India vs West Indies: ಏಕದಿನ ಪಂದ್ಯಕ್ಕೆ ಮುನ್ನ ಭಾರತಕ್ಕೆ ಮರಳಿದ ವೇಗಿ ಮೊಹಮ್ಮದ್ ಸಿರಾಜ್ : ಕಾರಣ ಇಲ್ಲಿದೆ
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಿಂದ ವಿರಾಮ ಪಡೆದ ನಂತರ, ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಭಾರತಕ್ಕೆ ಮರಳಿದ್ದಾರೆ. ಏಕದಿನ ಸರಣಿಯ ಮೊದಲನೇ ಪಂದ್ಯ ನಡೆಯಲಿದ್ದು, ಸಿರಾಜ್ ವಿಶ್ರಾಂತಿಗಾಗಿ ವಾಪಸಾಗಿದ್ದಾರೆ.
ಭಾರತವು ಎರಡು ಟೆಸ್ಟ್‌ಗಳ ಸರಣಿಯನ್ನು 1-0 ಅಂತರದಿಂದ ಗೆದ್ದ ನಂತರ, ಟೆಸ್ಟ್ ತಂಡದ ಆಟಗಾರರಾದ ರವಿಚಂದ್ರನ್ ಅಶ್ವಿನ್, ಅಜಿಂಕ್ಯ ರಹಾನೆ, ಕೆಎಸ್ ಭರತ್ ಮತ್ತು ನವದೀಪ್ ಸೈನಿ ಅವರ ಜೊತೆ ಸಿರಾಜ್ ಕೂಡ ಭಾರತಕ್ಕೆ ಮರಳಿದ್ದಾರೆ.

ಏಕದಿನ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ವೇಗದ ದಾಳಿಯನ್ನು ಮುನ್ನಡೆಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು, ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಜಯದೇವ್ ಉನಾದ್ಕತ್, ಶಾರ್ದೂಲ್ ಠಾಕೂರ್, ಮುಖೇಶ್ ಮತ್ತು ಉಮ್ರಾನ್ ಮಲಿಕ್ ಏಕದಿನ ಸರಣಿಗೆ ಆಯ್ಕೆಯಾಗಿದ್ದರು, ಸಿರಾಜ್ ಮರಳಿದ ನಂತರ ಶಾರ್ದೂಲ್ ಠಾಕೂರ್ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.
ಬಿಡುವಿರದ ವೇಳಾಪಟ್ಟಿ
ಕೆಲಸದ ಹೊರೆಯಿಂದಾಗಿ ವೆಸ್ಟ್ ಇಂಡೀಸ್ ಪ್ರವಾಸದ ಏಕದಿನ ಸರಣಿಯಿಂದ ಮೊಹಮ್ಮದ್ ಸಿರಾಜ್ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ. ಸಿರಾಜ್ ಬದಲಾಗಿ ಬೇರೆ ಆಟಗಾರರನ್ನು ಆಯ್ಕೆ ಮಾಡಿಲ್ಲ, ತಂಡದಲ್ಲಿ ಮತ್ತೆ ಬದಲಾವಣೆ ಮಾಡಿಲ್ಲ.
ಆಗಸ್ಟ್ ಕೊನೆಯ ವಾರದಿಂದ ಸೆಪ್ಟೆಂಬರ್ 2ನೇ ವಾರದವರೆಗೆ ಏಷ್ಯಾಕಪ್ ಪಂದ್ಯಾವಳಿ ನಡೆಯಲಿದೆ. ನಂತರ ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಆಡಲಿದೆ. ಅಕ್ಟೋಬರ್ ತಿಂಗಳಿನಲ್ಲಿ ಬಹುನಿರೀಕ್ಷಿತ ಏಕದಿನ ವಿಶ್ವಕಪ್ ಪಂದ್ಯಾವಳಿ ಆರಂಭವಾಗಲಿದೆ.
ಭಾರತ ಪ್ರಮುಖ ಬೌಲರ್ ಸಿರಾಜ್
ಮೊಹಮ್ಮದ್ ಸಿರಾಜ್ ಎರಡು ಟೆಸ್ಟ್ ಪಂದ್ಯಗಳಲ್ಲಿ ಏಳು ವಿಕೆಟ್ ಪಡೆದು ಮಿಂಚಿದರು. ಸ್ಪಿನ್‌ಗೆ ನೆರವಾಗುವ ಪಿಚ್‌ನಲ್ಲಿ ಐದು ವಿಕೆಟ್ ಪಡೆದ ಸಾಧನೆ ಮಾಡಿದ್ದರು. ಆಸ್ಟ್ರೇಲಿಯಾ ವಿರುದ್ಧ ಓವಲ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಡಿದ್ದ ಸಿರಾಜ್ ಮೊದಲ ಇನ್ನಿಂಗ್ಸ್‌ನಲ್ಲಿ ನಾಲ್ಕು ವಿಕೆಟ್ ಸೇರಿದಂತೆ ಐದು ವಿಕೆಟ್‌ಗಳನ್ನು ಪಡೆದಿದ್ದರು.
ಮೊಹಮ್ಮದ್ ಸಿರಾಜ್ ಐಪಿಎಲ್ 2023 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಬೌಲರ್ ಆಗಿದ್ದರು, 14 ಪಂದ್ಯಗಳಲ್ಲಿ 19 ವಿಕೆಟ್‌ಗಳನ್ನು ಪಡೆದರು. 2022ರಿಂದ ಸಿರಾಜ್ ಏಕದಿನ ಮಾದರಿಯಲ್ಲಿ 43 ವಿಕೆಟ್ ಪಡೆದುಕೊಂಡಿದ್ದಾರೆ.
ಬುಮ್ರಾ ಅವರಂತಹ ಹಿರಿಯ ಬೌಲರ್ ಅನುಪಸ್ಥಿತಿ ನಡುವೆ ಸಿರಾಜ್ ತಂಡದಲ್ಲಿ ಪ್ರಮುಖ ಬೌಲರ್ ಎನಿಸಿಕೊಂಡಿದ್ದಾರೆ. ಏಷ್ಯಾಕಪ್ ಮತ್ತು ವಿಶ್ವಕಪ್‌ನಲ್ಲಿ ಸಿರಾಜ್ ಆಡುವುದು ತಂಡಕ್ಕೆ ಮುಖ್ಯವಾಗಿದೆ. ಇದೇ ಕಾರಣಕ್ಕೆ ಬಿಸಿಸಿಐ ಆಟಗಾರರ ಫಿಟ್ನೆಸ್ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಿದೆ.
ಏಕದಿನ ವಿಶ್ವಕಪ್‌ಗೆ ಭಾರತ 11-12 ಏಕದಿನ ಪಂದ್ಯಗಳನ್ನು ಆಡಲಿದ್ದು ಆಡುವ ಬಳಗವನ್ನು ನಿರ್ಧರಿಸಲು ರೋಹಿತ್ ಶರ್ಮಾ ಮತ್ತು ಕೋಚ್ ದ್ರಾವಿಡ್‌ಗೆ ಅವಕಾಶವಿದೆ. ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಮತ್ತು ರಿಷಬ್ ಪಂತ್ ಅವರಂತಹ ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ಹಲವು ಹೊಸ ಆಟಗಾರರು ಅವಕಾಶ ಪಡೆದುಕೊಂಡಿದ್ದಾರೆ.












Click it and Unblock the Notifications