ಬೆಂಗಳೂರಿನಲ್ಲಿ ಭಾರತ-ವೆಸ್ಟ್ ಇಂಡೀಸ್ ಪಂದ್ಯ ವೀಕ್ಷಿಸಲು ಬರುವವರು ಗಮನಿಸಲೇಬೇಕಾದ ಮಹತ್ವದ ಮಾಹಿತಿ
India vs West Indies: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ (ಅಕ್ಟೋಬರ್ 17) ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯ ಕೊನೆಯ ಪಂದ್ಯ ನಡೆದಿದೆ. ಈ ಹಿನ್ನೆಲೆ ನಗರ ಸಂಚಾರಿ ಪೊಲೀಸರು ಟ್ರಾಫಿಕ್ ಆಗದಂತೆ ಮುಂಜಾಗ್ರತಾ ಕ್ರಮವಾಗಿ ಮಹತ್ವದ ಕ್ರಮಗಳನ್ನು ಕೈಗೊಂಡಿದ್ದಾರೆ. ವಾಹನ ಸವಾರರು ಇದನ್ನು ಗಮನಿಸಲೇಬೇಕಿದೆ.
ಈ ಮಹತ್ವದ ಪಂದ್ಯವನ್ನು ವೀಕ್ಷಣೆ ಮಾಡಲು ಪ್ರೇಕ್ಷಕರ ದಂಡೇ ಆಗಮಿಸಲಿದೆ. ಈ ಹಿನ್ನೆಲೆಯಲ್ಲಿ ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸುಗಮ ವಾಹನ ಸಂಚಾರಕ್ಕಾಗಿ ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧಿಸಿ, ನಿರ್ದಿಷ್ಟ ಪಾರ್ಕಿಂಗ್ ಸ್ಥಳಗಳನ್ನು ನಿಗದಿಪಡಿಸಲಾಗಿದೆ.

ಚಿನ್ನಸ್ವಾಮಿ ಸ್ಟೇಡಿಯಂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಉಂಟಾಗಬಹುದಾದ ಸಂಚಾರ ದಟ್ಟಣೆ ಉಂಟಾಗಬಹುದು. ಹೀಗಾಗಿ ಸಂಚಾರ ಸುಗಮಗೊಳಿಸುವ ಉದ್ದೇಶದಿಂದ ಪಂದ್ಯ ವೀಕ್ಷಣೆಗೆ ಬರುವ ಪ್ರೇಕ್ಷಕರು ಸಾರ್ವಜನಿಕ ಸಾರಿಗೆಗಳಾದ ಬಿಎಂಟಿಸಿ ಹಾಗೂ ಮೆಟ್ರೋ ಸೇವೆಯನ್ನು ಬಳಸಲು ಬೆಂಗಳೂರು ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ.
ಯಾವ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ?
* ಕ್ವೀನ್ಸ್ ರಸ್ತೆ: ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ಮತ್ತು ಕ್ವೀನ್ಸ್ ವೃತ್ತದಿಂದ ಸಿಟಿಓ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಕಡೆ.
* ಎಂ.ಜಿರಸ್ತೆ: ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ಮತ್ತು ಕ್ವೀನ್ಸ್ ರಸ್ತೆಯಿಂದ ಅನಿಲ್ ಕುಂಬ್ಳೆ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಕಡೆ.
* ಲಿಂಕ್ ರಸ್ತೆ: ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆವರೆಗೆ. ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ.
* ಕಬ್ಬನ್ ರಸ್ತೆ: ಸಿಟಿಒ ವೃತ್ತದಿಂದ ಡಿಕನ್ಸ್‌ನ್ ರಸ್ತೆ ಎರಡೂ ಬದಿ. ಕಾಮರಾಜ್ ರಸ್ತೆ ಜಂಕ್ಷನ್‌ನಿಂದ ಡಿಕನ್ಸ್‌ನ್ ರಸ್ತೆ ಜಂಕ್ಷನ್ ವರೆಗೆ ಬಿಎಂಟಿಸಿ ಬಸ್‌ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ತರಹದ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ.
* ಸೇಂಟ್ ಮಾರ್ಕ್ಸ್ ರಸ್ತೆ: ಕ್ಯಾಶ್ ಫಾರ್ಮಸಿ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ವೃತ್ತದವರೆಗೆ.
* ಮ್ಯೂಸಿಯಂ ರಸ್ತೆ: ಎಂ.ಜಿ. ರಸ್ತೆಯಿಂದ ಸೇಂಟ್ ಮಾರ್ಕ್ಸ್ ರಸ್ತೆವರೆಗೆ ಹಾಗೂ ಆಶಿರ್ವಾದಂ ವೃತ್ತದವರೆಗೆ.
* ಕಸ್ತೂರಬಾ ರಸ್ತೆ ಹಾಗೂ ಮಲ್ಯ ಆಸ್ಪತ್ರೆ ರಸ್ತೆ: ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದವರೆಗೆ ಹಾಗೂ ಸಿದ್ದಲಿಂಗಯ್ಯ ವೃತ್ತದಿಂದ ಆರ್‌ಆರ್‌ಎಂಆರ್ ವೃತ್ತದವರೆಗೆ.
* ಕಬ್ಬನ್ ಪಾರ್ಕ್ ಒಳಭಾಗ: ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ, ಫೌಂಟೇನ್ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ಕಡ್ಡಾಯವಾಗಿ ನಿಷೇಧಿಸಲಾಗಿದೆ.
* ಲ್ಯಾವೆಲ್ಲೆ ರಸ್ತೆ: ಕ್ವೀನ್ಸ್ ವೃತ್ತದಿಂದ ವಿಠಲ್ ಮಲ್ಯ ರಸ್ತೆ ಜಂಕ್ಷನ್‌ವರೆಗೆ.
* ವಿಠಲ್ ಮಲ್ಯ ರಸ್ತೆ: ಸಿದ್ದಲಿಂಗಯ್ಯ ವೃತ್ತದಿಂದ ಸೇಂಟ್ ಮಾರ್ಕ್ಸ್ ರಸ್ತೆಯ ಬಿಷಪ್ ಕಾಟನ್ ಬಾಲಕಿಯರ ಶಾಲೆಯವರೆಗೆ.
ಪಾರ್ಕಿಂಗ್‌ಗೆ ಎಲ್ಲೆಲ್ಲಿ ಅವಕಾಶ?
* ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ ಮತ್ತು ಯು.ಬಿ.ಸಿಟಿ ನಿಲುಗಡೆ ಸ್ಥಳ ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿ.
* ಫ್ರೀಡಂ ಪಾರ್ಕ ಎಂ.ಎಲ್.ಸಿ.ಪಿ ಪಾರ್ಕಿಗ್ ಸ್ಥಳದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
* ಸೆಂಟ್ ಜೋಸೆಫ್ (ಯುರೋಪಿಯನ್) ಬಾಲಕರ ಶಾಲೆ ಮೈದಾನ (ಮ್ಯೂಸಿಯಂ ರಸ್ತೆ) ಯಲ್ಲಿ ನಿಲುಗಡೆಗೆ ವ್ಯವಸೆ ಮಾಡಲಾಗಿದೆ.
* ವಿಶೇಷ ಕರ್ತವ್ಯಕ್ಕೆ ನಿಯೋಜನೆ ಮಾಡಿರುವ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ವಾಹನಗಳನ್ನು ಕಬ್ಬನ್‌ಪಾರ್ಕ್ ಒಳಭಾಗದ ಟೆನ್ನಿಸ್ ಕ್ಲಬ್ ರಸ್ತೆಯಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 11ರಿಂದ ರಾತ್ರಿ 9 ಗಂಟೆವರೆಗೂ ಸಾರ್ವಜನಿಕರು ಹಾಗೂ ಪಂದ್ಯ ವೀಕ್ಷಕರ ವಾಹನ ನಿಲುಗಡೆಗಾಗಿ ಈ ನಿರ್ದಿಷ್ಟ ಸ್ಥಳಗಳನ್ನು ಗುರುತಿಸಲಾಗಿದೆ.
ಸ್ಟೇಡಿಯಂ ಪ್ರವೇಶಿಸಲು ಹಾಗೂ ನಿರ್ಗಮಿಸುವ ಸ್ಥಳಗಳು
* ಕಬ್ಬನ್ ರಸ್ತೆ: ಗೇಟ್ ಸಂಖ್ಯೆ E1, E2, E3, E18, E19, E22 ಮತ್ತು E23 ಮೂಲಕ ಪ್ರವೇಶಿಸಬಹುದು.
* ಲಿಂಕ್ ರಸ್ತೆ: ಗೇಟ್ ಸಂಖ್ಯೆ E11 ರಿಂದ E17 ರ ಮೂಲಕ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.
* ಕ್ಲೀನ್ಸ್ ರಸ್ತೆಯಲ್ಲಿ ಗೇಟ್ ನಂ. ಇ-07 ಮತ್ತು ಇ-08 ದಲ್ಲಿ ಪ್ರವೇಶವಿದ್ದು, ಗೇಟ್ ನಂ- ಇ-09, ಇ-9ಎ ಗೇಟ್‌ನಲ್ಲಿ ನಿರ್ಗಮಿಸಲು ಮಾತ್ರ ಅವಕಾಶ ಇರುತ್ತದೆ.
* ಕ್ಲೀನ್ಸ್ ರಸ್ತೆಯ ಗೇಟ್ ನಂ-ಇ10 ರಲ್ಲಿ ಆಟಗಾರರು, ಸಹ ಆಟಗಾರರು ಹಾಗೂ ಸ್ಟೇಡಿಯಂ ಅಧಿಕಾರಿಗಳು ವಿಐಪಿಗಳಿಗೆ ಅವಕಾಶ ಇರುತ್ತದೆ.
ಓಲಾ, ಉಬರ್, ಆಟೋ, ಕ್ಯಾಬ್ ಪಿಕ್ ಅಪ್ ಮತ್ತು ಡ್ರಾಪ್ ಸ್ಥಳಗಳು
* ಪಿಕ್ ಅಪ್ - ಆರ್ವಿ ಗ್ರೌಂಡ್
* ಡ್ರಾಪ್ - ಗೇಟ್ ನಂಬರ್ 6
ಕ್ರೀಡಾಂಗಣದ ಸುತ್ತಮುತ್ತ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಪ್ರೇಕ್ಷಕರು ಹಾಗೂ ಸಾರ್ವಜನಿಕರು ಸ್ವಂತ ವಾಹನಗಳ ಬದಲಿಗೆ ನಮ್ಮ ಮೆಟ್ರೋ (MG Road / Cubbon Park Metro Stations) ಹಾಗೂ ಬಿಎಂಟಿಸಿ (BMTC) ಸಾರ್ವಜನಿಕ ಸಾರಿಗೆ ಸೇವೆಗಳನ್ನು ಬಳಸುವಂತೆ ಬೆಂಗಳೂರು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.


Click it and Unblock the Notifications
