Ind vs Eng: ಭಾರತ ತಂಡದಲ್ಲಿ ಪ್ರಮುಖ ಬದಲಾವಣೆ ಖಚಿತ! ಕನ್ನಡಿಗನಿಗೆ ಸಿಗಲ್ವಾ ಅವಕಾಶ?

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳನ್ನು ಗೆದ್ದಿರುವ ಭಾರತ ತಂಡ ಇದೀಗ ಮೂರನೇ ಪಂದ್ಯ ಆಡಲು ಸಜ್ಜಾಗಿದೆ. ಸರಣಿ ಕ್ಲೀನ್ ಸ್ವೀಪ್ ಮಾಡುವ ಮೂಲಕ ಚಾಂಪಿಯನ್ಸ್ ಟ್ರೋಫಿಗೆ ಹೋಗುವ ಲೆಕ್ಕಾಚಾರ ರೋಹಿತ್ ಶರ್ಮಾ ಪಡೆಯದ್ದಾಗಿದೆ. ಬುಧವಾರ ಸರಣಿಯ ಕೊನೆಯ ಪಂದ್ಯ ನಡೆಯಲಿದ್ದು ಟೀಂ ಇಂಡಿಯಾ ಕಠಿಣ ಅಭ್ಯಾಸ ನಡೆಸುತ್ತಿದೆ.

ಬುಧವಾರ ಮಧ್ಯಾಹ್ನ 1.30ಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಉಭಯ ತಂಡಗಳು ಈಗಾಗಲೇ ಅಭ್ಯಾಸ ನಡೆಸಿವೆ. ಕೊನೆಯ ಪಂದ್ಯ ಗೆದ್ದು ಮರ್ಯಾದೆ ಉಳಿಸಿಕೊಳ್ಳಲು ಇಂಗ್ಲೆಂಡ್ ಯೋಜಿಸಿದ್ದರೆ, ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಲು ರಣತಂತ್ರ ರೂಪಿಸಿದೆ.

india vs england 3rd odi playing xi match timings pitch report

ತಂಡದಲ್ಲಿ ಬದಲಾವಣೆ?

ಭಾರತ ಈಗಾಗಲೇ ಸರಣಿ ಗೆದ್ದಿರುವ ಕಾರಣ ಕೊನೆಯ ಪಂದ್ಯದಲ್ಲಿ ಹಲವು ಬದಲಾವಣೆ ಮಾಡುವ ಸಾಧ್ಯತೆ ಇದೆ. ಚಾಂಪಿಯನ್ಸ್ ಟ್ರೋಫಿಗೆ ಮುನ್ನ ಹಲವು ಆಟಗಾರರಿಗೆ ಅವಕಾಶ ಕೊಡುವ ಲೆಕ್ಕಾಚಾರ ಕೂಡ ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ಗೌತಮ್ ಗಂಭೀರ್ ಅವರದ್ದಾಗಿರಬಹುದು. ಮೊದಲ ಎರಡು ಪಂದ್ಯಗಳಲ್ಲಿ ಬೆಂಚ್ ಕಾದಿರುವ ರಿಷಬ್ ಪಂತ್ ಮೂರನೇ ಪಂದ್ಯದಲ್ಲಿ ಆಡುವ ಸಾಧ್ಯತೆ ಇದ್ದು, ಕೆಎಲ್ ರಾಹುಲ್ ಹೊರಗುಳಿಯುವ ಸಾಧ್ಯತೆ ಕೂಡ ಇದೆ.

ಶುಭಮನ್ ಗಿಲ್‌ಗೆ ವಿಶ್ರಾಂತಿ ನೀಡಿ ಯಶಸ್ವಿ ಜೈಸ್ವಾಲ್‌ಗೆ ಅವಕಾಶ ಕೊಡುವ ಸಾಧ್ಯತೆ ಇದೆ. ಕುಲದೀಪ್ ಯಾದವ್ ಫಿಟ್ ಆದರೆ ಅವರು ಕೂಡ ಆಡಬಹುದು ಎಂದು ನಿರೀಕ್ಷೆ ಮಾಡಲಾಗಿದೆ. ಅರ್ಷದೀಪ್ ಸಿಂಗ್ ಕೂಡ ಕೊನೆಯ ಪಂದ್ಯದಲ್ಲಿ ಅವಕಾಶ ಸಿಗಬಹುದು.

ಭಾರತ ತಂಡದ ಸಂಭಾವ್ಯ ಆಡುವ ಬಳಗ

ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್/ ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅರ್ಷದೀಪ್ ಸಿಂಗ್, ವರುಣ್ ಸಿ.ವಿ, ಮೊಹಮ್ಮದ್ ಶಮಿ.

ಇಂಗ್ಲೆಂಡ್ ಸಂಭಾವ್ಯ ಆಡುವ ಬಳಗ

ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಟಾಮ್ ಬಾಂಟನ್ / ಜೇಮಿ ಓವರ್ಟನ್, ಗಸ್ ಆಟ್ಕಿನ್ಸನ್‌ / ಬ್ರೈಡನ್ ಕಾರ್ಸ್, ಆದಿಲ್ ರಶೀದ್, ಮಾರ್ಕ್ ವುಡ್‌, ಸಾಕಿಬ್ ಮಹಮೂದ್/ ಜೋಫ್ರಾ ಆರ್ಚರ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+