India vs Pakistan: ಭಾರತ ಪಾಕಿಸ್ತಾನ ಪಂದ್ಯ; 1 ಲಕ್ಷ ಬೆಲೆಯ ಟಿಕೆಟ್ ಕೂಡ ಸೋಲ್ಡ್‌ ಔಟ್‌!

ಚಾಂಪಿಯನ್ಸ್ ಟ್ರೋಫಿ 2025ರ ಪಂದ್ಯಾವಳಿ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಪಂದ್ಯಾವಳಿಗೆ ಪಾಕಿಸ್ತಾನ ಆತಿಥ್ಯ ವಹಿಸುತ್ತಿದ್ದರೂ, ಬಿಸಿಸಿಐ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳಿಸಲು ಒಪ್ಪದ ಕಾರಣ ಭಾರತದ ಪಂದ್ಯಗಳನ್ನು ದುಬೈಗೆ ಶಿಫ್ಟ್ ಮಾಡಲಾಗಿದೆ. ಭಾರತದ ಪಂದ್ಯಗಳು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿವೆ.

ಫೆಬ್ರವರಿ 19ರಂದಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಆರಂಭವಾಗಲಿದ್ದು ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ ನಡೆಯಲಿದೆ. ಉದ್ಘಾಟನಾ ಪಂದ್ಯದಲ್ಲಿ ಪಾಕಿಸ್ತಾನ ನ್ಯೂಜಿಲೆಂಡ್ ತಂಡದ ವಿರುದ್ಧ ಸೆಣೆಸಲಿದೆ.

india vs pakistan champions trophy 2025 match date timings and ticket booking

ಫೆಬ್ರವರಿ 20 ರಂದು ಭಾರತ ಮೊದಲ ಪಂದ್ಯ ಆಡಲಿದ್ದು ಬಾಂಗ್ಲಾದೇಶವನ್ನು ಎದುರಿಸಲಿದೆ. ಫೆಬ್ರವರಿ 23 ರಂದು ಭಾರತ ಎರಡನೇ ಪಂದ್ಯ ಆಡಲಿದ್ದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಆನ್‌ಲೈನ್‌ನಲ್ಲಿ ಟಿಕೆಟ್‌ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿತ್ತು, ಆದರೆ ಕೆಲವೇ ಕ್ಷಣದಲ್ಲಿ ಪಂದ್ಯದ ಟಿಕೆಟ್‌ಗಳು ಸೋಲ್ಡ್‌ಔಟ್ ಆಗಿವೆ.

ಟಿಕೆಟ್ ಸೋಲ್ಡ್‌ಔಟ್‌

500 ಯುಎಇ ದಿರ್ಹಾಮ್‌ನಿಂದ 5000 ದಿರ್ಹಾಮ್‌ವರೆಗೆ ಟಿಕೆಟ್‌ ಬೆಲೆಗಳನ್ನು ನಿಗದಿಪಡಿಸಲಾಗಿದೆ. ಭಾರತೀಯ ಕರೆನ್ಸಿಯಲ್ಲಿ 11856 ರೂಪಾಯಿಗಳಿಂದ 1,18,560 ರೂಪಾಯಿವರೆಗೆ ಟಿಕೆಟ್ ದರವಿದ್ದು ಎಲ್ಲಾ ಬೆಲೆಯ ಟಿಕೆಟ್‌ಗಳು ಸೋಲ್ಡ್‌ಔಟ್ ಆಗಿವೆ.

ಈ ಪಂದ್ಯ ಮಾತ್ರವಲ್ಲದೆ ಭಾರತ ಲೀಗ್ ಹಂತದಲ್ಲಿ ಮೂರು ಪಂದ್ಯಗಳನ್ನು ಆಡಲಿದೆ. ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧ ಆಡಲಿದ್ದು ಮೂರು ಪಂದ್ಯಗಳ ಟಿಕೆಟ್‌ಗಳು ಈಗಾಗಲೇ ಸೋಲ್ಡ್ ಔಟ್ ಆಗಿವೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯ ಮಾರ್ಚ್ 2ರಂದು ನಡೆಯಲಿದೆ.

ಭಾರತ - ಪಾಕಿಸ್ತಾನ ಪಂದ್ಯದ ಮಾಹಿತಿ

ಫೆಬ್ರವರಿ 23ರಂದು, ಭಾನುವಾರ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿವೆ. ಮಧ್ಯಾಹ್ನ 1 ಗಂಟೆಗೆ ಪಂದ್ಯ ಆರಂಭವಾಗಲಿದೆ. ರಾಜಕೀಯ ತಿಕ್ಕಾಟದಿಂದ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ದ್ವಿಪಕ್ಷೀಯ ಸರಣಿ ನಡೆಯುವುದ ನಿಂತಿದ್ದರಿಂದ, ಐಸಿಸಿ ಪಂದ್ಯಾವಳಿಗಳಲ್ಲಿ ಮಾತ್ರ ಎರಡೂ ತಂಡಗಳು ಮುಖಾಮುಖಿಯಾಗುತ್ತಿದ್ದು ಅಭಿಮಾನಿಗಳು ಈ ಪಂದ್ಯಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಭಾರತದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ಡಿಸ್ನಿ ಹಾಟ್‌ಸ್ಟಾರ್ ಮತ್ತು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ವೀಕ್ಷಿಸಬಹುದಾಗಿದೆ.

ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗಾಗಿ ದುಬೈಗೆ ತೆರಳುವ ಮುನ್ನ ಭಾರತ ಇಂಗ್ಲೆಂಡ್ ವಿರುದ್ಧ ಮೂರು ಪಮದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಚಾಮಪಿಯನ್ಸ್ ಟ್ರೋಫಿಗೆ ಸಜ್ಜಾಗಲು ಭಾರತಕ್ಕೆ ಇದು ಉತ್ತಮ ಅವಕಾಶವಾಗಿದ್ದು, ಮತ್ತೊಂದು ಐಸಿಸಿ ಟ್ರೋಫಿ ಗೆಲುವಿನ ವಿಶ್ವಾಸದಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+