ನ್ಯೂಜಿಲೆಂಡ್‌ ವಿರುದ್ಧದ ನಾಲ್ಕನೇ ಟಿ20 ಪಂದ್ಯದಿಂದ 'ಸ್ವಿಂಗ್ ಸುಲ್ತಾನ್' ಭುವನೇಶ್ವರ್ ಕುಮಾರ್ ಔಟ್..

India Vs New Zealand 4th T20: ಭಾರತ-ನ್ಯೂಜಿಲೆಂಡ್‌ ವಿರುದ್ಧದ ನಾಲ್ಕನೇ ಟಿ20 ಪಂದ್ಯ ಶುಕ್ರವಾರ (ಅಕ್ಟೋಬರ್ 30) ನಡೆಯಲಿದೆ. ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ ಪ್ರಮುಖ ಬದಲಾವಣೆ ಮಾಡುವ ಸಾಧ್ಯತೆಯಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡವು ಸತತ ಮೂರು ಪಂದ್ಯಗಳನ್ನು ಗೆದ್ದು 3-0 ಅಂತರದಿಂದ ಸರಣಿಯನ್ನು ಈಗಾಗಲೇ ತನ್ನದಾಗಿಸಿಕೊಂಡಿದೆ. ಸರಣಿ ಕೈವಶವಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರ ಆಕ್ಲೆಂಡ್‌ನಲ್ಲಿ ನಡೆಯಲಿರುವ ನಾಲ್ಕನೇ ಟಿ20 ಪಂದ್ಯಕ್ಕೆ ಭಾರತ ತಂಡದಲ್ಲಿ ಆಡುವ ಬಳಗದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲು ಮ್ಯಾನೇಜ್‌ಮೆಂಟ್ ಮುಂದಾಗಿದೆ.

India vs New Zealand 4th T20 Kuldeep Dube May Play Bhuvneshwar Kumar Under Pressure Know details

ಅವಕಾಶಕ್ಕಾಗಿ ಕಾಯುತ್ತಿರುವವರ ಆಟಗಾರರ ವಿವರ

ಪ್ರಸ್ತುತ ಪ್ರವಾಸಕ್ಕಾಗಿ ಆಯ್ಕೆ ಮಾಡಲಾಗಿರುವ 17 ಸದಸ್ಯರ ಭಾರತೀಯ ಬಳಗದಲ್ಲಿ ಈವರೆಗೆ 13 ಆಟಗಾರರು ಮೈದಾನಕ್ಕಿಳಿದಿದ್ದಾರೆ. ಆದರೆ ತಂಡದಲ್ಲಿರುವ ಇನ್ನೂ ನಾಲ್ವರು ಪ್ರಮುಖ ಆಟಗಾರರಿಗೆ ಕಣಕ್ಕಿಳಿಯುವ ಅವಕಾಶ ಸಿಕ್ಕಿಲ್ಲ. ಇಶಾನ್ ಕಿಶನ್ ಗಾಯಗೊಂಡಾಗ ಪರ್ಯಾಯವಾಗಿ ತಂಡಕ್ಕೆ ಸೇರ್ಪಡೆಯಾಗಿದ್ದ ಕುಮಾರ್ ಕುಶಾಗ್ರ ಸೇರಿದಂತೆ, ಅನುಭವಿ ಸ್ಪಿನ್ನರ್ ಕುಲದೀಪ್ ಯಾದವ್, ಮಿಸ್ಟ್ರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಮತ್ತು ಆಲ್ರೌಂಡರ್ ಶಿವಂ ದುಬೆ ಇನ್ನೂ ತಮ್ಮ ಸರದಿಗಾಗಿ ಕಾಯುತ್ತಿದ್ದಾರೆ.

ತವರಿನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಕುಲದೀಪ್ ಹಾಗೂ ದುಬೆ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಇತ್ತ ವರುಣ್ ಚಕ್ರವರ್ತಿ ಸೆಪ್ಟೆಂಬರ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಆಡಿದ ನಂತರ ಯಾವುದೇ ಸ್ಪರ್ಧಾತ್ಮಕ ಪಂದ್ಯದಲ್ಲಿ ಭಾಗವಹಿಸಿಲ್ಲ. ಹೀಗಾಗಿ ಸರಣಿ ಕೈಯಲ್ಲಿರುವುದರಿಂದ ಈ ಆಟಗಾರರಿಗೆ ಆಕ್ಲೆಂಡ್‌ನಲ್ಲಿ ಅವಕಾಶ ನೀಡುವ ಸಾಧ್ಯತೆಯಿದೆ.

ಭುವನೇಶ್ವರ್ ಕುಮಾರ್ ಪ್ಲೇಯಿಂಗ್ 11ನಿಂದ ಔಟ್?

ಐಪಿಎಲ್‌ನ ಕಳೆದ ಎರಡು ಆವೃತ್ತಿಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರಿಂದ ಸುಮಾರು ನಾಲ್ಕು ವರ್ಷಗಳ ಸುದೀರ್ಘ ವಿರಾಮದ ನಂತರ ಭುವನೇಶ್ವರ್ ಕುಮಾರ್ ಅವರಿಗೆ ಭಾರತ ತಂಡಕ್ಕೆ ಕಮ್‌ಬ್ಯಾಕ್ ಮಾಡುವ ಅವಕಾಶ ಸಿಕ್ಕಿತ್ತು. ಆದರೆ, ಈ ಪ್ರವಾಸದಲ್ಲಿ ಅವರ ಪ್ರದರ್ಶನ ನಿರೀಕ್ಷಿತ ಮಟ್ಟದಲ್ಲಿ ಮೂಡಿಬಂದಿಲ್ಲ.

ಭುವನೇಶ್ವರ್‌ ಕುಮಾರ್ ಮುಂದಿರುವ ಸವಾಲೇನು?

ನ್ಯೂಜಿಲೆಂಡ್ ವಿರುದ್ಧ ಆಡಿದ ಮೂರು ಟಿ20 ಪಂದ್ಯಗಳಲ್ಲಿ ಭುವಿ ಎಸೆದ 72 ಎಸೆತಗಳಲ್ಲಿ ಬರೋಬ್ಬರಿ 139 ರನ್ ಬಿಟ್ಟುಕೊಟ್ಟು ದುಬಾರಿಯಾಗಿದ್ದಾರೆ. ಪ್ರಿನ್ಸ್ ಯಾದವ್ (2ನೇ ಮತ್ತು 3ನೇ ಪಂದ್ಯ) ಹಾಗೂ ಮಯಾಂಕ್ ಯಾದವ್ (1ನೇ ಪಂದ್ಯ) ಅವರಂತಹ ಉದಯೋನ್ಮುಖ ವೇಗಿಗಳನ್ನು ಬದಲಿಸಿ ಕಣಕ್ಕಿಳಿಸಲಾಗುತ್ತಿದೆ. ಕಳಪೆ ಫಾರ್ಮ್‌ನಿಂದಾಗಿ ಭುವನೇಶ್ವರ್ ಕುಮಾರ್ ಮುಂಬರುವ ಪಂದ್ಯದಲ್ಲಿ ತಮ್ಮ ಸ್ಥಾನ ಉಳಿಸಿಕೊಳ್ಳುವುದು ದೊಡ್ಡ ಸವಾಲಾಗಿದೆ.

ಇಶಾನ್ ಕಿಶನ್ ಫಿಟ್‌ನೆಸ್, ವೈಭವ್ ಸೂರ್ಯವಂಶಿ ಪ್ರಸ್ತುತ ಸ್ಥಿತಿ

ಕಳೆದ ಎರಡು ಪಂದ್ಯಗಳಿಂದ ಗಾಯದ ಸಮಸ್ಯೆಯಿಂದಾಗಿ ಹೊರಗುಳಿದಿರುವ ವಿಕೆಟ್‌ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಅವರ ದೈಹಿಕ ಕ್ಷಮತೆ ಕುರಿತು ಇನ್ನೂ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಇಶಾನ್ ಅವರ ಅನುಪಸ್ಥಿತಿಯಲ್ಲಿ ಅವಕಾಶ ಪಡೆದ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ 2ನೇ ಪಂದ್ಯದಲ್ಲಿ ವಿಫಲರಾದರೂ, 3ನೇ ಪಂದ್ಯದಲ್ಲಿ ಕೇವಲ 19 ಎಸೆತಗಳಲ್ಲಿ 45 ರನ್ ಬಾರಿಸಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ. ಒಂದು ವೇಳೆ ಇಶಾನ್ ಕಿಶನ್ ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಂಡರೂ ಸಹ ಭಾರತ ಈಗಾಗಲೇ ಸರಣಿ ಗೆದ್ದಿರುವುದರಿಂದ ಅವರಿಗೆ ಮುಂದಿನ ಪಂದ್ಯಗಳಿಗೂ ವಿಶ್ರಾಂತಿ ನೀಡಿ, ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡುವ ಸಾಧ್ಯತೆಯೇ ಹೆಚ್ಚಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+