India vs Japan; ಜಪಾನ್ ವಿರುದ್ಧ 211 ರನ್‌ಗಳ ಬೃಹತ್ ಗೆಲುವು ಸಾಧಿಸಿದ ಭಾರತ
ಅಂಡರ್ 19 ಏಷ್ಯಾಕಪ್‌ನ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಸೋಲು ಕಂಡಿದ್ದ ಭಾರತ ಯುವ ಪಡೆ ಎರಡನೇ ಪಂದ್ಯದಲ್ಲಿ ಗೆಲುವಿನ ಲಯಕ್ಕೆ ಮರಳಿದೆ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತ ಜಪಾನ್ ವಿರುದ್ಧ 211 ರನ್‌ಗಳ ಬೃಹತ್ ಗೆಲುವು ಸಾಧಿಸಿದೆ. ನಾಯಕ ಮೊಹಮ್ಮದ್ ಅಮನ್‌ರ ಭರ್ಜರಿ ಶತಕ ಮತ್ತು ಭಾರತದ ಬಿಗಿಯಾದ ಬೌಲಿಂಗ್ ನೆರವಿನಿಂದ ಭರ್ಜರಿ ಜಯ ಗಳಿಸಿದ್ದು, ಸೆಮಿಫೈನಲ್ ತಲುಪುವ ಲೆಕ್ಕಾಚಾರದಲ್ಲಿದೆ.
ಟಾಸ್ ಗೆದ್ದ ಜಪಾನ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 339 ರನ್ ಗಳಿಸಿತು. ಆಯುಶ್ ಮ್ಹಾತ್ರೆ 29 ಎಸೆತಗಳಲ್ಲಿ 54 ರನ್ ಗಳಿಸುವ ಮೂಲಕ ಭಾರತಕ್ಕೆ ಸ್ಫೋಟಕ ಆರಂಭ ಒದಗಿಸಿದರು. ವೈಭವ್ ಸೂರ್ಯವಂಶಿ 24 ಎಸೆತಗಳಲ್ಲಿ 24 ರನ್ ಗಳಿಸಿದರು.

ಆಂಡ್ರೆ ಸಿದ್ಧಾರ್ಥ್ 35 ರನ್ ಗಳಿಸಿದರೆ, ನಾಯಕ ಮೊಹಮ್ಮದ್ ಅಮಾನ್ 118 ಎಸೆತಗಳಲ್ಲಿ 7 ಬೌಂಡರಿ ಸಹಿತ ಅಜೇಯ 122 ರನ್ ಗಳಿಸಿ ಭಾರತ ದೊಡ್ಡ ಮೊತ್ತ ಗಳಿಸಲು ಸಹಾಯಕವಾದರು. ಕೆಪಿ ಕಾರ್ತಿಕೇಯ 49 ಎಸೆತಗಳಲ್ಲಿ 57 ರನ್ ಗಳಿಸಿ ನಾಯಕನಿಗೆ ಜೊತೆಯಾದರು. ಹಾರ್ದಿಕ್ ರಾಜ್ 12 ಎಸೆತಗಳಲ್ಲಿ 25 ರನ್ ಗಳಿಸಿ ಮಿಂಚಿದರು. ಅಂತಿಮವಾಗಿ ಭಾರತ 50 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 339 ರನ್ ಕಲೆಹಾಕಿತು.
ರನ್ ಗಳಿಸಲು ಪರದಾಡಿದ ಜಪಾನ್
ಈ ಬೃಹತ್ ಸವಾಲನ್ನು ಬೆನ್ನತ್ತಿದ ಜಪಾನ್ ಭಾರತ ಬಿಗಿ ಬೌಲಿಂಗ್ ದಾಳಿಯ ಎದುರು ರನ್ ಗಳಿಸಲು ಪರದಾಡಿತು. ಹುಗೋ ಕೆಲ್ಲಿ 111 ಎಸೆತಗಳಲ್ಲಿ 50 ರನ್ ಗಳಿಸಿದರು. ಚಾರ್ಲ್ಸ್ ಹಿಂಜೆ 35 ರನ್ ಗಳಿಸಿದ್ದು ಬಿಟ್ಟರೆ ಉಳಿದ ಆಟಗಾರರಿಂದ ಹೆಚ್ಚಿನ ಮೊತ್ತ ಬರಲಿಲ್ಲ. ಅಂತಿಮವಾಗಿ 50 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 128 ರನ್ ಗಳಿಸಿದ ಜಪಾನ್ ಸೋಲೊಪ್ಪಿಕೊಂಡಿತು. ಭಾರತದ ಪರ ಚೇತನ್ ಶರ್ಮಾ, ಹಾರ್ದಿಕ್ ರಾಜ್, ಕೆಪಿ ಕಾರ್ತಿಕೇಯ ತಲಾ 2 ವಿಕೆಟ್ ಪಡೆದರು. ಯುಧಾಜಿತ್ ಗುಹಾ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
ಈ ಗೆಲುವಿನ ಮೂಲಕ ಭಾರತದ ರನ್‌ರೇಟ್ ಉತ್ತಮವಾಗಿದ್ದು ಸೆಮಿಫೈನಲ್ ಆಸೆ ಜೀವಂತವಾಗಿದೆ. ಭಾರತ ಮುಂದಿನ ಪಂದ್ಯದಲ್ಲಿ ಯುಎಇ ತಂಡವನ್ನು ಎದುರಿಸಲಿದ್ದು ಈ ಪಂದ್ಯದಲ್ಲಿ ಗೆದ್ದರೆ ನೇರವಾಗಿ ಸೆಮಿಫೈನಲ್ ಪ್ರವೇಶಿಸಲಿದೆ. ಡಿಸೆಂಬರ್ 4ರಂದು ಈ ಪಂದ್ಯ ನಡೆಯಲಿದೆ. ಪಾಕಿಸ್ತಾನ ಈಗಾಗಲೇ ಸೆಮಿಫೈನಲ್ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಂಡಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications