ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂಗ್ಲೆಂಡ್ ವಿರುದ್ಧದ ಟಿ20ಐ ಸರಣಿಗೆ ರೋಹಿತ್ ಶರ್ಮ ನಾಯಕ

|
Google Oneindia Kannada News

ಮುಂಬೈ, ಜೂನ್ 30: ಇಂಗ್ಲೆಂಡ್ ವಿರುದ್ಧದ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ನಾಯಕ ರೋಹಿತ್ ಶರ್ಮ ಅಲಭ್ಯರಾಗಿದ್ದಾರೆ. ಕೋವಿಡ್ 19 ಸೋಂಕಿಗೆ ಒಳಗಾಗಿರುವ ರೋಹಿತ್ ಸದ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಟಿ20ಐ ಸರಣಿಗೂ ಅಲಭ್ಯರಾಗಬಹುದು ಎಂಬ ಸುದ್ದಿಯೂ ಹಬ್ಬಿತ್ತು.

ಆದರೆ, ಜುಲೈ 7ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಟಿ20ಐ ಸರಣಿಗೆ ರೋಹಿತ್ ಶರ್ಮರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆಯ್ಕೆ ಸಮಿತಿ ಜೂನ್ 30ರಂದು ಸಂಜೆ ತಂಡವನ್ನು ಪ್ರಕಟಿಸಿದೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಆಡಲು ರೋಹಿತ್ ಬದಲು ಮಯಾಂಕ್ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಆಡಲು ರೋಹಿತ್ ಬದಲು ಮಯಾಂಕ್

ಅತ್ತ ಇಂಗ್ಲೆಂಡ್ ತಂಡಕ್ಕೆ ಜೋಸ್ ಬಟ್ಲರ್ ಹೊಸ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ನಡುವೆ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ರಿಷಬ್ ಪಂತ್, ಜಸ್ ಪ್ರೀತ್ ಬೂಮ್ರಾ ಮೊದಲ ಟಿ20ಐ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಉಳಿದೆರಡು ಪಂದ್ಯಕ್ಕೆ ಲಭ್ಯರಾಗಲಿದ್ದಾರೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಟೀಂ ಇಂಡಿಯಾ ಇತ್ತೀಚೆಗೆ ಐರ್ಲೆಂಡ್ ವಿರುದ್ಧ ಟಿ20ಐ ಸರಣಿ ಗೆದ್ದ ಸಂಭ್ರಮದಲ್ಲಿದೆ.

India vs England: Rohit Sharma To Lead In ODIs, T20Is

1ನೇ ಟಿ20ಐಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್.

2ನೇ ಮತ್ತು 3ನೇ ಟಿ20ಐಗಳಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್ (WK), ರಿಷಬ್ ಪಂತ್ (WK), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್

3 ಏಕದಿನ ಪಂದ್ಯಗಳಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (WK), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್ , ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಅರ್ಶ್ದೀಪ್ ಸಿಂಗ್.

ಅಂತಿಮ ಟೆಸ್ಟ್ ಪಂದ್ಯಕ್ಕೆ ಬೂಮ್ರಾ ನಾಯಕ:
ಅತಿಥೇಯ ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯವಾಡಬೇಕಿದ್ದ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮ ಅಲಭ್ಯರಾಗಿದ್ದಾರೆ. ರೋಹಿತ್ ಶರ್ಮಾ ಕೊರೊನಾಸೋಂಕು ತಗುಲಿಸಿಕೊಂಡಿದ್ದು, ಮೈದಾನಕ್ಕೆ ಇಳಿಯುವಂತಿಲ್ಲ ಎಂದು ವೈದ್ಯರು ಹೇಳಿದ್ದಾರೆ.

ಕಪಿಲ್ ದೇವ್ ಬಳಿಕ ಭಾರತ ಟೆಸ್ಟ್ ತಂಡಕ್ಕೆ ನಾಯಕನಾದ 2ನೇ ವೇಗಿ ಬುಮ್ರಾ ಕಪಿಲ್ ದೇವ್ ಬಳಿಕ ಭಾರತ ಟೆಸ್ಟ್ ತಂಡಕ್ಕೆ ನಾಯಕನಾದ 2ನೇ ವೇಗಿ ಬುಮ್ರಾ

ಹೀಗಾಗಿ, ಐದನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮ ಬದಲಿಗೆ ತಂಡಕ್ಕೆ ಮತ್ತೊಬ್ಬ ಆಟಗಾರರನ್ನು ಸೇರ್ಪಡೆಗೊಳಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮುಂದಾಗಿದ್ದು, ಕರ್ನಾಟಕ ಆರಂಭಿಕ ಆಟಗಾರ ಮಯಾಂಕ್ ಅಗರವಾಲ್ ಅವರಿಗೆ ತಕ್ಷಣವೇ ತಂಡ ಸೇರಲು ಸೂಚಿಸಲಾಗಿದೆ. ಈ ನಡುವೆ ರೋಹಿತ್ ಶರ್ಮ ಸ್ಥಾನದಲ್ಲಿ ವೇಗಿ ಜಸ್ ಪ್ರೀತ್ ಬೂಮ್ರಾ ತಂಡವನ್ನು ಮುನ್ನಡೆಸಲಿದ್ದಾರೆ.

ಇತ್ತೀಚಿಗೆ ಕೇಂದ್ರ ಸರ್ಕಾರ ನೀಡಿರುವ ಕೋವಿಡ್ ಪರಿಷ್ಕೃತ ನಿಯಮಗಳ ಪ್ರಕಾರ, ಮಯಾಂಕ್ ಅಗರ್ವಾಲ್ ಯಾವುದೇ ಕ್ವಾರಂಟೈನ್‌ಗೆ ಒಳಗಾಗುವ ಅಗತ್ಯವಿಲ್ಲ ಮತ್ತು ಅಗತ್ಯವಿದ್ದರೆ ತಕ್ಷಣವೇ ಆಡಲು ಲಭ್ಯವಿರುತ್ತಾರೆ. ಇದಕ್ಕೂ ಮೊದಲು, ಮೇನಲ್ಲಿ ಹೆಸರಿಸಲಾದ ಎಡ್ಜ್‌ಬಾಸ್ಟನ್ ಟೆಸ್ಟ್‌ಗಾಗಿ ಟೀಮ್ ಇಂಡಿಯಾದ ತಂಡದಿಂದ ಅಗರ್ವಾಲ್ ಹೊರಗುಳಿದಿದ್ದರು. ಆದರೆ ಕೆಎಲ್ ರಾಹುಲ್ ಅವರ ಗಾಯ ಮತ್ತು ರೋಹಿತ್ ಶರ್ಮಾ ಅವರ ಚೇತರಿಕೆಯ ಮೇಲಿನ ಅನುಮಾನಗಳು ಅವರಿಗೆ ಅವಕಾಶವನ್ನು ನೀಡಿವೆ.

English summary
The BCCI on Thursday announced Team India's squads for the three-match T20I and ODI series against England to be played after the fifth Test.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X