India vs New Zealand: ವೈಭವ್ ಸೂರ್ಯವಂಶಿಗೆ ಮತ್ತೊಂದು ಅವಕಾಶ..RCB ಸ್ಟಾರ್ ಭುವನೇಶ್ವರ್ ಕುಮಾರ್ ಔಟ್..

India Vs Newzeland 3rd T20: ಟೀಮ್ ಇಂಡಿಯಾವು ಈಗಾಗಲೇ ನ್ಯೂಜಿಲೆಂಡ್‌ ವಿರುದ್ಧ ಎರಡು ಟಿ20 ಪಂದ್ಯಗಳನ್ನು ಗೆದ್ದು ಮನ್ನಡೆ ಕಾಯ್ದುಕೊಂಡಿದೆ. ಇದೀಗ ಮಂಗಳವಾರ (ಅಕ್ಟೋಬರ್ 27) ನಡೆಯಲಿರುವ ಸಮರದಲ್ಲೂ ಗೆಲುವು ಸಾಧಿಸಿ ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿದೆ. ಈ ಹಿನ್ನೆಲೆ ಭಾರತ ತಂಡದ ಮ್ಯಾನೇಜ್‌ಮೆಂಟ್‌ ಪ್ಲೇಯಿಂಗ್‌ 11ನಲ್ಲಿ ಬದಲಾವಣೆ ಮಾಡಲು ಚಿಂತನೆ ನಡೆಸಿದೆ ಎನ್ನುವ ಮಾಹಿತಿ ಹೊರಬಿದ್ದಿದೆ.

ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಈಗಾಗಲೇ ಮೊದಲ ಎರಡು ಮ್ಯಾಚ್‌ಗಳನ್ನು ಗೆದ್ದು 2-0 ಮುನ್ನಡೆ ಸಾಧಿಸಿರುವ ಟೀಮ್ ಇಂಡಿಯಾ, ಮಂಗಳವಾರವೂ ವೆಲ್ಲಿಂಗ್ಟನ್‌ನಲ್ಲಿ ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳುವ ಭರವಸೆಯಲ್ಲಿದೆ. ಸರಣಿ ಕೈವಶ ಮಾಡಿಕೊಳ್ಳುವ ನಿಟ್ಟಿನಲ್ಲಿ ತಂಡದ ಮ್ಯಾನೇಜ್‌ಮೆಂಟ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಕೆಲವೊಂದು ಪ್ರಮುಖ ಬದಲಾವಣೆಗಳನ್ನು ಮಾಡಲು ಪ್ಲ್ಯಾನ್ ಮಾಡಿದೆ ಎಂದು ತಿಳಿದುಬಂದಿದೆ.

India vs New Zealand 3rd T20I Vaibhav Sooryavanshi May Get Another Chance Know Complete details

ವೈಭವ್ ಸೂರ್ಯವಂಶಿಗೆ ಮತ್ತೊಂದು ಅವಕಾಶ ಸಾಧ್ಯತೆ

ತಂಡದ ಪ್ರಮುಖ ವಿಕೆಟ್‌ ಕೀಪರ್-ಬ್ಯಾಟರ್ ಇಶಾನ್ ಕಿಶನ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮುಂಬರುವ ಪ್ರಮುಖ ಸರಣಿಗಳನ್ನು ಗಮನದಲ್ಲಿಟ್ಟುಕೊಂಡು ಮ್ಯಾನೇಜ್‌ಮೆಂಟ್ ಇಶಾನ್ ಕಿಶನ್ ಅವರಿಗೆ ಮೂರನೇ ಟಿ20 ಪಂದ್ಯದಲ್ಲೂ ವಿಶ್ರಾಂತಿ ನೀಡಲು ನಿರ್ಧರಿಸಿದೆ. ಅವರ ಅನುಪಸ್ಥಿತಿಯಲ್ಲಿ ಯುವ ಆಟಗಾರ ವೈಭವ್ ಸೂರ್ಯವಂಶಿ ಅವರಿಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಯಿದೆ.

ಕಳೆದ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ವೈಭವ್ ಸೂರ್ಯವಂಶಿ ಕೇವಲ 4 ರನ್‌ಗಳಿಗೆ ಔಟಾಗಿ ನಿರಾಸೆ ಮೂಡಿಸಿದ್ದರು. ಮುಂದಿನ ಪಂದ್ಯದಲ್ಲೂ ಅವರಿಗೆ ತಮ್ಮ ನೈಜ ಆಟ ಪ್ರದರ್ಶಿಸಲು ಅವಕಾಶ ನೀಡಲಾಗುವುದು. ಜೊತೆಗೆ, ಅನುಭವಿ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮ ಅವರೊಂದಿಗೆ ಇನಿಂಗ್ಸ್ ಆರಂಭಿಸುವ ಅಥವಾ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ತಂತ್ರಗಾರಿಕೆಯನ್ನು ಮ್ಯಾನೇಜ್‌ಮೆಂಟ್ ಸಿದ್ಧಪಡಿಸುತ್ತಿದೆ.

ಬೌಲಿಂಗ್ ಪಡೆಗಿರುವ ಸವಾಲುಗಳು..

ಮತ್ತೊಂದೆಡೆ ಸುಮಾರು 4 ವರ್ಷಗಳ ನಂತರ ಭಾರತ ತಂಡಕ್ಕೆ ಪುನರಾಗಮನ ಮಾಡಿರುವ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಅವರ ಪ್ರದರ್ಶನ ಕಳಪೆಯಾಗಿದೆ. ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ 8 ಓವರ್‌ಗಳನ್ನು ಬೌಲಿಂಗ್ ಮಾಡಿರುವ ಅವರು 99 ರನ್ ನೀಡಿ ಕೇವಲ 1 ವಿಕೆಟ್ ಪಡೆದಿದ್ದಾರೆ. ಕಂಟ್ರೋಲ್ ಮತ್ತು ಸ್ವಿಂಗ್ ಕೊರತೆಯಿಂದಾಗಿ ಅವರ ಸ್ಥಾನಕ್ಕೆ ಕಂಟಕ ಎದುರಾಗಿದೆ.

ಮಂಗಳವಾರ ನಡೆಯಲಿರುವ ಮೂರನೇ ಪಂದ್ಯದಲ್ಲಿ ಭುವನೇಶ್ವರ್‌ ಕುಮಾರ್‌ಗೆ ವಿಶ್ರಾಂತಿ ನೀಡಿ ಯುವ ವೇಗಿ ಮಯಾಂಕ್ ಯಾದವ್ ಅಥವಾ ಪ್ರಿನ್ಸ್ ಯಾದವ್ ಅವರಿಗೆ ಅವಕಾಶ ನೀಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಆದರೆ, ಅನುಭವದ ಆಧಾರದ ಮೇಲೆ ಭುವಿಗೆ ಇನ್ನೊಂದು ಅವಕಾಶ ನೀಡಲಾಗುತ್ತದೆಯೇ ಎಂಬ ಕುತೂಹಲವೂ ಇದೆ.

ಸ್ಪಿನರ್ಸ್ ಮತ್ತು ಆಲ್‌ರೌಂಡರ್ ಪಡೆ

ತಂಡವು ಸರಣಿಯಲ್ಲಿ ಶುಭಾರಂಭ ಮಾಡಿರುವುದರಿಂದ ಹಿರಿಯ ಆಲ್‌ರೌಂಡರ್ ಅಕ್ಷರ್ ಪಟೇಲ್‌ಗೆ ವಿಶ್ರಾಂತಿ ನೀಡಿ, ಅವರ ಜಾಗದಲ್ಲಿ ವರುಣ್ ಚಕ್ರವರ್ತಿ ಅಥವಾ ಕುಲದೀಪ್ ಯಾದವ್ ಅವರಿಗೆ ಅವಕಾಶ ಕಲ್ಪಿಸುವ ಚಿಂತನೆಯೂ ಇದೆ. ಆದರೂ 8ನೇ ಕ್ರಮಾಂಕದವರೆಗೆ ಬ್ಯಾಟಿಂಗ್ ಗಮನಲ್ಲಿಟ್ಟುಕೊಂಡು ಅಕ್ಷರ್ ಪಟೇಲ್ ಅವರನ್ನೇ ಮುಂದುವರೆಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.

ಭಾರತದ ಸಂಭಾವ್ಯ ಪ್ಲೇಯಿಂಗ್ 11

ಶ್ರೇಯಸ್ ಅಯ್ಯರ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ತಿಲಕ್ ವರ್ಮಾ (ಉಪನಾಯಕ), ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ್, ಅಕ್ಷರ್ ಪಟೇಲ್/ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಭುವನೇಶ್ವರ್ ಕುಮಾರ್/ಮಯಾಂಕ್ ಯಾದವ್, ಪ್ರಿನ್ಸ್ ಯಾದವ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+