India T20 World Cup Squad: ಟಿ-20 ವಿಶ್ವಕಪ್‌ಗೆ ಟೀಂ ಇಂಡಿಯಾ ಪ್ರಕಟ: ಶಭ್‌ಮನ್ ಗಿಲ್ ಔಟ್
India T20 World Cup Squad Announcement: ಕಾತರದಿಂದ ಕಾಯುತ್ತಿದ್ದ ಟಿ 20 ವಿಶ್ವಕಪ್‌ಗೆ ಬಿಸಿಸಿಐ ಶನಿವಾರ (ಡಿಸೆಂಬರ್ 20) ತಂಡ ಪ್ರಕಟಿಸಿದೆ. ಶುಭಮನ್ ಗಿಲ್ ಹೊರಗುಳಿದಿದ್ದು, ಸೂರ್ಯ ಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಹಾಗಾದ್ರೆ ಯಾರೆಲ್ಲಾ ಈ ಪಟ್ಟಿಯಲ್ಲಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮುಂದಿನ ವರ್ಷ ನಡೆಯಲಿರುವ ಪುರುಷರ ಟಿ-20 ವಿಶ್ವಕಪ್ ಮತ್ತು ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ-20 ಸರಣಿಗಾಗಿ ಭಾರತದ 15 ಸದಸ್ಯರ ತಂಡದಲ್ಲಿ ಇಶಾನ್ ಕಿಶನ್ ಮತ್ತು ರಿಂಕು ಸಿಂಗ್ ಸ್ಥಾನ ಪಡೆದಿದ್ದಾರೆ. ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದು, ಅಕ್ಷರ್ ಪಟೇಲ್ ಅವರನ್ನು ಉಪನಾಯಕರನ್ನಾಗಿ ನೇಮಕ ಮಾಡಲಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಯವರೆಗೆ ತಂಡದ ಉಪನಾಯಕರಾಗಿದ್ದ ಶುಭಮನ್ ಗಿಲ್ ಮತ್ತು ಜಿತೇಶ್ ಶರ್ಮಾ ಅವರು ತಂಡದಿಂದ ಹೊರಗುಳಿದಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಅವರು ಡಿಸೆಂಬರ್ 20ರ ಶನಿವಾರ ಮುಂಬೈನ ಬಿಸಿಸಿಐ ಪ್ರಧಾನ ಕಚೇರಿಯಲ್ಲಿ 15 ಜನರ ತಂಡವನ್ನು ಘೋಷಣೆ ಮಾಡಿದರು.
ತಂಡದಲ್ಲಿ ಯಾರೆಲ್ಲಾ ಇದ್ದಾರೆ?: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಸರ್ ಪಟೇಲ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್.
🚨India’s squad for ICC Men’s T20 World Cup 2026 announced 🚨
— BCCI (@BCCI) December 20, 2025
Let's cheer for the defending champions 💪#TeamIndia | #MenInBlue | #T20WorldCup pic.twitter.com/7CpjGh60vk
2026 ಫೆಬ್ರವರಿ 7ರಿಂದ ಪ್ರಾರಂಭ ಆಗುವ ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟ ಮಾಡಲಾಗಿದೆ. ಮುಂಬೈನಲ್ಲಿ ಶನಿವಾರ ಬಿಸಿಸಿಐ ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್ ಅಗರ್ಕರ್ ಹಾಗೂ ಸೂರ್ಯಕುಮಾರ್ ಯಾದವ್ ಸಭೆ ನಡೆಸಿದ ಬಳಿಕ ಈ ನಿರ್ಧಾರವನ್ನು ಘೋಷಣೆ ಮಾಡಿದ್ದಾರೆ.
ಸ್ಪೋಟಕ ಯುವ ಬ್ಯಾಟರ್ ಆಗಿರುವ ಅಭಿಷೇಕ್ ಶರ್ಮಾ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅಲ್ಲದೆ, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ ಸಹ ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಂಡಿದ್ದಾರೆ. ತಂಡದಿಂದ ಜಿತೇಶ್ ಶರ್ಮಾ ಹಾಗೂ ಇತ್ತೀಚಿನ ದಿನಗಳಲ್ಲಿ ಕಳಪೆ ಪ್ರದರ್ಶನ ತೋರಿರುವ ಶುಭಮನ್ ಗಿಲ್ ಅವರನ್ನು ಹೊರಗಿಡಲಾಗಿದೆ. ಇನ್ನೂ ಸೈಯದ್ ಮುಷ್ತಾಕ್ ಅಲಿ ಟಿ-20 ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಇಶಾನ್ ಕಿಶನ್‌ಗೆ ಅವಕಾಶ ನೀಡಲಾಗಿದೆ.
ರಿಂಕು ಸಿಂಗ್ ಅವರಿಗೂ ತಂಡದಲ್ಲಿ ಸ್ಥಾನ ನೀಡಲಾಗಿದೆ. ಉಳಿದಂತೆ ಆಲ್ ರೌಂಡರ್‌ಗಳಾಗಿ ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್ ಅವರು ಕೂಡ ಇದ್ದಾರೆ. ಬೌಲರ್ ವಿಭಾಗದಲ್ಲಿ ಜಸ್ಪ್ರೀತ್ ಬೂಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಅಸಮಾಧಾನಕರ ಸಂಗತಿಯೆಂದರೆ ಈ ಪಟ್ಟಿಯಲ್ಲಿ ಯಾವೊಬ್ಬ ಕನ್ನಡಿಗರ ಹೆಸರು ಇಲ್ಲದಿರುವದು. ಕರ್ನಾಟಕದ ಕೆ.ಎಲ್.ರಾಹುಲ್ ಹಾಗೂ ದೇವದತ್ ಪಡಿಕ್ಕಲ್ ಅವರನ್ನು ಕೈಬಿಟ್ಟಿರುವುದು ಇದೀಗ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಉತ್ತಮ ಫಾರ್ಮ್‌ನಲ್ಲಿದ್ದರೂ ಸಹ ಇವರಿಗೆ ಸ್ಥಾನ ನೀಡಿಲ್ಲ ಎನ್ನುವ ಆಕ್ರೋಶಗಳು ವ್ಯಕ್ತವಾಗಿವೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications