India vs Afghanistan T20: ಅಫ್ಘಾನಿಸ್ತಾನ ವಿರುದ್ಧ ಭಾರತ ತಂಡ ಪ್ರಕಟ; 'ವಂಡರ್ ಕಿಡ್' ವೈಭವ್ ಸೂರ್ಯವಂಶಿಗೆ ಸ್ಥಾನ

India vs Afghanistan T20: ಮುಂಬರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟಕ್ಕೂ ಮುನ್ನ ಅಫ್ಘಾನಿಸ್ತಾನ ವಿರುದ್ಧ ತವರಿನಲ್ಲಿ ನಡೆಯಲಿರುವ 3 ಪಂದ್ಯಗಳ ಟಿ-20 ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾರತ ತಂಡವನ್ನು ಪ್ರಕಟಿಸಿದೆ. ಇದರಲ್ಲಿ 15 ವರ್ಷದ ವೈಭವ್ ಸೂರ್ಯವಂಶಿ ಅವರು ಸ್ಥಾನ ಪಡೆದಿದ್ದು, ಇದೀಗ ಎಲ್ಲರ ಕಣ್ಣು ಅವರ ಮೇಲಿದೆ.

ತಂಡದ ಅನುಭವಿ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರಿಗೆ ನಾಯಕತ್ವದ ಜವಾಬ್ದಾರಿ ನೀಡಲಾಗಿದ್ದು, ತಿಲಕ್ ವರ್ಮಾ ಅವರನ್ನು ಉಪನಾಯಕರಾಗಿ ಆಯ್ಕೆ ಮಾಡಲಾಗಿದೆ. ನಾಯಕತ್ವದ ಅನುಭವ ಹೊಂದಿರುವ ಅಯ್ಯರ್ ಸಾರಥ್ಯದಲ್ಲಿ ಭಾರತೀಯ ತಂಡವು ಮತ್ತೊಂದು ಸರಣಿ ಗೆಲುವಿನ ನಿರೀಕ್ಷೆಯಲ್ಲಿದೆ.

India vs Afghanistan T20 Vaibhav Sooryavanshi Named in Team Shreyas Iyer to Lead Know details

'ವಂಡರ್ ಕಿಡ್' ವೈಭವ್ ಸೂರ್ಯವಂಶಿಗೆ ಸ್ಥಾನ

ಇತ್ತೀಚೆಗೆ ಮುಕ್ತಾಯಗೊಂಡ ಜಿಂಬಾಬ್ವೆ ವಿರುದ್ಧದ ಸರಣಿಯಿಂದ ವಿಶ್ರಾಂತಿ ಪಡೆದಿದ್ದ ಪ್ರಮುಖ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಮರಳಿ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಅವರ ಜೊತೆಗೆ ಸ್ಫೋಟಕ ಬ್ಯಾಟರ್ ಇಶಾನ್ ಕಿಶನ್ ಕೂಡ ವಿಕೆಟ್ ಕೀಪರ್ ಆಯ್ಕೆಯಾಗಿ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಇನ್ನು ದೇಶಿಯ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಯುವ ಪ್ರತಿಭೆ 15 ವರ್ಷದ ವೈಭವ್ ಸೂರ್ಯವಂಶಿ ಅವರಿಗೆ ರಾಷ್ಟ್ರೀಯ ತಂಡದಲ್ಲಿ ಮತ್ತೆ ಸ್ಥಾನ ಪಡೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಇಬರ ಸೇರ್ಪಡೆಯು ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ಗೆ ಹೊಸ ಚೈತನ್ಯ ನೀಡುವ ಸಾಧ್ಯತೆಯಿದೆ.

ಈ ಆಟಗಾರರಿಗೆ ಫಿಟ್ನೆಸ್ ಕ್ಲಿಯರೆನ್ಸ್ ಅಡ್ಡಿ

ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಸೇರಿದಂತೆ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ, ಸ್ಪಿನ್ನರ್ ವಾಷಿಂಗ್ಟನ್ ಸುಂದರ್ ಹಾಗೂ ವೇಗಿ ಹರ್ಷಿತ್ ರಾಣಾ ಅವರನ್ನು ಸರಣಿಗೆ ಆಯ್ಕೆ ಮಾಡಲಾಗಿದೆ. ಆದರೆ ಈ ಆಟಗಾರರು ಕಣಕ್ಕಿಳಿಯುವುದು ಸಂಪೂರ್ಣವಾಗಿ ಅವರ ಫಿಟ್ನೆಸ್ ಕ್ಲಿಯರೆನ್ಸ್ ಪ್ರಮಾಣೀಕರಣದ ಮೇಲೆ ಅವಲಂಬಿತವಾಗಿರುತ್ತದೆ ಎಂದು ಬಿಸಿಸಿಐ ಮಂಡಳಿ ಸ್ಪಷ್ಟವಾಗಿ ತಿಳಿಸಿದೆ. ಪ್ರಮುಖ ಪಂದ್ಯಾವಳಿಗಳು ಹತ್ತಿರವಿರುವ ಕಾರಣ ಆಟಗಾರರ ಆರೋಗ್ಯ ಮತ್ತು ಸಾಮರ್ಥ್ಯದ ಮೇಲೆ ಮಂಡಳಿ ಹೆಚ್ಚಿನ ನಿಗಾ ವಹಿಸಿದೆ.

ಪಂದ್ಯ ನಡೆಯುವ ಸ್ಥಳ ಎಲ್ಲಿ?

ಮೂರು ಪಂದ್ಯಗಳ ಈ ಸರಣಿಯು ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 13 ರಿಂದ ಸೆಪ್ಟೆಂಬರ್ 17 ರವರೆಗೆ ನಡೆಯಲಿದೆ. ಈ ಸರಣಿಯು ಭಾರತ ತಂಡಕ್ಕೆ ಮುಂಬರುವ ಏಷ್ಯನ್ ಗೇಮ್ಸ್‌ಗೆ ಸಿದ್ಧತೆ ನಡೆಸಲು ಸೂಕ್ತ ವೇದಿಕೆಯಾಗಲಿದೆ. ಈ ಹಿಂದೆ ಜೂನ್‌ನಲ್ಲಿ ನಡೆದಿದ್ದ ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಹಾಗೂ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾವು ಭರ್ಜರಿ ಪ್ರದರ್ಶನ ನೀಡಿ ಕ್ಲೀನ್ ಸ್ವೀಪ್ ಸಾಧಿಸಿತ್ತು. ಅದೇ ಗೆಲುವಿನ ಲಯವನ್ನು ಮುಂದುವರಿಸುವ ವಿಶ್ವಾಸದಲ್ಲಿ ಶ್ರೇಯಸ್ ಪಡೆ ಮೈದಾನಕ್ಕಿಳಿಯಲಿದೆ.

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ (ಉಪನಾಯಕ), ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾಮ, ಅರ್ಷದೀಪ್ ಸಿಂಗ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+