IND vs SL: ಗೆಲುವಿನ ವಿಶ್ವಾಸದಲ್ಲಿ ಟೀಮ್ ಇಂಡಿಯಾ: ತಂಡದಲ್ಲಿ ಬೀಸುತ್ತಾ ಬದಲಾವಣೆಯ ಗಾಳಿ?
ಕೊಲಂಬೊ: ಸದ್ಯ ಟೀಮ್ ಇಂಡಿಯಾ ಶ್ರೀಲಂಕಾ ಪ್ರವಾಸದಲ್ಲಿದೆ. ಮೊದಲು ಟಿ20 ಸರಣಿಯನ್ನು ಕೈ ವಶ ಮಾಡಿಕೊಂಡಿದ್ದ ಭಾರತ, ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೈ ಸಾಧಿಸಿತ್ತು. ಈಗ ಸರಣಿಯ ಎರಡನೇ ಏಕದಿನ ಪಂದ್ಯಕ್ಕೆ ಮೈದಾನ ಸಜ್ಜಾಗಿದ್ದು, ಜಿದ್ದಾಜಿದ್ದಿನ ಫೈಟ್ ನಿರೀಕ್ಷಿಸಬಹುದಾಗಿದೆ.
ಮೊದಲ ಪಂದ್ಯದಲ್ಲಿ ಕಂಡಿದ್ದ ನಿರಾಶಾದಾಯಕ ಪ್ರದರ್ಶನ ನಿಜಕ್ಕೂ ಅಭಿಮಾನಿಗಳಿಗೆ ಬೇಸರ ತಂದಿದೆ. 14 ಎಸೆತಗಳಲ್ಲಿ ಟೀಮ್ ಇಂಡಿಯಾ 1 ರನ್ ಗಳಿಸಲು ಆಗದೇ ಸೋಲು ಕಂಡಿದ್ದು, ತಂಡ ಆತ್ಮಾವಲೋಕನ ಮಾಡಿಕೊಳ್ಳುವಂತೆ ಮಾಡಿದೆ. ಭಾನುವಾರ ಕೊಲಂಬೊದಲ್ಲಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವಿನ ಲೆಕ್ಕಾಚಾರವನ್ನು ಹಾಕಿಕೊಂಡಿದೆ. ಮೊದಲ ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್‌ನಿಂದಾಗಿ ಎರಡನೇ ಏಕದಿನ ಪಂದ್ಯದಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳಬಹುದು.

ಪಂತ್‌ಗೆ ಅವಕಾಶ
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಆಡುವ ಅವಕಾಶವನ್ನು ಪಡೆದಿದ್ದ ಕನ್ನಡಿಗ ಕೆ.ಎಲ್ ರಾಹುಲ್, ಎರಡನೇ ಏಕದಿನ ಪಂದ್ಯದಲ್ಲಿ ಪ್ಲೆಯಿಂಗ್ ಇಲೆವೆನ್‌ನಿಂದ ಹೊರ ನಡೆಯುವ ಸಾಧ್ಯತೆ ಇದೆ. ಇವರ ಸ್ಥಾನದಲ್ಲಿ ರಿಷಭ್ ಪಂತ್ ತುಂಬುವ ಸಾಧ್ಯತೆ ಇದೆ.
ಮೊದಲ ಪಂದ್ಯದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ರೂಪದಲ್ಲಿ ಕಾಣಿಸಿಕೊಂಡ ರಾಹುಲ್ ಆರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿ 43 ಎಸೆತಗಳಲ್ಲಿ 31 ರನ್ ಸಿಡಿಸಿದ್ದರು. ಅಲ್ಲದೆ ಈ ಪಂದ್ಯದಲ್ಲಿ ಅವರು ಅಕ್ಷರ್ ಪಟೇಲ್ ಅವರೊಂದಿಗೆ ಜೊತೆಯಾಟವನ್ನು ನೀಡುವ ಜವಾಬ್ದಾರಿ ಹೊತ್ತಿದ್ದರು. ಆದರೆ ನಿರ್ಣಾಯಕ ಸಮಯದಲ್ಲಿ ವಿಕೆಟ್ ಕೈ ಚೆಲ್ಲಿ ತಂಡಕ್ಕೆ ಪೆಟ್ಟು ನೀಡಿದರು.
ರಾಹುಲ್ ಸ್ಥಾನದಲ್ಲಿ ಪಂತ್ ಅವರು ತಂಡ ಸೇರಬಹುದು. ಪಂತ್ 2019ರಲ್ಲಿ ಒಮ್ಮೆ ಮಾತ್ರ ಶ್ರೀಲಂಕಾ ವಿರುದ್ಧ ಆಡಿರುವ ಅನುಭವ ಹೊಂದಿದ್ದಾರೆ. ಸದ್ಯದ ಪಂತ್ ಫಾರ್ಮ್ ಅವರನ್ನು ತಂಡದಲ್ಲಿ ಇರಿಸಿಕೊಳ್ಳುವಂತೆ ಸೂಚಿಸುತ್ತದೆ.
ರಿಯನ್ ಪರಾಗ್‌ಗೆ ಅವಕಾಶ
ಟೀಮ್ ಇಂಡಿಯಾದಲ್ಲಿ ಆಲ್‌ರೌಂಡರ್ ಕೋಟಾಟದಲ್ಲಿ ಸ್ಥಾನ ಪಡೆದಿರುವ ಶಿವಂ ದುಬೆ ಅವರ ಸ್ಥಾನಕ್ಕೆ ಕುತ್ತು ಬಂದಿರುವ ಸಾಧ್ಯತೆ ಇದೆ. ಇವರ ಸ್ಥಾನದಲ್ಲಿ ರಿಯಾನ್ ಪರಾಗ್‌ಗೆ ಅವಕಾಶ ಸಿಗಬಹುದು. ಇದರೊಂದಿಗೆ ಟೀಂ ಇಂಡಿಯಾದಲ್ಲಿ ಮತ್ತೊಂದು ಬದಲಾವಣೆ ಆಗಬಹುದು.
ಶಿವಂ ದುಬೆ ಬದಲಿಗೆ ಬಲಗೈ ಆಲ್‌ರೌಂಡರ್ ರಿಯಾನ್ ಪರಾಗ್‌ಗೆ ಅವಕಾಶ ನೀಡಬಹುದು. ರಿಯಾನ್ ತಮ್ಮ ಬ್ಯಾಟಿಂಗ್ ಮತ್ತು ಬೌಲಿಂಗ್‌ನಿಂದ ಎದುರಾಳಿಗಳನ್ನು ಕಾಡಬಲ್ಲರು. ಅವರು ಇನ್ನೂ ಏಕದಿನ ಪಂದ್ಯಕ್ಕೆ ಪದಾರ್ಪಣೆ ಮಾಡಿಲ್ಲ. ಪದಾರ್ಪಣೆ ಮಾಡಿದ ನಂತರ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಕಳುಹಿಸಬಹುದು.
ಬಿಗುವಿನ ದಾಳಿ ಅವಶ್ಯಕತೆ
ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಕಂಡು ಬರುವುದು ಡೌಟ್. ಬೌಲಿಂಗ್ ವಿಭಾಗದಲ್ಲಿ ಮೊಹೊಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್ ಪವರ್ ಪ್ಲೇ ಹಾಗೂ ಡೆತ್ ಓವರ್‌ಗಳಲ್ಲಿ ಬಿಗುವಿನ ದಾಳಿ ನಡೆಸುವ ಅವಶ್ಯಕತೆ ಇದೆ. ಸ್ಪಿನ್ ಬೌಲರ್‌ಗಳಾಗಿ ಕುಲ್‌ದೀಪ್ ಯಾದವ್, ಅಕ್ಷರ್ ಪಟೇಲ್ ಎದುರಾಳಿಗಳನ್ನು ಕಾಡಬಲ್ಲರು. ಅಲ್ಲದೆ ಮಿಡ್ಲ್ ಓವರ್‌ಗಳಲ್ಲಿ ರನ್‌ಗಳಿಗೆ ಕಡಿವಾಣ ಹಾಕಿ ವಿಕೆಟ್ ಬೇಟೆ ನಡೆಸಬೇಕಿದೆ. ಅಂದಾಗ ಮಾತ್ರ ಗೆಲುವಿನ ಕನಸು ನಸನಾಗುತ್ತದೆ.
-
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ದರ: ಇಂದು 10 ಗ್ರಾಂ ಬಂಗಾರದ ಬೆಲೆ 1,58,620 ರೂಪಾಯಿ -
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು












Click it and Unblock the Notifications