ಮೂವರು ವೇಗಿಗಳು, ಇಬ್ಬರು ಸ್ಪಿನ್ನರ್ಸ್: ಹೇಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್?
ಭಾರತ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯ ಎಡ್ಜ್‌ಬಸ್ಟನ್‌ನಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಈಗಾಗಲೇ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಇಂಗ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಇನ್ನು ಟೀಮ್ ಇಂಡಿಯಾ ಈ ಪಂದ್ಯಕ್ಕಾಗಿ ಬದಲಾವಣೆಗಳನ್ನು ಮಾಡುವ ಸಾಧ್ಯತೆ ಇದೆ. ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರಿತ್ ಬುಮ್ರಾ ಅವರಿಗೆ ಈ ಪಂದ್ಯದಲ್ಲಿ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ಎರಡನೇ ಟೆಸ್ಟ್‌ಗೆ ಟೀಮ್ ಇಂಡಿಯಾದ ಸಂಯೋಜನೆ ಹೇಗಿರಲಿದೆ ಎಂಬ ಬಗ್ಗೆ ಪ್ರಶ್ನೆಗಳು ಎದ್ದಿವೆ.
ಈಗಾಗಲೇ ಆಡಿದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲು ಕಂಡಿರುವ ಟೀಮ್ ಇಂಡಿಯಾ, ಒತ್ತಡದಲ್ಲಿದೆ. ಹೀಗಾಗಿ ಎರಡನೇ ಪಂದ್ಯ ಗೆಲ್ಲುವ ಅನಿವಾರ್ಯತೆ ಇದೆ. ಹೀಗಾಗಿ ಟೀಮ್ ಇಂಡಿಯಾದ ಸಂಯೋಜನೆ ಹೇಗಿರಲಿದೆ ಎಂಬ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಜಸ್ಪ್ರೀತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಯಾರು ಕಣಕ್ಕೆ ಇಳಿಯಲಿದ್ದಾರೆ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಸದ್ಯದ ಮಾಹಿತಿಯ ಪ್ರಕಾರ ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡುವುದು ಡೌಟ್. ಇವರ ಅನುಪಸ್ಥಿತಿಯಲ್ಲಿ ವೇಗದ ಬೌಲಿಂಗ್ ನೊಗವನ್ನು ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣಾ ಹೊರಲಿದ್ದಾರೆ. ಇನ್ನು ಮೂರನೇ ವೇಗಿಯಾಗಿ ಯಾರಿಗೆ ಸ್ಥಾನ ಲಭಿಸುತ್ತದೆ ಎಂಬ ಬಗ್ಗೆ ದೊಡ್ಡ ಕುತೂಹಲ ಮನೆ ಮಾಡಿದೆ. ಈಗಾಗಲೇ ಟೆಸ್ಟ್ ಪಂದ್ಯಗಳನ್ನು ಆಡಿರುವ ಅನುಭವ ಹೊಂದಿರುವ ಆಕಾಶ್ ದೀಪ್‌ಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಆದರೆ ಇದೇ ಸ್ಥಾನದ ಮೇಲೆ ಯುವ ವೇಗದ ಬೌಲರ್ ಅರ್ಷದೀಪ್ ಸಿಂಗ್ ಸಹ ಕಣ್ಣು ನೆಟ್ಟಿದ್ದಾರೆ. ಇವರು ಈಗಾಗಲೇ ಭಾರತದ ಪರ ಸೀಮಿತ ಓವರ್‌ಗಳ ಪಂದ್ಯಗಳಲ್ಲಿ ಶಿಸ್ತಿನ ದಾಳಿ ನಡೆಸಿ ಎಲ್ಲರ ಗಮನ ಸೆಳೆದಿದ್ದಾರೆ. ಹೀಗಾಗಿ ಇವರಿಗೆ ಟೆಸ್ಟ್ ತಂಡದಲ್ಲಿ ಅವಕಾಶ ನೀಡಬೇಕು ಎಂಬ ಚರ್ಚೆಗಳು ಆರಂಭವಾಗಿವೆ.
ಏನಿರಲಿದೆ ತಂಡದ ಕಾಂಬಿನೇಷನ್?
ಟೀಮ್ ಇಂಡಿಯಾ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲ ಪಂದ್ಯದಲ್ಲಿ ನಾಲ್ಕು ವೇಗದ ಬೌಲರ್ ಹಾಗೂ ಒಬ್ಬ ಸ್ಪಿನ್ ಬೌಲರ್‌ನೊಂದಿಗೆ ಕಣಕ್ಕೆ ಇಳಿದಿತ್ತು. ಆದರೆ ಎರಡನೇ ಟೆಸ್ಟ್‌ನಲ್ಲಿ ಯಾವ ಕಾಂಬಿನೇಷನ್‌ಗೆ ಮಣೆ ಹಾಕುತ್ತದೆ ಎಂಬ ಪ್ರಶ್ನೆಗಳು ಎದ್ದಿವೆ. ಈಗ ಬರುತ್ತಿರುವ ಮಾಹಿತಿಯ ಪ್ರಕಾರ ಭಾರತ ಎರಡನೇ ಟೆಸ್ಟ್‌ನಲ್ಲಿ ಮೂವರು ವೇಗಿಗಳು, ಇಬ್ಬರು ಸ್ಪಿನ್ ಬೌಲರ್ ಅವರೊಂದಿಗೆ ಕಣಕ್ಕೆ ಇಳಿಯುವ ಸಾಧ್ಯತೆ ಇದೆ.

ಯಾರಿಗೆ ಸಿಗುತ್ತೆ ಅವಕಾಶ?
ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಇಬ್ಬರು ಸ್ಪಿನ್ ಬೌಲರ್‌ಗಳನ್ನು ಕಣಕ್ಕೆ ಇಳಿಸಿದರೆ ಯಾರಿಗೆ ಅವಕಾಶ ಸಿಗಬಹುದು ಎಂಬ ಪ್ರಶ್ನೆಗಳು ಎದ್ದಿವೆ. ನುರಿತ ಸ್ಪಿನ್ ಬೌಲರ್ ಕುಲ್‌ದೀಪ್ ಯಾದವ್ ಮೊದಲ ಆಯ್ಕೆಯ ಆಟಗಾರ ಎಂದು ತೋರುತ್ತಿದೆ. ಇವರನ್ನು ಶುಭಮನ್ ಗಿಲ್ ಟ್ರಂಪ್ ಕಾರ್ಡ್ ರೀತಿ ಬಳಸಿಕೊಳ್ಳಬಹುದು ಎಂದು ಹಲವು ಮಾಜಿ ಆಟಗಾರರು ತಿಳಿಸಿದ್ದಾರೆ. ಇನ್ನು ವಾಷಿಂಗ್ಟನ್ ಸುಂದರ್ ಸಹ ಈ ಸ್ಥಾನದ ಮೇಲೆ ಕಣ್ಣು ನೆಟ್ಟಿರುವ ಇನ್ನೊಬ್ಬ ಪ್ಲೇಯರ್. ಯಾರಿಗೆ ಅವಕಾಶ ಲಭಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.












Click it and Unblock the Notifications