Get Updates
Get notified of breaking news, exclusive insights, and must-see stories!

India vs Australia WTC Final: ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್ ಅಬ್ಬರ: ಮೊದಲ ದಿನ ಆಸ್ಟ್ರೇಲಿಯಾದ ಪಾರಮ್ಯ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದ ಮೊದಲನೇ ದಿನದಾಟದಲ್ಲಿ ಆಸ್ಟ್ರೇಲಿಯಾ ಮೇಲುಗೈ ಸಾಧಿಸಿದೆ. ಮೊದಲ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ ಮೂರು ವಿಕೆಟ್ ಕಳೆದುಕೊಂಡು 327 ರನ್ ಗಳಿಸಿದ್ದು ಬೃಹತ್ ಮೊತ್ತ ಕಲೆ ಹಾಕುವ ಮುನ್ಸೂಚನೆ ನೀಡಿದೆ.

ಲಂಡನ್‌ನ ಕೆನ್ನಿಂಗ್ಟನ್‌ ಓವಲ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆಸ್ಟ್ರೇಲಿಯಾ ಎಚ್ಚರಿಕೆಯಿಂದ ಬ್ಯಾಟಿಂಗ್ ಆರಂಭಿಸಿದರು, ಮೊಹಮ್ಮದ್ ಸಿರಾಜ್ ಆರಂಭದಲ್ಲಿ ಉಸ್ಮಾನ್ ಖವಾಜಾ ಅವರ ವಿಕೆಟ್ ಪಡೆಯುವ ಮೂಲಕ ಭಾರತಕ್ಕೆ ಉತ್ತಮ ಆರಂಭ ಒದಗಿಸಿದರು.

 India vs Australia WTC Final: Travis Head and Steve Smith Dominate Day 1 as Australia Puts Up 327/3

ನಂತರ ಬಂದ ವಿಶ್ವದ ನಂಬರ್ 1 ಶ್ರೇಯಾಂಕಿತ ಟೆಸ್ಟ್ ಬ್ಯಾಟರ್ ಉಸ್ಮಾನ್ ಖವಾಜಾ 26 ರನ್ ಗಳಿಸಿದ್ದಾಗ ಶಮಿ ಅವರ ಬೌಲಿಂಗ್‌ನಲ್ಲಿ ಬೌಲ್ಡ್ ಆದರು. ಡೇವಿಡ್ ವಾರ್ನರ್ 60 ಎಸೆತಗಳಲ್ಲಿ 43 ರನ್ ಗಳಿಸಿದ್ದಾಗ ಶಾರ್ದೂಲ್ ಠಾಕೂರ್ ಅವರ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿದರು.

ಟ್ರಾವಿಸ್ ಹೆಡ್ ಅಬ್ಬರದ ಶತಕ

76 ರನ್ ಗಳಿಸುವಷ್ಟರಲ್ಲಿ ಆರಂಭಿಕ ಮೂರು ವಿಕೆಟ್ ಕಳೆದುಕೊಂಡ ಆಸ್ಟ್ರೇಲಿಯಾ ಒತ್ತಡಕ್ಕೆ ಸಿಲುಕಿತು ಎಂದುಕೊಂಡರೂ, ಟ್ರಾವಿಸ್ ಹೆಡ್ ಮತ್ತು ಸ್ಟೀವ್ ಸ್ಮಿತ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಟ್ರಾವಿಸ್ ಹೆಡ್ ಒಂದು ಕಡೆ ಬಿರುಸಾಗಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಮತ್ತೊಂದೆಡೆ ಸ್ಟೀವ್ ಸ್ಮಿತ್ ತಾಳ್ಮೆಯ ಬ್ಯಾಟಿಂಗ್ ಪ್ರದರ್ಶಿಸಿದರು.

ಟ್ರಾವಿಸ್ ಹೆಡ್ 106 ಎಸೆತಗಳಲ್ಲಿ 100 ರನ್ ಗಳಿಸುವ ಮೂಲಕ ತಮ್ಮ 6ನೇ ಟೆಸ್ಟ್ ಶತಕ ಪೂರ್ಣಗೊಳಿಸಿದರು. ಮೊದಲನೇ ದಿನದಾಟದ ಅಂತ್ಯಕ್ಕೆ ಟ್ರಾವಿಸ್ ಹೆಡ್‌ 156 ಎಸೆತಗಳಲ್ಲಿ 22 ಬೌಂಡರಿ 1 ಭರ್ಜರಿ ಸಿಕ್ಸರ್ ಸಹಿತ ಅಜೇಯ 146 ರನ್ ಗಳಿಸಿದರು.

ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ಸ್ಮಿತ್ ಕೂಡ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಮೊದಲನೇ ದಿನದಾಟದ ಅಂತ್ಯಕ್ಕೆ ಅವರು, 227 ಎಸೆತಗಳಲ್ಲಿ 14 ಬೌಂಡರಿ ಸಹಿತ 95 ರನ್ ಗಳಿಸಿದರು. ಈ ಜೋಡಿ ನಾಲ್ಕನೇ ವಿಕೆಟ್‌ಗೆ ಅಜೇಯ 251 ರನ್ ಜೊತೆಯಾಟ ಆಡುವ ಮೂಲಕ ಬೃಹತ್ ಮೊತ್ತ ಗಳಿಸುವ ಮುನ್ಸೂಚನೆ ನೀಡಿದ್ದಾರೆ.

ಮೊದಲ ಸೆಷನ್‌ನಲ್ಲಿ ಭಾರತ ತಂಡ ಮೇಲುಗೈ ಸಾಧಿಸಿದರೆ, ಉಳಿದ ಎರಡು ಸೆಷನ್‌ಗಳಲ್ಲಿ ಆಸ್ಟ್ರೇಲಿಯಾ ಮೇಲುಗೈ ಸಾಧಿಸಿತು. ಇಬ್ಬರು ಬ್ಯಾಟರ್ ಗಳು ಅಜೇಯರಾಗಿ ಉಳಿದುಕೊಂಡಿದ್ದು, ಎರಡನೇ ದಿನ ಬೃಹತ್ ಮೊತ್ತ ಗಳಿಸುವ ವಿಶ್ವಾಸದಲ್ಲಿದ್ದಾರೆ. ಭಾರತ ಕೂಡ ಆಸ್ಟ್ರೇಲಿಯಾ ತಂಡವನ್ನು ಬೇಗನೆ ಆಲೌಟ್ ಮಾಡುವ ಮೂಲಕ ಪಂದ್ಯದಲ್ಲಿ ವಾಪಸಾಗಲು ರಣತಂತ್ರ ರೂಪಿಸಲಿದ್ದು, ಎರಡನೇ ದಿನದಾಟ ಕುತೂಹಲ ಕೆರಳಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+