Abhishek Sharma: 7,7,32..82; ಯುವರಾಜ್ ಸಿಂಗ್ ಶಿಷ್ಯನ ಹೊಡೆತಕ್ಕೆ ಹಳಿ ತಪ್ಪಿದ ಅಫ್ಘಾನಿಸ್ತಾನ ಬೌಲರ್ಸ್‌

India vs Afghanistan: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾನುವಾರ (ಸೆಪ್ಟೆಂಬರ್ 13) ನಡೆದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತವು ಅಫ್ಘಾನಿಸ್ತಾನ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿಗೆ ಪ್ರಮುಖ ಕಾರಣಕರ್ತರು ಯಾರು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಅವರು ಬೌಲಿಂಗ್ ಮಾಡಲು ನಿರ್ಧರಿಸಿದರು. ಅದರಂತೆಯೇ ಮೊದಲು ಬ್ಯಾಟ್ ಬೀಸಿದ ಅಪ್ಘಾನಿಸ್ತಾನ ತಂಡವು ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 156 ರನ್‌ಗಳ ಸಾಧಾರಣ ಮೊತ್ತ ಕಲೆಹಾಕಿತು. ಅಷ್ಟರ ಮಟ್ಟಿಗೆ ಭಾರತ ತಂಡದ ಬೌಲರ್‌ಗಳು ಮಾರಕ ಬೌಲಿಂಗ್ ದಾಳಿ ನಡೆಸಿ ಗಮನ ಸೆಳೆದರು.

India vs Afghanistan T20 India Win by 7 Wickets Abhishek Sharma Stars in Arun Jaitley Stadium

ಅಫ್ಘಾನ್ ಬೌಲರ್‌ಗಳನ್ನ ದಂಡಿಸಿದ ಕಿಶನ್, ಅಭಿಷೇಕ್

ಬಳಿಕ ಅಫ್ಘಾನ್ ನೀಡಿದ ಸಾಧಾರಣ ಗುರಿಯನ್ನು ಬೆನ್ನತ್ತಿದ್ದ ಟೀಮ್ ಇಂಡಿಯಾಕ್ಕೆ ವೈಭವ್ ಸೂರ್ಯವಂಶಿ ಅವರ ಜಾಗದಲ್ಲಿ ಅವಕಾಶ ಪಡೆದ ಸಂಜು ಸ್ಯಾಮ್ಸನ್ ಕೇವಲ 10 ರನ್ ಗಳಿಸಿ ನಿರಾಸೆ ಮೂಡಿಸಿದರು. ಆದರೆ, ನಂತರ ಜೊತೆಯಾದ ಅಭಿಷೇಕ್ ಶರ್ಮಾ ಮತ್ತು ಇಶಾನ್ ಕಿಶನ್ ಮೂಲೆ ಮೂಲೆಗೂ ಬೌಂಡರಿ, ಸಿಕ್ಸರ್‌ಗಳನ್ನು ಬಾರಿಸುತ್ತಾ ಅಫ್ಘಾನಿಸ್ತಾನದ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು.

ಭಾರತ ಗೆಲುವಿಗೆ ಪ್ರಮುಖ ಕಾರಣಕರ್ತರು ಯಾರು?

ಇವರಿಬ್ಬರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತವು ಕೇವಲ 13.4 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 157 ರನ್‌ ಗಳಿಸಿ ಭರ್ಜರಿ ಜಯ ಸಾಧಿಸಿತು. ಅಬ್ಬರದ ಬ್ಯಾಟಿಂಗ್ ಮಾಡಿದ ಅಭಿಷೇಕ್ ಕೇವಲ 32 ಎಸೆತಗಳಲ್ಲಿ 7 ಬೌಂಡರಿ, 7 ಸಿಕ್ಸರ್‌ಗಳ ಸಹಿತ ಬರೋಬ್ಬರಿ 82 ಗಳಿಸಿದರೆ, ಇಶಾನ್ ಕಿಶನ್ 42(33) ರನ್‌ ಸಿಡಿಸಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ, ಅಜ್ಮತುಲ್ಲಾ ಒಮರ್‌ಜಾಯ್ ಅವರ ಹೋರಾಟದ ಅರ್ಧಶತಕದ (44 ಎಸೆತಗಳಲ್ಲಿ 64*) ನೆರವಿನಿಂದ 8 ವಿಕೆಟ್‌ ನಷ್ಟಕ್ಕೆ 156 ರನ್ ಕಲೆಹಾಕಿತು. ಮೊಹಮ್ಮದ್ ನಬಿ 33 ರನ್‌ಗಳ ಕೊಡುಗೆ ನೀಡಿದರೆ, ಉಳಿದ ಬ್ಯಾಟರ್‌ಗಳು 20 ರನ್‌ಗಳ ಗಡಿ ದಾಟಲು ಪರದಾಡಿದರು.

3 ವಿಕೆಟ್ ಕಬಳಿಸಿದ ಅರ್ಷದೀಪ್ ಸಿಂಗ್

ಭಾರತದ ಪರ ಮಾರಕ ಬೌಲಿಂಗ್ ನಡೆಸಿದ ಅರ್ಷದೀಪ್ ಸಿಂಗ್ ಅವರು 19 ರನ್‌ಗೆ 3 ವಿಕೆಟ್ ಕಬಳಿಸಿ ಮಿಂಚಿದರು. ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್ ಹಾಗೂ ವರುಣ್ ಚಕ್ರವರ್ತಿ ತಲಾ ಒಂದು ವಿಕೆಟ್‌ ಪಡೆದು ಎದುರಾಳಿ ತಂಡವನ್ನು 156 ರನ್‌ಗಳಿಗೆ ಕಟ್ಟಿಹಾಕಿದರು. ಅಪ್ಘಾನ್ ಬ್ಯಾಟರ್‌ಗಳು ರನ್‌ ಕದಿಯಲು ತತ್ತರಿಸಿದಂತೂ ನಜ. ಇನ್ನುಳಿದ ಎರಡು ಪಂದ್ಯಗಳಲ್ಲಿ ಒಂದರಲ್ಲಿ ಗೆದ್ದರೂ ಸಹ ಟೀಮ್ ಇಂಡಿಯಾ ಟ್ರೋಫಿ ಎತ್ತಿಹಿಡಿಯಲಿದೆ. ಮತ್ತೊಂದೆಡೆ ಭಾರತದ ವಿರುದ್ಧ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿ ಅಫ್ಘಾನ್‌ ಇದೆ.

ಅಭಿಷೇಕ್‌ ಅಬ್ಬರದ ಬ್ಯಾಟಿಂಗ್.. 7,7,32..82

* 7 ಬೌಂಡರಿಗಳು
* 7 ಸಿಕ್ಸ್‌
* 32 ಎಸೆತ
* 82 ರನ್‌

ಭಾರತದ, ಅಫ್ಘಾನಿಸ್ತಾನ ಪ್ಲೇಯಿಂಗ್ 11

ಟೀಮ್ ಇಂಡಿಯಾ ಪ್ಲೇಯಿಂಗ್ 11: ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.

ಅಫ್ಘಾನಿಸ್ತಾನ ಪ್ಲೇಯಿಂಗ್ 11: ಇಬ್ರಾಹಿಂ ಜದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್‌ ಕೀಪರ್), ಸೇದಿಕುಲ್ಲಾ ಅಟಲ್, ದರ್ವಿಶ್ ರಸೂಲಿ, ಅಜ್ಮತುಲ್ಲಾ ಒಮರ್ಜಾಯ್, ಗುಲ್ಬದಿನ್ ನೈಬ್, ಮೊಹಮ್ಮದ್ ನಬಿ, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನೂರ್ ಅಹ್ಮದ್, ಫಜಲ್ಹಕ್ ಫಾರೂಕಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+