ಜಿಂಬಾಬ್ವೆ ವಿರುದ್ಧದ ಸರಣಿಗೆ ನಾಯಕನಾಗಿ ಲೋಕೇಶ್ ರಾಹುಲ್?
ನವದೆಹಲಿ, ಜುಲೈ 20: ಟೀಂ ಇಂಡಿಯಾ ಮುಂದಿನ ತಿಂಗಳು ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದೆ. ಸದ್ಯ ಒಂದು ತಂದ ವೆಸ್ಟ್ ಇಂಡೀಸ್ ಪ್ರವಾಸದಲ್ಲಿದ್ದು, ಶಿಖರ್ ಧವನ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಮೂಲಗಳ ಪ್ರಕಾರ ಜಿಂಬಾಬ್ವೆ ಸರಣಿಗೆ ಆಯ್ಕೆಯಾಗುವ ತಂಡವನ್ನು ಕನ್ನಡಿಗ ಲೋಕೇಶ್ ರಾಹುಲ್ ಮುನ್ನಡೆಸುವ ಸಾಧ್ಯತೆಯಿದೆ ಎಂಬ ಸುದ್ದಿಯಿದೆ.
ಸದ್ಯ ಗಾಯಾಳುವಾಗಿರುವ ರಾಹುಲ್ ವಿಶ್ರಾಂತಿ ಪಡೆದುಕೊಂಡಿದ್ದು, ಎನ್ ಸಿ ಎ ಅಂಗಳದಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ವಿಶ್ವಕಪ್ ವೇಳೆಗೆ ಟೀಂ ಇಂಡಿಯಾಕ್ಕೆ ಮರಳುವ ವಿಶ್ವಾಸ ಹೊಂದಿದ್ದಾರೆ. ಐಪಿಎಲ್ 2022ರ ಸೀಸನ್‌ನಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಮುನ್ನಡೆಸಿದ್ದ ಕೆ.ಎಲ್ ರಾಹುಲ್, ನಂತರ ಇಂಗ್ಲೆಂಡ್ ಸರಣಿಗೂ ತಂಡದಿಂದ ಹೊರಗುಳಿದಿದ್ದರು. ಸದ್ಯ ಜರ್ಮನಿಯಲ್ಲಿ ಸರ್ಜರಿ ಯಶಸ್ವಿಯಾಗಿದ್ದು, ತಂಡಕ್ಕೆ ಸೇರಲು ಸಜ್ಜಾಗಿದ್ದಾರೆ.
ರಾಹುಲ್ ಮತ್ತು ಕುಲದೀಪ್ ಫಿಟ್‌ನೆಸ್ ಸಾಬೀತು ಪಡಿಸಿದ ನಂತರವಷ್ಟೇ ತಂಡಕ್ಕೆ ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಸ್ಪಷ್ಟಪಡಿಸಿತ್ತು. ವಿಂಡೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಘೋಷಿಸಲಾಗಿದ್ದು, ಶಿಖರ್ ಧವನ್ ತಂಡದ ನಾಯಕನಾಗಿ ಆಯ್ಕೆಯಾಗಿದ್ದಾರೆ.

ಆಲ್‌ರೌಂಡರ್ ರವೀಂದ್ರ ಜಡೇಜಾರ ಉಪನಾಯಕರಾಗಿದ್ದಾರೆ. ಈ ತಂಡದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದೆ. ಕೆಎಲ್ ರಾಹುಲ್ ಕೂಡಾ ಫಿಟ್ನೆಸ್ ಸಾಬೀತು ಪಡಿಸಿದ ಬಳಿಕ ಟಿ20ಐ ತಂಡ ಸೇರಿಕೊಳ್ಳುವ ಸಾಧ್ಯತೆಯಿದೆ.
ಆಗಸ್ಟ್ ತಿಂಗಳಲ್ಲಿ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿರುವ ತಂಡ ಮೂರು ಪಂದ್ಯಗಳ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಲಿದೆ. ಆಗಸ್ಟ್ 18, 20 ಹಾಗೂ 22 ರಂದು ಪಂದ್ಯಾವಳಿ ನಿಗದಿಯಾಗಿದೆ. ಎಲ್ಲಾ ಪಂದ್ಯಗಳು ಹರಾರೆಯಲ್ಲಿ ನಡೆಯಲಿದೆ ಎಂದು ಜಿಂಬಾಬ್ವೆ ಕ್ರಿಕೆಟ್ ಮಂಡಳಿ ತಿಳಿಸಿದೆ.
ಈ ಸರಣಿಯು ಐಸಿಸಿ ಕ್ರಿಕೆಟ್ ವಿಶ್ವಕಪ್ ಸೂಪರ್ ಲೀಗ್‌ನ ಭಾಗವಾಗಿದೆ, 13-ತಂಡಗಳ ಸ್ಪರ್ಧೆಯು ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ 50-ಓವರ್‌ಗಳ ವಿಶ್ವಕಪ್‌ಗೆ ನೇರ ಅರ್ಹತೆಗಾಗಿ ಮುಖ್ಯ ಮಾರ್ಗವಾಗಿದೆ.
ಜಿಂಬಾಬ್ವೆ ಪ್ರಸ್ತುತ 13 ತಂಡಗಳ ಪೂಲ್‌ನಲ್ಲಿ 15 ಪಂದ್ಯಗಳಲ್ಲಿ ಕೇವಲ ಮೂರು ಗೆಲುವುಗಳೊಂದಿಗೆ 12 ನೇ ಸ್ಥಾನದಲ್ಲಿದೆ. ಮಹೇಂದ್ರ ಸಿಂಗ್ ಧೋನಿ ನೇತೃತ್ವದ ತಂಡವು ಜೂನ್-ಜುಲೈ 2016 ರಲ್ಲಿ ಜಿಂಬಾಬ್ವೆ ಪ್ರವಾಸ ಕೈಗೊಂಡು ಮೂರು ODIಗಳು ಮತ್ತು ಅನೇಕ T20I ಗಳನ್ನು ಆಡಿದ್ದನ್ನು ಇಲ್ಲಿಸ್ಮರಿಸಬಹುದು.
ಭಾರತವು ಇತ್ತೀಚೆಗಷ್ಟೇ ಇಂಗ್ಲೆಂಡ್ ಪ್ರವಾಸವನ್ನು ಟಿ20ಐ ಮತ್ತು ಏಕದಿನ ಸರಣಿ ವಿಜಯಗಳೊಂದಿಗೆ ಮುಗಿಸಿದೆ. ಶಿಖರ್ ಧವನ್ ನಾಯಕತ್ವದಲ್ಲಿ ಯುವ ಭಾರತೀಯ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ ಮತ್ತು ನಂತರ ಆಗಸ್ಟ್ 7 ರಂದು ಮುಕ್ತಾಯಗೊಳ್ಳುವ ಐದು T20I ಗಳನ್ನು ಆಡಲಿದೆ.
ಭಾರತ ವಿರುದ್ಧದ ಸರಣಿಗೂ ಮುನ್ನ ಬಾಂಗ್ಲಾದೇಶವನ್ನು ಜಿಂಬಾಬ್ವೆ ಎದುರಿಸಲಿದ್ದು, ಜುಲೈ 30 ರಿಂದ ಮೂರು T20 ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ. ನಂತರ ಆಗಸ್ಟ್ 28 ರಿಂದ ಮೂರು ಏಕದಿನ ಪಂದ್ಯಗಳನ್ನಾಡಲು ಆಸ್ಟ್ರೇಲಿಯಾಕ್ಕೆ ಪ್ರವಾಸ ಕೈಗೊಳ್ಳಲಿದೆ. (ಪಿಟಿಐ)












Click it and Unblock the Notifications