Ind Vs Ban: ಬಾಂಗ್ಲಾದೇಶದ ವಿರುದ್ಧ ಕಣಕ್ಕಿಳಿಯುವ ಭಾರತ ತಂಡ ಹೇಗಿರಲಿದೆ?
ಏಕದಿನ ವಿಶ್ವಕಪ್ 2023ರ ಪಂದ್ಯಾವಳಿಯಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡುತ್ತಿದೆ. ಈಗಾಗಲೇ ಆಡಿರುವ ಮೂರು ಪಂದ್ಯಗಳನ್ನು ಗೆದ್ದಿರುವ ಭಾರತ ತಂಡ ಮುಂದಿನ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ. ಅಕ್ಟೋಬರ್ 19ರಂದು ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.
ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತ ಬಾಂಗ್ಲಾದೇಶದ ವಿರುದ್ಧ ಗೆಲ್ಲುವ ಮೂಲಕ ಅದನ್ನು ಮುಂದುವರೆಸುವ ಉತ್ಸಾಹದಲ್ಲಿದೆ. ಇನ್ನು ಬಾಂಗ್ಲಾದೇಶ ಕೂಡ ಭಾರತವನ್ನು ಮಣಿಸಿ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳುವ ಲೆಕ್ಕಾಚಾರದಲ್ಲಿದೆ.

ಈಗಾಗಲೇ ಪುಣೆಯಲ್ಲಿ ಭಾರತ ತಂಡದ ಆಟಗಾರರು ಕಠಿಣ ಅಭ್ಯಾಸ ಮಾಡುತ್ತಿದ್ದಾರೆ. ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಪ್ರಮುಖ ಆಟಗಾರರು ಅಭ್ಯಾಸದಲ್ಲಿ ಭಾಗವಹಿಸಿದ್ದರು.
ಅಶ್ವಿನ್ ಆಡುವುದು ಅನುಮಾನ?
ನೆದರ್ಲ್ಯಾಂಡ್ಸ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದ ಇನ್ನಿಂಗ್ಸ್ ವಿರಾಮದ ಸಮಯದಲ್ಲಿ, ಸ್ಟಾರ್ ಸ್ಪೋರ್ಟ್ಸ್ ಭಾರತದ ಅಭ್ಯಾಸದ ಕ್ಲಿಪ್ ಅನ್ನು ಹಂಚಿಕೊಂಡಿತು ಮತ್ತು ಅಭ್ಯಾಸದ ದೃಶ್ಯಗಳನ್ನು ನೋಡಿ ಭಾರತದ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಅಚ್ಚರಿಗೊಂಡರು.
ವೀಡಿಯೊದಲ್ಲಿ, ರೋಹಿತ್ ಶರ್ಮಾ ರವೀಂದ್ರ ಜಡೇಜಾಗೆ ಬೌಲಿಂಗ್ ಮಾಡುವುದನ್ನು ನೋಡಿದರು. ರೋಹಿತ್ ಶರ್ಮಾ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಆಫ್ ಸ್ಪಿನ್‌ನ ಬೌಲಿಂಗ್ ಮಾಡಲು ಅಭ್ಯಾಸ ಮಾಡುತ್ತಿದ್ದಾರೆ ಎಂದು ಭಾವಿಸುತ್ತಿದ್ದರು.
ಕೆಲವು ಎಸೆತಗಳನ್ನು ಬೌಲಿಂಗ್ ಮಾಡಿದ ನಂತರ, ಅವರು ರವಿಚಂದ್ರನ್ ಅಶ್ವಿನ್ ಅವರ ಕಡೆಗೆ ನಡೆದರು, ಅವರು ಅಭ್ಯಾಸವನ್ನು ಗಮನಿಸಿದರು. ಇಬ್ಬರೂ ಚರ್ಚೆ ಮಾಡಿದರು. ಸ್ಪಿನ್ನರ್ ಅಶ್ವಿನ್ ತನ್ನ ಬೌಲಿಂಗ್ ಬಗ್ಗೆ ರೋಹಿತ್ ಶರ್ಮಾಗೆ ಸಲಹೆಗಳನ್ನು ನೀಡುತ್ತಿರುವಾಗ ಅವರು ತಂಡದಲ್ಲಿ ಸ್ಥಾನ ಪಡೆಯುವುದು ಕಷ್ಟವಾಗಲಿದೆ ಎಂದು ಮಂಜ್ರೇಕರ್ ಅಂದಾಜಿಸಿದ್ದಾರೆ.
"ಅಶ್ವಿನ್ ಅವರು ಭಾರತ ತಂಡದಲ್ಲಿ ಸ್ಥಾನ ಪಡೆಯುವುದಿಲ್ಲ ಎಂದು ಕಾಣುತ್ತದೆ. ಅಶ್ವಿನ್ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕಾದೆ, ಒಬ್ಬ ವೇಗಿಯನ್ನು ತಂಡದಿಂದ ಹೊರಗಿಡಬೇಕಾಗುತ್ತದೆ. ಶಾರ್ದೂಲ್ ಠಾಕೂರ್ ಅವರನ್ನು ಹೊರಗಿಟ್ಟರೆ ಹಾರ್ದಿಕ್ ಪಾಂಡ್ಯ ಮೇಲೆ ಒತ್ತಡ ಬೀಳಲಿದೆ, ಇದು ಅವರಿಗೆ ಇಷ್ಟ ಇಲ್ಲ, ಆದ್ದರಿಂದ ಅಶ್ವಿನ್ ಸ್ಥಾನ ಪಡೆಯುವುದು ಅನುಮಾನ" ಎಂದು ಹೇಳಿದರು.
ಟೀಂ ಇಂಡಿಯಾ ಸದ್ಯ ಉತ್ತಮ ಪರಿಸ್ಥಿತಿಯಲ್ಲಿದ್ದು ಬಾಂಗ್ಲಾದೇಶದ ವಿರುದ್ಧ ಜಯ ಗಳಿಸುವ ವಿಶ್ವಾಸದಲ್ಲಿದ್ದರೂ, ಎಚ್ಚರಿಕೆಯಿಂದ ಆಡಬೇಕಿದೆ. ಅಫ್ಘಾನಿಸ್ತಾನ ಇಂಗ್ಲೆಂಡ್ ವಿರುದ್ಧ ಗೆದ್ದಿದ್ದರೆ, ಮಂಗಳವಾರ ನೆದರ್ಲ್ಯಾಂಡ್ಸ್ ತಂಡ ದಕ್ಷಿಣ ಆಫ್ರಿಕಾವನ್ನು ಮಣಿಸಿದ್ದು, ಯಾವುದೇ ತಂಡವನ್ನು ಹಗುರವಾಗಿ ಪರಿಗಣಿಸುವಂತಿಲ್ಲ.
ಭಾರತದ ಸಂಭಾವ್ಯ ಆಡುವ ಬಳಗ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಬಾಂಗ್ಲಾದೇಶ ಸಂಭಾವ್ಯ ಆಡುವ ಬಳಗ
ಲಿಟ್ಟನ್ ದಾಸ್, ತಂಝಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಮೆಹಿದಿ ಹಸನ್ ಮಿರಾಜ್, ಶಕೀಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ತೌಹಿದ್ ಹೃದಯೋಯ್, ಮಹಮ್ಮದುಲ್ಲಾ, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹಮಾನ್.












Click it and Unblock the Notifications