India vs Pakistan: ಭಾರತ-ಪಾಕಿಸ್ತಾನ ಪಂದ್ಯ; ಪ್ಲೇಯಿಂಗ್ ಇಲೆವೆನ್, ಪಿಚ್ ವರದಿ

ಶ್ರೀಲಂಕಾದಲ್ಲಿ ನಾಳೆಯಿಂದ (ಶುಕ್ರವಾರ) ಮಹಿಳಾ ಏಷ್ಯಾಕಪ್ 2024ರ ಪಂದ್ಯಾವಳಿ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಯುಎಇ ಮತ್ತು ನೇಪಾಳ ಮಹಿಳಾ ತಂಡಗಳು ಮುಖಾಮುಖಿಯಾಗಲಿವೆ. ಮಧ್ಯಾಹ್ನ 2 ಗಂಟೆಗೆ ಮೊದಲ ಪಂದ್ಯ ನಡೆಯಲಿದ್ದು, ಎರಡನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿವೆ.

ಹರ್ಮನ್‌ಪ್ರೀತ್ ಕೌರ್ ಅವರ ನಾಯಕತ್ವದಲ್ಲಿ ಭಾರತ ತಂಡ ಸೆಣೆಸಲು ಸಜ್ಜಾಗಿದೆ. ಹಾಲಿ ಚಾಂಪಿಯನ್ ಆಗಿರುವ ಭಾರತ, ಈ ಬಾರಿ ಕೂಡ ಕಪ್ ಗೆಲ್ಲುವ ನೆಚ್ಚಿನ ತಂಡವಾಗಿದೆ. ಮತ್ತೊಂದೆಡೆ ಹಾಲಿ ಚಾಂಪಿಯನ್ನರಿಗೆ ಸವಾಲು ಹಾಕಲು ಪಾಕಿಸ್ತಾನ ಸಜ್ಜಾಗಿದೆ.

India vs Pakistan Women s Asia Cup Pitch and Weather Report

ಭಾರತ, ಪಾಕಿಸ್ತಾನ, ನೇಪಾಳ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಎ ಗುಂಪಿನಲ್ಲಿ ಆಡುತ್ತಿದ್ದು. ಶ್ರೀಲಂಕಾ, ಮಲೇಷ್ಯಾ, ಥಾಯ್ಲೆಂಡ್, ಮತ್ತು ಬಾಂಗ್ಲಾದೇಶ ಬಿ ಗುಂಪಿನಲ್ಲಿ ಸೆಣೆಸಲಿವೆ.

ಭಾರತ ತಂಡ ಬಲಿಷ್ಠವಾಗಿದ್ದು, ಈ ಬಾರಿ ಕೂಡ ಕಪ್ ಗೆಲ್ಲುವ ವಿಶ್ವಾಸದಲ್ಲಿ ಶ್ರೀಲಂಕಾಗೆ ಪ್ರಯಾಣಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ, ಟೆಸ್ಟ್ ಮತ್ತು ಟಿ20 ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿರುವ ಭಾರತ, ಅದೇ ಪ್ರದರ್ಶವನ್ನು ಏಷ್ಯಾಕಪ್‌ನಲ್ಲಿ ಮುಂದುವರೆಸಲು ಸಜ್ಜಾಗಿದೆ.

ಹವಾಮಾನ, ಪಿಚ್ ವರದಿ

ಶ್ರೀಲಂಕಾದ ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ-ಪಾಕಿಸ್ತಾನ ಪಂದ್ಯ ನಡೆಯಲಿದೆ. ಪಿಚ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡಕ್ಕೂ ಸಹಕಾರಿಯಾಗಿದೆ. ಮೊದಲ ಇನ್ನಿಂಗ್ಸ್‌ನ ಆರಂಭದಲ್ಲಿ ಚೆಂಡು ಹೊಸದಾಗಿದ್ದಾಗ ಬ್ಯಾಟಿಂಗ್ ಮಾಡಲು ಅನುಕೂಲಕರವಾಗಲಿದೆ. ಬಳಿಕ ವೇಗಿಗಳಿಗೆ ಪಿಚ್ ಹೆಚ್ಚಿನ ನೆರವು ನೀಡಲಿದೆ.

ದಂಬುಲ್ಲಾ ಶುಷ್ಕ ಸ್ಥಳವಾಗಿದ್ದು, ಸಾಮಾನ್ಯ ತಾಪಮಾನವು 30 ಡಿಗ್ರಿ ಸೆಲ್ಸಿಯಸ್‌ನಿಂದ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ನಡುವೆ ಇರುತ್ತದೆ. ಹವಾಮಾನ ವರದಿಯ ಪ್ರಕಾರ, ಶುಕ್ರವಾರ ತಾಪಮಾನವು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, 70% ತೇವಾಂಶ ಇರಲಿದೆ. ಮಳೆಯಾಗುವ ಸಾಧ್ಯತೆ ಕೇವಲ 10 ಪ್ರತಿಶತ ಇರುವುದರಿಂದ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಬಹುತೇಕ ಇಲ್ಲವಾಗಿದೆ.

ಉಭಯ ತಂಡಗಳ ಸಂಭಾವ್ಯ ಆಡುವ ಬಳಗ

ಭಾರತ: ಹರ್ಮನ್‌ಪ್ರೀತ್ ಕೌರ್ (ನಾಯಕ), ರಿಚಾ ಘೋಷ್ (ವಿಕೆಟ್ ಕೀಪರ್), ಸ್ಮೃತಿ ಮಂಧಾನ (ಉಪ ನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ಜೆಮಿಮಾ ರೋಡ್ರಿಗಸ್, ರೇಣುಕಾ ಠಾಕೂರ್, ಆಶಾ ಶೋಭಾನಾ, ಶ್ರೇಯಾಂಕಾ ಪಾಟೀಲ್.

ಪಾಕಿಸ್ತಾನ: ಸಿದ್ರಾ ಅಮೀನ್, ಒಮೈಮಾ ಸೊಹೈಲ್, ಇರಾಮ್ ಜಾವೇದ್, ನಿದಾ ದಾರ್, ಅಲಿಯಾ ರಿಯಾಜ್, ಫಾತಿಮಾ ಸನಾ, ಗುಲ್ ಫಿರೋಜಾ, ಮುನೀಬಾ ಅಲಿ, ಡಯಾನಾ ಬೇಗ್, ಸಾದಿಯಾ ಇಕ್ಬಾಲ್, ನಶ್ರಾ ಸಂಧು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+