Ind vs SA T20: ದಕ್ಷಿಣ ಆಫ್ರಿಕಾ ಟಿ20 ಸರಣಿಗೆ ಭಾರತ ತಂಡ; ಕನ್ನಡಿಗ ವೈಶಾಖ್‌ಗೆ ಅವಕಾಶ

ನವೆಂಬರ್ 8ರಿಂದ ಆರಂಭವಾಗಲಿರು ದಕ್ಷಿಣ ಆಫ್ರಿಕಾ ವಿರುದ್ದದ ನಾಲ್ಕು ಪಂದ್ಯ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಶುಕ್ರವಾರ ರಾತ್ರಿ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಜೊತೆಗೆ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಗೆ ಕೂಡ ತಂಡವನ್ನು ಆಯ್ಕೆ ಮಾಡಲಾಗಿದೆ. ಟಿ20 ಸರಣಿಗೆ ಭಾರತ ತಂಡದಲ್ಲಿ ಕನ್ನಡಿಗ ಮತ್ತು ಆರ್ ಸಿಬಿ ವೇಗಿ ವಿಜಯ್‌ಕುಮಾರ್ ವೈಶಾಖ್ ಅವಕಾಶ ಪಡೆದುಕೊಂಡಿದ್ದಾರೆ.

ಅನುಭವಿ ಆಟಗಾರರ ಜೊತೆ ಹೊಸ ಮುಖಗಳಿಗೆ ಕೂಡ ಅವಕಾಶ ನೀಡಲಾಗಿದೆ. ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ಮತ್ತು ಸಂಜು ಸ್ಯಾಮ್ಸನ್ ಅವರಂತಹ ಅನುಭವಿ ಆಟಗಾರರ ಜೊತೆ ತಿಲಕ್ ವರ್ಮಾ, ರಿಂಕು ಸಿಂಗ್ ಮಿಂಚಲು ಸಜ್ಜಾಗಿದ್ದಾರೆ. ರಮಣದೀಪ್ ಸಿಂಗ್ ಮತ್ತು ವಿಜಯ್‌ಕುಮಾರ್ ವೈಶಾಖ್ ಅವರಿಗೆ ಮೊದಲ ಬಾರಿಗೆ ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ.

india t20 series squad south africa vijaykumar vyshak debut

ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯನ್ನು 3-0 ಅಂತರದಲ್ಲಿ ಗೆದ್ದಿಕೊಂಡಿರುವ ಭಾರತ ಆತ್ಮವಿಶ್ವಾಸದಿಂದಲೇ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯನ್ನು ಆಡಲು ಎದುರು ನೋಡುತ್ತಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮತ್ತು ಭಾರತ ಎ ತಂಡದಲ್ಲಿ ಉತ್ತಮ ಪ್ರದರ್ಶನ ನೀಡಿದ ಬಳಿಕ ರಮಣದೀಪ್ ಸಿಂಗ್ ಮತ್ತು ವಿಜಯ್‌ಕುಮಾರ್ ವೈಶಾಖ್ ಅವರಿಗೆ ಭಾರತ ತಂಡದಲ್ಲಿ ಅವಕಾಶ ಸಿಕ್ಕಿದೆ.

ಟಿ20 ಸರಣಿಗೆ ಭಾರತ ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಮಣದೀಪ್ ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಅರ್ಶದೀಪ್ ಸಿಂಗ್ ವಿಜಯ್‌ಕುಮಾರ್ ವೈಶಾಕ್, ಅವೇಶ್ ಖಾನ್, ಯಶ್ ದಯಾಳ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+