Champions Trophy: ಭಾರತಕ್ಕೆ ಬಾಂಗ್ಲಾದೇಶ ಸವಾಲು; ಪಂದ್ಯದ ದಿನಾಂಕ, ಸಮಯ, ನೇರಪ್ರಸಾರ ಮಾಹಿತಿ

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಪಂದ್ಯಾವಳಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 19ರಂದು ಬುಧವಾರ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಪ್ರಾರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.

ಫೆಬ್ರವರಿ 20ರಂದು ಚಾಂಪಿಯನ್ಸ್ ಟ್ರೋಫಿ ತನ್ನ ಮೊದಲ ಪಂದ್ಯ ಆಡಲು ಭಾರತ ಸಜ್ಜಾಗುತ್ತಿದೆ. ಪಂದ್ಯಾವಳಿಗಾಗಿ ಪಾಕಿಸ್ತಾನಕ್ಕೆ ಹೋಗಲು ಬಿಸಿಸಿಐ ನಿರಾಕರಿಸಿದ್ದರಿಂದ ಭಾರತದ ಪಂದ್ಯಗಳನ್ನು ದುಬೈನಲ್ಲಿ ನಡೆಸಲು ಪಿಸಿಬಿ ಮತ್ತು ಐಸಿಸಿ ತೀರ್ಮಾನಿಸಿವೆ.

India vs bangladesh champions trophy 2025 match date timings live streaming

ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಈಗಾಗಲೇ ದುಬೈ ತಲುಪಿದ್ದು ಮೊದಲ ಪಂದ್ಯಕ್ಕಾಗಿ ಅಭ್ಯಾಸ ನಡೆಸುತ್ತಿದೆ. ಫೆಬ್ರವರಿ 20 ಗುರುವಾರ ಭಾರತೀಯ ಕಾಲಮಾನ ಮಧ್ಯಾಹ್ನ 1 ಗಂಟೆಗೆ ಪಂದ್ಯ ಆರಂಭವಾಗಲಿದೆ. ಪಂದ್ಯದ ನೇರಪ್ರಸಾರವನ್ನು ಜಿಯೋ ಹಾಟ್‌ಸ್ಟಾರ್ ನಲ್ಲಿ ವೀಕ್ಷಿಸಬಹುದಾಗಿದೆ. ಸ್ಟಾರ್ ಸ್ಪೋರ್ಟ್ಸ್‌ ಮತ್ತು ಸ್ಪೋರ್ಟ್ಸ್ 18 ಚಾನಲ್‌ಗಳಲ್ಲಿ ಕೂಡ ಪಂದ್ಯಗಳನ್ನು ನೇರಪ್ರಸಾರದಲ್ಲಿ ವೀಕ್ಷಣೆ ಮಾಡಬಹುದು.

ಎರಡು ಗುಂಪುಗಳಾಗಿ ವಿಂಗಡಣೆ

ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಒಟ್ಟು 8 ತಂಡಗಳು ಆಡುತ್ತಿದ್ದು, ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಪ್ರತಿ ಗುಂಪಿನಲ್ಲಿ ನಾಲ್ಕು ತಂಡಗಳಿವೆ. ಭಾರತ ಎ ಗುಂಪಿನ ಭಾಗವಾಗಿದ್ದು, ಬಾಂಗ್ಲಾದೇಶ, ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ಕೂಡ ಎ ಗುಂಪಿನಲ್ಲಿವೆ.

ಭಾರತ ಲೀಗ್ ಹಂತದಲ್ಲಿ ಮೂರು ಪಂದ್ಯಗಳನ್ನಾಡಲಿದೆ. ಬಾಂಗ್ಲಾದೇಶದ ವಿರುದ್ಧ ಮೊದಲ ಪಂದ್ಯ ಆಡಲಿದ್ದು, ಫೆಬ್ರವರಿ 23 ರಂದು ಭಾನುವಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಮಾರ್ಚ್ 2ರಂದು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ.

ಗುರುವಾರ ನಡೆಯಲಿರುವ ಮೊದಲ ಪಂದ್ಯದಲ್ಲಿ ಭಾರತ ಬಾಂಗ್ಲಾದೇಶದ ವಿರುದ್ಧ ಗೆಲುವ ಸಾಧಿಸುವ ವಿಶ್ವಾಸದಲ್ಲಿದೆ. ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿರುವ ರೋಹಿತ್ ಶರ್ಮಾ ಪಡೆ ಆತ್ಮವಿಶ್ವಾಸದಲ್ಲೇ ಮೊದಲ ಪಂದ್ಯಕ್ಕೆ ಸಜ್ಜಾಗುತ್ತಿದೆ.

ಭಾರತ ತಂಡದ ಸಂಭಾವ್ಯ ಆಡುವ ಬಳಗ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಕೆಎಲ್ ರಾಹುಲ್, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ಕುಲದೀಪ್ ಯಾದವ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+