ಭಾರತ vs ಪಾಕಿಸ್ತಾನ ಟಿ20 ವಿಶ್ವಕಪ್ 2026: ಬಿಸಿಸಿಐ ಮುಂದೆ ಮೂರು ಬೇಡಿಕೆ ಇಟ್ಟ ಪಿಸಿಬಿ
India vs Pakistan T20 World Cup 2026: ಟಿ-20 ವಿಶ್ವಕಪ್ 2026 ಫೆಬ್ರವರಿ 7ರಿಂದ ಆರಂಭವಾಗಿದೆ. ಇನ್ನೂ ಈ ಟೂರ್ನಿಯಲ್ಲಿ ಭಾರತದ ವಿರುದ್ಧ ಆಡಲ್ಲ ಅಂತಾ ಹೇಳಿದ್ದ ಪಾಕಿಸ್ತಾನ ಇದೀಗ ಯೂಟರ್ನ್ ಹೊಡೆಯುವ ಎಲ್ಲಾ ಮುನ್ಸೂಚನೆಗಳು ಕಾಣುತ್ತಿವೆ. ಈ ಕುರಿತು ಬೆಳಗ್ಗೆ ನಡೆದ ಸಭೆಯಲ್ಲಿ ಪಿಸಿಬಿಯು ಐಸಿಸಿಗೆ ಮೂರು ಬೇಡಿಕೆಗಳನ್ನು ಇಟ್ಟಿದೆ. ಹಾಗಾದ್ರೆ, ಅವುಗಳು ಯಾವುವು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಶೀಘ್ರದಲ್ಲೇ ತೀರ್ಮಾನ ಹೊರಬೀಳುವ ಸಾಧ್ಯತೆ: ಭಾರತ ಹಾಗೂ ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯದ ಕುರಿತಾಗಿ ಉಂಟಾಗಿದ್ದ ಬಿಕ್ಕಟ್ಟು ಇದೀಗ ಪರಿಹಾರದ ದಿಕ್ಕಿನಲ್ಲಿ ಸಾಗುತ್ತಿರುವ ಸೂಚನೆಗಳು ದೊರಕಿವೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ನಡುವೆ ನೇರ ಚರ್ಚೆಗಳು ಆರಂಭವಾಗಿದ್ದು, ಶೀಘ್ರದಲ್ಲೇ ಅಂತಿಮ ತೀರ್ಮಾನ ಹೊರಬೀಳುವ ಸಾಧ್ಯತೆಯಿದೆ.

ಬಹಿಷ್ಕಾರದ ಬೆದರಿಕೆ ಹಿನ್ನೆಲೆ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರೊಂದಿಗೆ ಚರ್ಚೆ ನಡೆಸಲು ಐಸಿಸಿ ಉನ್ನತಾಧಿಕಾರಿಗಳ ನಿಯೋಗ ಪಾಕಿಸ್ತಾನಕ್ಕೆ ಆಗಮಿಸಿದೆ. ಉಪಾಧ್ಯಕ್ಷ ಇಮ್ರಾನ್ ಖವಾಜಾ ಹಾಗೂ ಅಸೋಸಿಯೇಟ್ ಸದಸ್ಯರ ಪ್ರತಿನಿಧಿ ಮುಬಶೀರ್ ಉಸ್ಮಾನಿ ಈ ನಿಯೋಗದಲ್ಲಿ ಸೇರಿದ್ದಾರೆ.
ಫೆಬ್ರವರಿ 15ರಂದು ಕೊಲಂಬೊದ ಆರ್. ಪ್ರೇಮದಾಸ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಬೇಕಿರುವ ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಪಾಕಿಸ್ತಾನ ಸರ್ಕಾರ ಘೋಷಿಸಿತ್ತು. ಆದ್ದರಿಂದ ವಿವಾದ ಆರಂಭವಾಗಿದ್ದು, ಪಿಸಿಬಿ ಟೂರ್ನಿಯಿಂದ ಹೊರಗುಳಿಯುವ ಎಚ್ಚರಿಕೆಯನ್ನು ನೀಡಲಾಗಿತ್ತು. ಇತ್ತೀಚೆಗೆ ಲಾಹೋರ್‌ನಲ್ಲಿ ನಡೆದ ತುರ್ತು ಸಭೆಯಲ್ಲಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಅಧ್ಯಕ್ಷ ಅಮಿನುಲ್ ಇಸ್ಲಾಂ ಕೂಡ ಭಾಗವಹಿಸಿದ್ದರು. ಈ ಸಭೆಯಲ್ಲಿ ಪಾಕಿಸ್ತಾನ ತನ್ನ ನಿಲುವನ್ನು ಬದಲಿಸಬಹುದು ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿವೆ.
ಪಿಸಿಬಿ ಬೇಡಿಕೆಗಳು: ಮಾತುಕತೆ ವೇಳೆ ಪಿಸಿಬಿ, ಐಸಿಸಿ ಆದಾಯ ಹಂಚಿಕೆಯಲ್ಲಿ ಹೆಚ್ಚಿನ ಪಾಲು, ಪಾಕಿಸ್ತಾನಕ್ಕೆ ದೊರೆಯುವ ವಾರ್ಷಿಕ ಧನಸಹಾಯದಲ್ಲಿ ಹೆಚ್ಚಳ ಹಾಗೂ ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಸರಣಿಗಳನ್ನು ಪುನರಾರಂಭಿಸುವ ಕುರಿತು ಒತ್ತಾಯಿಸಿದೆ. ಜೊತೆಗೆ, ಕ್ರಿಕೆಟ್ ಶಿಷ್ಟಾಚಾರ ಮತ್ತು ಕ್ರೀಡಾ ಮೌಲ್ಯಗಳನ್ನು ಕಾಪಾಡಿಕೊಳ್ಳುವ ಮಹತ್ವವನ್ನು ಪಿಸಿಬಿ ಅಧ್ಯಕ್ಷರು ಉಲ್ಲೇಖಿಸಿದ್ದಾರೆ. ಈ ಚರ್ಚೆ ನಂತರ ಭಾರತ-ಪಾಕಿಸ್ತಾನ ಪಂದ್ಯ ನಡೆಯುವ ಬಗ್ಗೆ ಸ್ಪಷ್ಟತೆ ಸಿಗುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ. ಆದರೆ, ಪಿಸಿಬಿ ಏನು ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕಾದುನೋಡಬೇಕಿದೆ.
ಪಿಸಿಬಿ ಹಾಗೂ ಐಸಿಸಿ ನಡುವಿನ ಮಾತುಕತೆ
ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ನಡುವೆಯಲ್ಲಿ ಮಾತುಕತೆ ನಡೆದಿದೆ. ಈ ವೇಳೆ ಪಿಸಿಬಿ ಮೂರು ಬೇಡಿಕೆಗಳನ್ನು ಐಸಿಸಿ ಮುಂದೆ ಇಟ್ಟಿತ್ತು.
ಪಾಕಿಸ್ತಾನ ಕ್ರಿಕೆಟ್ ಮಂಡಳಿ ಬೇಡಿಕೆಗಳು
* ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸರಣಿಗಳನ್ನು ಪುನರಾರಂಭ ಮಾಡುವುದು
* ಭಾರತ, ಬಾಂಗ್ಲಾದೇಶ ಮತ್ತು ಪಾಕಿಸ್ತಾನ ನಡುವಿನ ತ್ರಿಕೋನ ಸರಣಿ
* ಭಾರತ ತಂಡಕ್ಕೆ ಸೆಪ್ಟೆಂಬರ್‌ನಲ್ಲಿ ಬಾಂಗ್ಲಾದೇಶ ಪ್ರವಾಸದ ಅವಕಾಶ












Click it and Unblock the Notifications