ಯಶಸ್ವಿ ಜೈಸ್ವಾಲ್ ಅವರಿಗಿಂತ ನಾಯಿ ಎಷ್ಟೋ ಮೇಲೂ ಎಂದು ನೆಟ್ಟಿಗರು ಹೇಳಿದ್ಯಾಕೆ?: ವಿಡಿಯೋದಲ್ಲಿದೆ ಉತ್ತರ
ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯ ಹೆಡಿಂಗ್ಲೆ ಟೆಸ್ಟ್‌ನ ಮೊದಲ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ ವಿರುದ್ಧ ಇಂಡಿಯಾ ಬೃಹತ್ ಮೊತ್ತ ಕಲೆಹಾಕಿತ್ತು. ಆದರೆ, ಇದೀಗ ಭಾರತದ ಸ್ಟಾರ್ ಆಟಗಾರ ಯಶಸ್ವಿ ಜೈಸ್ವಾಲ್ ಅವರು ಮೂರು ಕ್ಯಾಚ್‌ಗಳನ್ನು ಕೈಚೆಲ್ಲಿ ಇಂಗ್ಲೆಂಡ್ ಬ್ಯಾಟರ್‌ಗಳಿಗೆ ಅನುಕೂಲ ಮಾಡಿಕೊಟ್ಟು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಟ್ರೋಲ್ ಆಗುತ್ತಿದ್ದಾರೆ.
ಲೀಡ್ಸ್ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಬೃಹತ್ ಮೊತ್ತದ ರನ್‌ಗಳನ್ನು ಕಲೆಹಾಕುವ ಮೂಲಕ ಟೀಂ ಇಂಡಿಯಾ ಪಾರಮ್ಯ ಮರೆದಿತ್ತು. ಆದರೆ ಇದೀಗ ಇಂಗ್ಲೇಂಡ್ ಪ್ರಮುಖ ಮೂರು ಬ್ಯಾಟರ್‌ಗಳನ್ನು ಔಟ್ ಮಾಡುವ ಅವಕಾಶ ಇದ್ದರೂ ಯಶಸ್ವಿ ಜೈಸ್ವಾಲ್ ಅವರು ಕ್ಯಾಚ್ ಡ್ರಾಪ್ ಮಾಡುವ ಮೂಲಕ ಅವರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಟ್ರೋಲ್ ಆಗುತ್ತಿದೆ.

ಮೊದಲ ದಿನದಾಟದ ಆರಂಭದಲ್ಲೇ ಬೆನ್ ಡಕೆಟ್ ಕ್ಯಾಚ್ ಕೈಚೆಲ್ಲಿದ್ದ ಯಶಸ್ವಿ ಜೈಸ್ವಾಲ್, ಬಳಿಕ ಒಲೀ ಪೋಪ್ ನೀಡಿದ ಕ್ಯಾಚ್ ಅನ್ನು ಕೈಬಿಟ್ಟರು. ನಂತರೆ ಮತ್ತೆ ಜಸ್ಪ್ರೀತ್ ಬುಮ್ರಾ ಓವರ್ನಲ್ಲಿ ಹ್ಯಾರಿ ಬ್ರೂಕ್ ನೀಡಿದ ಸುಲಭ ಕ್ಯಾಚ್ ಅನ್ನು ಸ್ಲಿಪ್ನಲ್ಲಿದ್ದ ಯಶಸ್ವಿ ಜೈಸ್ವಾಲ್ ಕೈಬಿಟ್ಟು ಜೀವದಾನ ನೀಡಿದರು.
ಒಂದೇ ಇನಿಂಗ್ಸ್ನಲ್ಲಿ 3 ಕ್ಯಾಚ್ಗಳನ್ನು ಬಿಡುವ ಮೂಲಕ ಜೈಸ್ವಾಲ್ ಟೀಮ್ ಇಂಡಿಯಾ ಪರ ಟೆಸ್ಟ್ ಇನಿಂಗ್ಸ್ವೊಂದರಲ್ಲಿ ಅತೀ ಹೆಚ್ಚು ಕ್ಯಾಚ್ ಕೈಬಿಟ್ಟ ಫೀಲ್ಡರ್ ಎಂಬ ಕಳಪೆ ದಾಖಲೆ ಗಿಟ್ಟಿಸಿಕೊಂಡಿದ್ದಾರೆ.
23 ವರ್ಷದ ಯಶಸ್ವಿ ಜೈಸ್ವಾಲ್ ಭಾರತದ ಪರ ಟೆಸ್ಟ್ ಇನಿಂಗ್ಸ್ನಲ್ಲಿ ಅತ್ಯಂತ ಕಳಪೆ ಫೀಲ್ಡಿಂಗ್ ಪ್ರದರ್ಶಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಟೀಮ್ ಇಂಡಿಯಾ ಆಟಗಾರರು ನೀಡಿದ ಜೀವದಾನದ ಅವಕಾಶವನ್ನು ಇಂಗ್ಲೆಂಡ್ ಆಟಗಾರರು ಉತ್ತಮವಾಗಿ ಬಳಿಸಿಕೊಂಡ್ರು.
ಬೆನ್ ಡಕೆಟ್ 62 ರನ್ ಚಚ್ಚಿದರೆ, ಒಲೀ ಪೋಪ್ 106 ರನ್ಗಳ ಶತಕ ಸಿಡಿಸಿದರು. ಹ್ಯಾರಿ ಬ್ರೂಕ್ 99 ರನ್ಗಳ ಇನಿಂಗ್ಸ್ ಆಡಿದರು. ಈ ಮೂಲಕ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್ನಲ್ಲಿ 465 ಕಲೆಹಾಕುವಲ್ಲಿ ಯಶಸ್ವಿ ಆಗಿದೆ. ಇವರು ನೀಡಿದ ಕ್ಯಾಚ್ ಕೈಚೆಲ್ಲದಿದ್ದಿದ್ದರೆ ಇಂಗ್ಲೆಂಡ್ ಇಷ್ಟು ಮೊತ್ತವನ್ನು ಕಲೆಹಾಕಲು ಸಾಧ್ಯವಾಗುತ್ತಿರಲಿಲ್ಲ. ಮೂರು ಕ್ಯಾಚ್‌ಗಳನ್ನು ಕೈಚೆಲ್ಲಿದ ಯಶಸ್ವಿ ಜೈಸ್ವಾಲ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಹಿಗ್ಗಾಮುಗ್ಗಾ ಟ್ರೋಲ್ ಮಾಡುತ್ತಿದ್ದಾರೆ.
ಮೂರು ಕ್ಯಾಚ್ ಕೈಚೆಲ್ಲಿ ಇಂಗ್ಲಡ್ ಬ್ಯಾಟರ್‌ಗಳಿಗೆ ಬೃಹತ್ ರನ್ ಕಲೆಹಾಕಲು ಅವಕಾಶ ಮಾಡಿಕೊಟ್ಟ ಯಶಸ್ವಿ ಜೈಸ್ವಾಲ್ ಅವರನ್ನು ನೆಟ್ಟಿಗರೊಬ್ಬರು, ಬಾಲನ್ನು ನಾಯಿ ಬಾಯಲ್ಲಿಯೇ ಕ್ಯಾಚ್ ಹಿಡಿದಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಹೀಗೆ ಜೈಸ್ವಾಲ್ ಅವರು ನಾಯಿಗಿಂತ ಕಡೆಯಾಗಿಬಿಟ್ರಾ ಅಂತಾ ತೋರಿಸಿದ್ದಾರೆ. ಇದು ಭಾರೀ ವೈರಲ್ ಆಗುತ್ತಿದೆ.
Ab to sharm kar le Yashasvi Jaiswal pic.twitter.com/TTKTUvYJ4z
— Raja Babu (@GaurangBhardwa1) June 22, 2025
ಕೆಲವೊಮ್ಮೆ ಬಾಲನ್ನು ಹಿಡಿಯುವುದು ಕಷ್ಟ ಮತ್ತು ಯಾರೂ ಉದ್ದೇಶಪೂರ್ವಕವಾಗಿ ಕ್ಯಾಚ್ ಅನ್ನು ಕೈಚೆಲ್ಲುವುದಿಲ್ಲ. ಎಲ್ಲರೂ ನಿಜವಾಗಿಯೂ ಕಷ್ಟಪಟ್ಟು ಪ್ರಯತ್ನಿಸುತ್ತಿದ್ದಾರೆ ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ. ಬ್ಯಾಟಿಂಗ್‌ನಲ್ಲಿ ಯಶಸ್ವಿ ಜೈಸ್ವಾಲ್ ಅವರು ಅತ್ಯದ್ಭುತ ಪ್ರದರ್ಶನ ತೋರಿ ಇಂಗ್ಲೆಂಡ್ ಬೌಲರ್‌ಗಳಿಗೆ ಬೆವರಿಳಿಸಿದ್ದರು. ಆದರೆ, ಫೀಲ್ಡಿಂಗ್‌ನಲ್ಲಿ ಮೂರು ಕ್ಯಾಚ್‌ಗಳನ್ನು ಕೈಚೆಲ್ಲುವ ಮೂಲಕ ವಿಫಲರಾದರು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications