಟ್ಟಿದೆ. ಇದು ಕರ್ನಾಟಕದ ಕ್ರಿಕೆಟ್ ಅಭಿಮಾನಿಗಳಲ್ಲಿ ಸಂಭ್ರಮ ಮೂಡಿಸಿದೆ.

ಉಪನಾಯಕನ ಸ್ಥಾನದಿಂದ ಕೆಳಗಿಳಿದ ಪಂತ್
ಇದೀಗ ನಡೆಯುತ್ತಿರುವ ಐಪಿಎಲ್‌ನಲ್ಲಿ ಸತತ ಬ್ಯಾಟಿಂಗ್‌ನಲ್ಲಿ ಮಿಂಚದೆ ಕಳಪೆ ಫಾರ್ಮ್‌ಲ್ಲಿರುವ ರಿಷಭ್ ಪಂತ್ ಅವರನ್ನು ಉಪನಾಯಕ ಸ್ಥಾನದಿಂದ ತೆಗೆದುಹಾಕಲಾಗಿದೆ. ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರಿಗೆ ಇಡೀ ಸರಣಿಗೆ ವಿಶ್ರಾಂತಿ ನೀಡಲಾಗಿದೆ. ಅಲ್ಲದೆ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಕೂಡ ಎರಡೂ ಸರಣಿಗಳಿಂದ ಹೊರಗಿಡಲಾಗಿದೆ.
ಕನ್ನಡಿಗನಿಗೆ ಟೆಸ್ಟ್ ತಂಡದ ಉಪನಾಯಕನ ಪಟ್ಟ
ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯವನ್ನು ಶುಭ್‌ಮನ್ ಗಿಲ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಕನ್ನಡಿಗ ಕೆಎಲ್ ರಾಹುಲ್ ಅವರನ್ನು ಉಪನಾಯಕನನ್ನಾಗಿ ಆಯ್ಕೆ ಮಾಡಿದೆ. ಇನ್ನು ಯುವ ಸ್ಟಾರ್ ಆಟಗಾರ ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.
ದೇವದತ್ ಪಡಿಕ್ಕಲ್‌ಗೆ ಅವಕಾಶ
ಮತ್ತೊಂದೆಡೆ ಟೆಸ್ಟ್ ತಂಡಕ್ಕೆ ವೇಗಿ ಮೊಹಮ್ಮದ್ ಸಿರಾಜ್ ಹಾಗೂ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಮರಳಿದ್ದಾರೆ. ವಿಶೇಷ ಅಂದ್ರೆ ಕರ್ನಾಟಕದ ಸ್ಟಾರ್ ಬ್ಯಾಟರ್ ದೇವದತ್ ಪಡಿಕ್ಕಲ್ ಅವರಿಗೂ ಟೆಸ್ಟ್ ತಂಡದಲ್ಲಿ ಅವಕಾಶ ನೀಡಲಾಗಿದೆ. ಜೊತೆಗೆ ಯುವ ಬೌಲರ್‌ಗಳಾದ ಗುರ್ನೂರ್ ಬ್ರಾರ್ ಮತ್ತು ಹರ್ಷ್ ದುಬೆ ಅವರು ಮೊದಲ ಬಾರಿಗೆ ಟೆಸ್ಟ್ ತಂಡಕ್ಕೆ ಆಯ್ಕೆಯಾಗುವ ಮೂಲಕ ಗಮನ ಸೆಳೆದಿದ್ದಾರೆ.
ಏಕದಿನ ಸರಣಿಗೆ ಪ್ರಿನ್ಸ್ ಯಾದವ್ ಆಯ್ಕೆ
ಏಕದಿನ ಸರಣಿಗೆ ಐಪಿಎಲ್‌ನಲ್ಲಿ ಮಿಂಚುತ್ತಿರುವ ಪ್ರಿನ್ಸ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದ್ದು, ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ರಿಷಭ್ ಪಂತ್ ಅವರನ್ನು ಕೈಬಿಡಲಾಗಿದ್ದು, ಶ್ರೇಯಸ್ ಅಯ್ಯರ್ ಅವರನ್ನು ಉಪನಾಯಕನನ್ನಾಗಿ ನೇಮಿಸಲಾಗಿದೆ. ಏಕದಿನ ತಂಡದಲ್ಲೂ ಗುರ್ನೂರ್ ಬ್ರಾರ್ ಹಾಗೂ ಹರ್ಷ್ ದುಬೆಗೆ ಅವಕಾಶ ನೀಡಲಾಗಿದೆ. ಜಡೇಜಾರನ್ನ ಎರಡೂ ತಂಡಗಳಿಂದ ಕೈಬಿಡಲಾಗಿದೆ.
ರೋ-ಕೊ ಮುಂದುವರಿಕೆ, ಜಡೇಜಾ ಔಟ್
ಇನ್ನೂ ಅನುಭವಿಗಳಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ಏಕದಿನ ಸರಣಿಯಲ್ಲಿ ಮುಂದುವರಿಯಲಿದ್ದಾರೆ. ಆದರೆ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರನ್ನು ಟೆಸ್ಟ್ ಮತ್ತು ಏಕದಿನ ಎರಡೂ ತಂಡಗಳಿಂದ ಕೈಬಿಟ್ಟಿರುವುದು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.
ಟೆಸ್ಟ್ ತಂಡದಲ್ಲಿ ಮೂವರು ಕನ್ನಡಿಗರು
* ಕೆಎಲ್ ರಾಹುಲ್ (ಉಪನಾಯಕ)
* ದೇವದತ್ ಪಡಿಕ್ಕಲ್
* ಪ್ರಸಿದ್ಧ್ ಕೃಷ್ಣ
ಭಾರತ ಟೆಸ್ಟ್ ತಂಡ
ಶುಭ್‌ನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ (ಉಪನಾಯಕ), ಸಾಯಿ ಸುದರ್ಶನ್, ರಿಷಭ್ ಪಂತ್, ದೇವದತ್ ಪಡಿಕ್ಕಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್‌ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಮಾನವ್ ಸುತಾರ್, ಹರ್ಷ್ ದುಬೆ, ಗುರ್ನೂರ್ ಬ್ರಾರ್, ಧ್ರುವ್ ಜುರೆಲ್.
ಭಾರತ ಏಕದಿನ (ODI) ತಂಡ
ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ನಿತೀಶ್ ರೆಡ್ಡಿ, ವಾಷಿಂಗ್‌ಟನ್ ಸುಂದರ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್, ಪ್ರಸಿದ್ಧ್ ಕೃಷ್ಣ, ಹರ್ಷ್ ದುಬೆ, ಗುರ್ನೂರ್ ಬ್ರಾರ್.












Click it and Unblock the Notifications