Ind vs Aus: ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ ಮೊಹಮ್ಮದ್ ಶಮಿ ಬದಲಾಗಿ ಮಾರಕ ವೇಗಿಗೆ ಅವಕಾಶ?

ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಹೀನಾಯ ಪ್ರದರ್ಶನ ನೀಡಿದ ಬಳಿಕ ಭಾರತ ತಂಡ ಭರ್ಜರಿಯಾಗಿ ವಾಪಸಾತಿ ಮಾಡಿದೆ. ಇಂಗ್ಲೆಂಡ್ ವಿರುದ್ಧ ಸತತ ಮೂರು ಪಂದ್ಯಗಳನ್ನು ಗೆದ್ದ ಚಾಂಪಿಯನ್ಸ್ ಟ್ರೋಫಿಯಲ್ಲೂ ಅಜೇಯ ಪ್ರದರ್ಶನ ಮುಂದುವರೆಸಿದೆ. ಲೀಗ್ ಹಂತದ ಮೂರು ಪಂದ್ಯಗಳನ್ನು ಗೆದ್ದು ಸೆಮಿಫೈನಲ್‌ಗೆ ಸಜ್ಜಾಗುತ್ತಿದೆ.

ಸೆಮಿಫೈನಲ್‌ನಲ್ಲಿ ಭಾರತ ಆಸ್ಟ್ರೆಲಿಯಾವನ್ನು ಎದುರಿಸಲಿದೆ. ಬ್ಯಾಟಿಂಗ್, ಬೌಲಿಂಗ್ ಎರಡೂ ವಿಭಾಗದಲ್ಲಿ ಭಾರತ ಉತ್ತಮ ಪ್ರದರ್ಶನ ನೀಡುತ್ತಿದೆ. ಒಬ್ಬ ಆಟಗಾರನ ಮೇಲೆ ಅವಲಂಬಿತವಾಗದೆ ತಂಡವಾಗಿ ಸಾಂಘಿಕ ಪ್ರದರ್ಶನ ನೀಡುತ್ತಿದ್ದು ಒತ್ತಡವನ್ನು ನಿಭಾಯಿಸಿ ಪಂದ್ಯಗಳನ್ನು ಗೆಲ್ಲಲು ಯಶಸ್ವಿಯಾಗಿದೆ.

india vs australia rohit sharma arshdeep singh replace mohammed shami champions trophy

ಕಾಡುತ್ತಿದೆ ಅದೊಂದು ಸಮಸ್ಯೆ

ಉತ್ತಮ ಪ್ರದರ್ಶನ ನೀಡುತ್ತಿದ್ದರೂ ಪವರ್ ಪ್ಲೇನಲ್ಲಿ ವೇಗಿಗಳು ಉತ್ತಮ ಪ್ರದರ್ಶನ ನೀಡುವಲ್ಲಿ ಹೆಣಗಾಡಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಪವರ್‌ಪ್ಲೇನಲ್ಲಿ ಮೊಹಮ್ಮದ್ ಶಮಿ ಎರಡು ವಿಕೆಟ್‌ ಪಡೆದರು, ಪಂದ್ಯದಲ್ಲಿ ಐದು ವಿಕೆಟ್ ಪಡೆದು ಮಿಂಚಿದರು. ಆದರೆ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅವರು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಫಿಟ್‌ನೆಸ್ ಸಮಸ್ಯೆ ಕೂಡ ಅವರನ್ನು ಕಾಡುತ್ತಿದೆ.

ಪವರ್‌ಪ್ಲೇನಲ್ಲಿ ಎರಡು ಪಂದ್ಯಗಳಲ್ಲಿ ಹರ್ಷಿತ್ ರಾಣಾ ಒಂದು ವಿಕೆಟ್ ಪಡೆದರು. ಅವರು ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಪ್ರದರ್ಶನ ನೀಡಿದ್ದು ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಯಶಸ್ವಿ ವೇಗಿಯಾಗಿದ್ದಾರೆ. ಆದರೆ 11-40 ಓವರ್‌ಗಳ ಹಂತದಲ್ಲಿ ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಮತ್ತು ವರುಣ್ ಚಕ್ರವರ್ತಿ ಉತ್ತಮ ಪ್ರದರ್ಶನ ನೀಡುತ್ತಿದ್ದು ಮಧ್ಯಮ ಕ್ರಮಾಂಕದಲ್ಲಿ ಭಾರತಕ್ಕೆ ಬೌಲಿಂಗ್ ಸಮಸ್ಯೆಯಾಗುತ್ತಿಲ್ಲ.

ಅರ್ಷದೀಪ್ ಸಿಂಗ್ ಕಣಕ್ಕೆ?

ಮೊಹಮ್ಮದ್ ಶಮಿಯೇ ಮೊದಲ ಆಯ್ಕೆ ಎನ್ನುವುದರಲ್ಲಿ ಅನುಮಾನವಿಲ್ಲ ಆದರೆ ಅವರ ಫಿಟ್‌ನೆಸ್ ಗಮನದಲ್ಲಿಟ್ಟುಕೊಂಡು ಅವರಿಗೆ ವಿಶ್ರಾಂತಿ ನೀಡಿದರೆ ಎಡಗೈ ವೇಗಿ ಅರ್ಷದೀಪ್ ಸಿಂಗ್ ಆಸ್ಟ್ರೇಲಿಯಾ ವಿರುದ್ಧ ಆಡಬಹುದು. ಅಪಾಯಕಾರಿ ಟ್ರಾವಿಸ್ ಹೆಡ್ ಮತ್ತು ಜೇಕ್ ಫ್ರೇಸರ್-ಮೆಕ್‌ಗುರ್ಕ್, ಸ್ಟೀವ್ ಸ್ಮಿತ್ ಮತ್ತು ಮಾರ್ನಸ್ ಲ್ಯಾಬುಶೇನ್ ಅವರಂತಹ ಬಲಗೈ ಬ್ಯಾಟರ್ ಗಳನ್ನು ಕಟ್ಟಿಹಾಕಲು ಎಡಗೈ ವೇಗಿಯಿಂದ ಸಾಧ್ಯವಾಗಬಹುದು.

ಅರ್ಷದೀಪ್‌ ಸಿಂಗ್‌ 2022 ಮತ್ತು 2024 ರ ಟಿ 20 ವಿಶ್ವಕಪ್‌ಗಳಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್. ಅರ್ಶ್‌ದೀಪ್ ನಾಕೌಟ್ ಪಂದ್ಯಗಳಲ್ಲಿ ಉತ್ತಮವಾಗಿ ಬೌಲಿಂಗ್ ಮಾಡಿದ್ದಾರೆ. ಆರಂಭದ ಓವರ್ ಗಳಲ್ಲೇ ವಿಕೆಟ್ ಪಡೆಯುವ ಸಾಮರ್ಥ್ಯ ಹೊಂದಿದ್ದು ಉತ್ತಮ ಆಯ್ಕೆಯಾಗಿದ್ದಾರೆ.

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ರಿಷಭ್ ಪಂತ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ಅರ್ಶದೀಪ್ ಸಿಂಗ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+