ಭಾರತ-ಇಂಗ್ಲೆಂಡ್ ಟೆಸ್ಟ್ 2025: ಭಾರತದ ಪ್ಲೇಯಿಂಗ್ 11ನಲ್ಲಿ ಮೂವರು ಕನ್ನಡಿಗರು; ಮರುಕಳಿಸಿದ 2002ರ ಇತಿಹಾಸ
ಭಾರತ-ಇಂಗ್ಲೆಂಡ್ 5 ಪಂದ್ಯಗಳ ಟೆಸ್ಟ್ ಸರಣಿ ಶಕ್ರವಾರ ಜೂನ್ 20ರಿಂದ ಆರಂಭವಾಗಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಎದುರಾಳಿ ಆಂಗ್ಲರು ಬೌಲಿಂಗ್ ಮುಂದುವರೆಸಿದ್ದಾರೆ. ಅದರಂತೆಯೇ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಇನ್ನೂ ಈ ಬಾರಿಯ ಪ್ಲೇಯಿಂಗ್ 11ನಲ್ಲಿ 3 ಕನ್ನಡಿಗರು ಸ್ಥಾನ ಪಡೆದಿದ್ದಾರೆ. ಅದು 23 ವರ್ಷಗಳ ಬಳಿಕ. ಹಾಗಾದ್ರೆ ಯಾರು ಅವರು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
70ರಿಂದ 90ರ ದಶಕದ ಅಂತ್ಯದವರೆಗೆ ರಾಜ್ಯದ ಕ್ರಿಕೆಟಿಗರು ಭಾರತ ತಂಡದಲ್ಲಿ ಅಧಿಪತ್ಯ ಸಾಧಿಸಿದ್ದ ಸಮಯವಾಗಿತ್ತು. 90ರ ದಶಕದಲ್ಲಿ ಬರೋಬ್ಬರಿ 7 ಮಂದಿ ಕನ್ನಡಿಗರು ಒಂದೇ ಬಾರಿ ಭಾರತ ತಂಡದಲ್ಲಿ ಕಾಣಿಸಿಕೊಂಡು ದಾಖಲೆ ಬರೆದಿರುವ ಉದಾಹರಣೆ ಇದೆ. ಇನ್ನು 2002ರಲ್ಲಿ ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಮತ್ತು ಜಾವಗಲ್ ಶ್ರೀನಾಥ್ ಮೂವರು ಕನ್ನಡಿಗರು ಭಾರತ ಪರ ಕಣಕ್ಕಿಳಿದದ್ದೇ ಕೊನೆಯಾಗಿತ್ತು.

ಇದೀಗ 2025ರಲ್ಲಿ 23 ವರ್ಷಗಳ ಬಳಿಕ ಮತ್ತೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಕರ್ನಾಟಕದ ಮೂವರು ಆಟಗಾರರು ಒಂದೇ ಬಾರಿ ಭಾರತದ ಪರ ಆಡುವ 11ರ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಕೆ.ಎಲ್.ರಾಹುಲ್, ಕರುಣ್ ನಾಯರ್ ಮತ್ತು ಪ್ರಸಿದ್ಧ್ ಕೃಷ್ಣ ಸ್ಥಾನ ಪಡೆದಿದ್ದು, ಮತ್ತೆ 2002ರ ಇತಿಹಾಸ ಮರುಕಳಿಸಿದಂತಾಗಿದೆ.
ಟೀಮ್ ಇಂಡಿಯಾ ಇದೇ ಮೊದಲ ಬಾರಿಗೆ ಹೊಸ ನಾಯಕ ಶುಭ್ಮನ್ ಗಿಲ್ ನೇತೃತ್ವದಲ್ಲಿ ಟೆಸ್ಟ್ ಪಂದ್ಯ ಆಡುತ್ತಿದೆ. ಈಗಾಗಲೇ ಟಾಸ್ ಸೋತು ಭಾರತದ ಮೊದಲು ಬ್ಯಾಟ್ ಮಾಡುತ್ತಿದೆ. ಇನ್ನು ಜಸ್ಪ್ರೀತ್ ಬುಮ್ರಾ ನೇತೃತ್ವದಲ್ಲಿ ಭಾರತ ತಂಡ ಬೌಲಿಂಗ್ ಪಡೆ ದಾಳಿ ನಡೆಸಲಿದೆ. ವಿಕೆಟ್ ಕೀಪರ್ ಹಾಗೂ ಉಪನಾಯಕನಾಗಿ ರಿಷಭ್ ಪಂತ್ ಅವರು ತಂಡದಲ್ಲಿದ್ದಾರೆ.
ಲೀಡ್ಸ್‌ನ ಹೆಡಿಂಗ್ಲೇ ಮೈದಾನದಲ್ಲಿ ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಕನ್ನಡಿಗರಾದ ರಾಹುಲ್ ಆರಂಭಿಕರಾಗಿ ಕಣಕ್ಕಿಳಿದು 8 ಬೌಂಡರಿ ನೆರವಿನಿಂದ 42 ರನ್ ಬಾರಿಸಿ ಔಟ್ ಆಗಿದ್ದಾರೆ. ದೇಶೀಯ ಟೂರ್ನಿಯಲ್ಲಿ ಅಬ್ಬರಿಸಿದ್ದ ಕರುಣ್ ನಾಯರ್ 6ನೇ ಕ್ರಮಾಂಕದಲ್ಲಿ ಆಡುವುದು ಖಚಿತ.
ಕನ್ನಡಿಗ ಪ್ರಸಿದ್ಧ್ ಕೃಷ್ಣ ಮೂರನೇ ವೇಗಿಯಾಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರಿತ್ ಬುಮ್ರಾ ಹಾಗೂ ಸಿರಾಜ್‌ಗೆ ಸಾಥ್ ನೀಡಲು ಸಿದ್ಧರಾಗಿದ್ದಾರೆ. ಇತ್ತೀಚಿಗೆ ಭಾರತದಲ್ಲಿ ನಡೆದಿದ್ದ ಐಪಿಎಲ್‌ನಲ್ಲಿ ಇವರು ಬಿಗುವಿನ ದಾಳಿ ನಡೆಸಿ ಪರ್ಪಲ್ ಕ್ಯಾಪ್ ಪಡೆದಿದ್ದರು. ಈ ಮೂಲಕ ಆಯ್ಕೆ ಸಮಿತಿಯ ಮನ ಗೆದ್ದಿದ್ದರು. ಬಹು ವರ್ಷದ ಬಳಿಕ ಟೀಮ್ ಇಂಡಿಯಾದಲ್ಲಿ ಮೂವರು ಕನ್ನಡಿಗರು ಆಡುತ್ತಿರುವುದು ವಿಶೇಷ. ಈ ಮೊದಲು 23 ವರ್ಷಗಳ ಹಿಂದೆ ಆಗಿತ್ತು
ಟೀಮ್ ಇಂಡಿಯಾ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ಕೆ.ಎಲ್.ರಾಹುಲ್, ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಕರುಣ್ ನಾಯರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.












Click it and Unblock the Notifications