Piyush Chawla: ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಪಿಯೂಷ್ ಚಾವ್ಲಾ ವಿದಾಯ ಘೋಷಣೆ
Piyush Chawla: ಭಾರತ ಕ್ರಿಕೆಟ್ ತಂಡದ ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ ಅವರು ತಮ್ಮ 36ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಇಂದು (ಜೂನ್ 6) ವಿದಾಯ ಘೋಷಿಸಿದ್ದಾರೆ.
ಇತ್ತೀಚೆಗಷ್ಟೇ ಭಾರತ ತಂಡದ ಸ್ಪೋಟಕ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರು ಟೆಸ್ಟ್ ಕ್ರಿಕೆಟ್‌ಗೆ ಗುಡ್ ಬೈ ಹೇಳಿ ಬಿಸಿಸಿಐಗೆ ಬಿಗ್ ಶಾಕ್ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ ಅವರು ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಇಂದು ನಿವೃತ್ತಿ ಘೋಷಣೆ ಮಾಡಿದರು.

37 ವರ್ಷದ ಪಿಯೂಷ್ ಚಾವ್ಲಾ ಅವರು, ಸಾಮಾಜಿಕ ಜಾಲತಾಣದ ಭಾಗವಾದ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡುವುದಾಗಿ ತಿಳಿಸಿದ್ದಾರೆ. ಎರಡು ದಶಕಗಳ ಕಾಲ ಮೈದಾನದಲ್ಲಿ ಆಟವನ್ನು ಆನಂದಿಸಿ ಆಡಿದ್ದೇನೆ. ಇದೀಗ ವಿದಾಯ ಹೇಳುವ ಸಮಯ ಬಂದಿದೆ. ತಮ್ಮ ವೃತ್ತಿಜೀವನದುದ್ದಕ್ಕೂ ಬೆಂಬಲ ನೀಡಿದ ತರಬೇತುದಾರರು, ಕುಟುಂಬ ಮತ್ತು ಕ್ರಿಕೆಟ್ ಸಂಸ್ಥೆಗಳಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ಚಾವ್ಲಾ ಅವರು ಬರೆದುಕೊಂಡಿದ್ದಾರೆ.
2007ರ ಟಿ-20 ವಿಶ್ವಕಪ್ ಮತ್ತು 2011ರ ಏಕದಿನ ವಿಶ್ವಕಪ್‌ನಲ್ಲಿ ಭಾರತ ಗೆದ್ದ ವೇಳೆ, ಇವರು ಕೂಡ ತಂಡದ ಭಾಗವಾಗಿದ್ದರು. ಅವರು 3 ಟೆಸ್ಟ್, 25 ಏಕದಿನ ಮತ್ತು 7 ಟಿ-20 ಪಂದ್ಯಗಳಲ್ಲಿ ಆಡಿದ್ದಾರೆ. ಈ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲೂ ಒಟ್ಟು 43 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ, ಚಾವ್ಲಾ ಗುಜರಾತ್ ಪರ ಪ್ರಮುಖ ಆಟಗಾರರಾಗಿದ್ದರು.
ಪಿಯೂಷ್ ಚಾವ್ಲಾ ಅವರು ಐಪಿಎಲ್‌ನಲ್ಲಿ ಒಟ್ಟು 4 ತಂಡಗಳ ಪರ ಆಟ ಆಡಿದ್ದಾರೆ. ಪಂಜಾಬ್ ಕಿಂಗ್ಸ್ (PBKS), ಕೊಲ್ಕತ್ತಾ ನೈಟ್ ರೈಡರ್ಸ್ (KKR), ಚೆನ್ನೈ ಸೂಪರ್ ಕಿಂಗ್ (CSK) ಹಾಗೂ ಮುಂಬೈ ಇಂಡಿಯನ್ಸ್ (MI) ಪರ ಒಟ್ಟು 192 ಪಂದ್ಯಗಳನ್ನಾಡಿದ್ದು, 192 ವಿಕೆಟ್‌ಗಳನ್ನು ಪಿಯೂಷ್ ಚಾವ್ಲಾ ಅವರು ಕಬಳಿಸಿದ್ದಾರೆ.
ಇತ್ತೀಚೆಗಷ್ಟೇ ಭಾರತ ಕ್ರಿಕೆಟ್ ತಂಡದ ಇಬ್ಬರು ದಿಗ್ಗಜರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಗೋಷಣೆ ಮಾಡಿದ್ದರು. ಬಳಿಕ ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಏಕದಿನ ಕ್ರಿಕೆಟ್ ಗುಡ್ ಬೈ ಹೇಳಿದರೆ, ದಕ್ಷಿಣ ಆಫ್ರಿಕಾದ ಸ್ಫೋಟಕ ದಾಂಡಿಗ ಹೆನ್ರಿಕ್ ಕ್ಲಾಸೆನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. ಇದಾದ ಬೆನ್ನಲ್ಲೇ ಇದೀಗ ಇದೀಗ ಭಾರತ ಕ್ರಿಕೆಟ್ ತಂಡದ ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿ ಅಚ್ಚರಿ ಮೂಡಿಸಿದ್ದಾರೆ.












Click it and Unblock the Notifications