Get Updates
Get notified of breaking news, exclusive insights, and must-see stories!

India Vs England 5th Test: ಬುಮ್ರಾ ವಾಪಸ್; 5ನೇ ಟೆಸ್ಟ್‌ಗೆ ಭಾರತ ತಂಡ ಪ್ರಕಟ

ಧರ್ಮಶಾಲಾದಲ್ಲಿ ಇಂಗ್ಲೆಂಡ್ ವಿರುದ್ಧದ ಐದನೇ ಮತ್ತು ಅಂತಿಮ ಟೆಸ್ಟ್‌ಗೆ ಪರಿಷ್ಕೃತ ಭಾರತ ತಂಡವನ್ನು ಬಿಸಿಸಿಐ ಗುರುವಾರ ಪ್ರಕಟಿಸಿದೆ. ರಾಂಚಿಯಲ್ಲಿ ನಡೆದ ನಾಲ್ಕನೇ ಟೆಸ್ಟ್‌ ಪಂದ್ಯಿಂದ ವಿಶ್ರಾಂತಿ ಪಡೆದಿದ್ದ ವೇಗದ ಬೌಲರ್ ಧರ್ಮಶಾಲಾದಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.

ಬುಮ್ರಾ ಅವರ ಕೆಲಸದ ಹೊರೆಯನ್ನು ನಿರ್ವಹಿಸಲು ರಾಂಚಿಯಲ್ಲಿ ನಡೆದ ನಾಲ್ಕನೇ ಟೆಸ್ಟ್‌ನಿಂದ ವಿಶ್ರಾಂತಿ ಪಡೆದರು. ಕಳೆದ ಪಂದ್ಯದಲ್ಲಿ ಚೊಚ್ಚಲ ಪಂದ್ಯವನ್ನಾಡಿದ ಆಕಾಶ್ ದೀಪ್ ಬದಲಿಗೆ ವೇಗದ ಬೌಲರ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಆಡಲಿದ್ದಾರೆ.

 India Unveils Squad for 5th Test Clash Against England in Dharamsala

ಅನುಭವಿ ಬ್ಯಾಟರ್ ಕೆಎಲ್ ರಾಹುಲ್ 5ನೇ ಟೆಸ್ಟ್‌ ಪಂದ್ಯವನ್ನು ಕಳೆದುಕೊಳ್ಳಲಿದ್ದಾರೆ. ಮೊದಲ ಪಂದ್ಯವನ್ನಾಡಿದ ಬಳಿಕ ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದರು. ಈಗ ವೈದ್ಯರ ಭೇಟಿಗಾಗಿ ಲಂಡನ್‌ಗೆ ತೆರಳಿದ್ದು ಅವರು ಸರಣಿಯನ್ನು ಕಳೆದುಕೊಳ್ಳಲಿದ್ದಾರೆ.

ಅಂತಿಮ ಟೆಸ್ಟ್‌ನಲ್ಲಿ ಫಿಟ್‌ನೆಸ್‌ಗೆ ಒಳಪಟ್ಟಿರುವ ಕೆಎಲ್ ರಾಹುಲ್ ಅವರನ್ನು ಧರ್ಮಶಾಲಾದಲ್ಲಿ ಐದನೇ ಮತ್ತು ಅಂತಿಮ ಟೆಸ್ಟ್‌ನಿಂದ ಹೊರಗಿಡಲಾಗಿದೆ. ಬಿಸಿಸಿಐ ವೈದ್ಯಕೀಯ ತಂಡವು ಅವರನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಅವರ ಸಮಸ್ಯೆಯ ಹೆಚ್ಚಿನ ನಿರ್ವಹಣೆಗಾಗಿ ಲಂಡನ್‌ನಲ್ಲಿರುವ ತಜ್ಞರೊಂದಿಗೆ ಸಮನ್ವಯ ಸಾಧಿಸುತ್ತಿದೆ ಎಂದು ಬಿಸಿಸಿಐ ಹೇಳಿದೆ.

ರಾಹುಲ್ ಅನುಪಸ್ಥಿತಿಯಲ್ಲಿ ಕಳೆದ ಮೂರು ಟೆಸ್ಟ್‌ಗಳಲ್ಲಿ ರಜತ್ ಪಾಟಿದಾರ್ ನಂ.4 ರಲ್ಲಿ ಬ್ಯಾಟಿಂಗ್ ಮಾಡುತ್ತಿದ್ದರು ಆದರೆ ಅವರಿಂದ ಉತ್ತಮ ಪ್ರದರ್ಶನ ಬರಲಿಲ್ಲ. ಆದರೂ ಅವರು 5ನೇ ಟೆಸ್ಟ್‌ಗೆ ತಂಡದಲ್ಲಿ ಉಳಿಕೊಂಡಿದ್ದಾರೆ. ತಂಡದಲ್ಲಿರುವ ಕನ್ನಡಿಗೆ ದೇವದತ್ ಪಡಿಕ್ಕಲ್ ಅವರು ಪಾಟಿದಾರ್ ಬದಲಿಗೆ 5ನೇ ಟೆಸ್ಟ್‌ನಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಒಂದು ವೇಳೆ ಪಡಿಕ್ಕಲ್ 5ನೇ ಟೆಸ್ಟ್ ಪಂದ್ಯದಲ್ಲಿ ಆಡಿದರೆ, ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ ಮತ್ತು ಆಕಾಶ್ ದೀಪ್ ಬಳಿಕ ನಡೆಯುತ್ತಿರುವ ಸರಣಿಯ ಐದನೇ ಭಾರತೀಯ ಚೊಚ್ಚಲ ಆಟಗಾರನಾಗಲಿದ್ದಾರೆ.

ಆಫ್ ಸ್ಪಿನ್ ಬೌಲಿಂಗ್ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ರಣಜಿ ಟ್ರೋಫಿ ಸೆಮಿಫೈನಲ್‌ನಲ್ಲಿ ಭಾಗವಹಿಸಲು ತಂಡದಿಂದ ಬಿಡುಗಡೆ ಮಾಡಲಾಗಿದೆ. ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಮತ್ತು ಕುಲದೀಪ್ ಯಾದವ್ ಅವರ ಉಪಸ್ಥಿತಿಯನ್ನು ಪರಿಗಣಿಸಿ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದೆ. ರಣಜಿ ಟ್ರೋಫಿ ಸೆಮಿ-ಫೈನಲ್ ಪಂದ್ಯದಲ್ಲಿ ವಾಷಿಂಗ್ಟನ್ ಸುಂದರ್ ತಮಿಳುನಾಡು ತಂಡಕ್ಕಾಗಿ ಆಡುತ್ತಾರೆ.

ಮೊಹಮ್ಮದ್ ಶಮಿ ತಮ್ಮ ಬಲ ಹಿಮ್ಮಡಿ ಸಮಸ್ಯೆಗೆ ಫೆಬ್ರವರಿ 26 ರಂದು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಶೀಘ್ರದಲ್ಲೇ ತಮ್ಮ ಪುನರ್ವಸತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಗೆ ತೆರಳಲಿದ್ದಾರೆ.

5ನೇ ಟೆಸ್ಟ್‌ಗೆ ಭಾರತ ತಂಡ;

ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+