India Vs West Indies: ಟೀಂ ಇಂಡಿಯಾ ಆಡುವ ಬಳಗ, ಪಂದ್ಯದ ಸಮಯ, ನೇರಪ್ರಸಾರ ಮಾಹಿತಿ

ವೆಸ್ಟ್ ಇಂಡೀಸ್‌ ವಿರುದ್ಧದ ಟೆಸ್ಟ್ ಸರಣಿಯನ್ನು ಗೆದ್ದ ಬಳಿಕ ಭಾರತ ಏಕದಿನ ಸರಣಿಯ ಮೊದಲ ಪಂದ್ಯವನ್ನಾಡಲು ಸಜ್ಜಾಗಿದೆ. ಜುಲೈ 27ರಂದು ಭಾರತ-ವೆಸ್ಟ್ ಇಂಡೀಸ್‌ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ಇಂದು ಆರಂಭವಾಗಲಿದೆ.

ಬಾರ್ಬಡಾಸ್‌ನ ಕೆನ್ಸಿಂಗ್ಟನ್ ಓವಲ್ ಅಂಗಳದಲ್ಲಿ ಏಕದಿನ ಸರಣಿಯ ಮೊದಲ ಪಂದ್ಯ ನಡೆಯಲಿದೆ. ಭಾರತೀಯ ಕಾಲಮಾನ 7 ಗಂಟೆಗೆ ಪಂದ್ಯ ಆರಂಭವಾಗಲಿದೆ. 2023ರ ಏಕದಿನ ವಿಶ್ವಕಪ್‌ಗೆ ಭಾರತ ತಂಡದ ತಯಾರಿ ದೃಷ್ಟಿಯಿಂದ ಈ ಸರಣಿ ಮಹತ್ವದ್ದಾಗಿದೆ.

India Vs West Indies: Team India Playing XI, Timings, Live Streaming Details

ಏಕದಿನ ವಿಶ್ವಕಪ್‌ಗೆ ಭಾರತ ತಂಡವನ್ನು ಆಯ್ಕೆ ಮಾಡುವ ದೃಷ್ಟಿಯಿಂದ ಈ ಸರಣಿ ಮಹತ್ವ ವಹಿಸಲಿದೆ. ವಿಶ್ವಕಪ್‌ಗೆ ಭಾರತ ಏಕದಿನ ತಂಡ ಪ್ಲೇಯಿಂಗ್ 11 ಅಂತಿಮಗೊಳಿಸಲು ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್ ಅವರಿಗೆ ಈ ಸರಣಿ ಸಹಕಾರಿಯಾಗಲಿವೆ.

ಭಾರತ ವಿಶ್ವಕಪ್‌ ಆರಂಭಕ್ಕೆ ಮುನ್ನ 12 ಏಕದಿನ ಪಂದ್ಯಗಳನ್ನು ಆಡಲಿದೆ. ಅದರಲ್ಲೂ ಪ್ರಮುಖ ಆಟಗಾರರು ಇಲ್ಲದೆ ವಿಶ್ವಕಪ್‌ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಬದಲೀ ಆಟಗಾರರನ್ನು ಅಂತಿಮಗೊಳಿಸುವುದು ಅವಶ್ಯಕವಾಗಿದೆ.

ರೋಹಿತ್ ಶರ್ಮಾ ಹೇಳಿದ್ದೇನು?

"ನಾವು ವೆಸ್ಟ್ ಇಂಡೀಸ್ ವಿರುದ್ಧ 3 ಏಕದಿನ ಪಂದ್ಯಗಳನ್ನು ಆಡಲಿದ್ದೇವೆ. ಏಷ್ಯಾಕಪ್‌ನಲ್ಲಿ 5-6 ಪಂದ್ಯಗಳನ್ನು ಆಡುತ್ತೇವೆ, ಅದಾದ ನಂತರ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಆಡಲಿದ್ದೇವೆ. ವಿಶ್ವಕಪ್ ಆರಂಭಕ್ಕೆ ಮುನ್ನ 11-12 ಏಕದಿನ ಪಂದ್ಯಗಳನ್ನು ಆಡುತ್ತೇವೆ. ಯಾವ ಆಟಗಾರರು ತಂಡದಲ್ಲಿ ಇರುತ್ತಾರೆ ಎಂದು ನಿರ್ಧರಿಸಲು ಇದು ಉತ್ತಮ ಸಮಯ. ಅನೇಕ ಹೊಸ ಆಟಗಾರರಿಗೆ ಆಡಲು ಅವಕಾಶ ನೀಡಲಾಗುತ್ತದೆ" ಎಂದು ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ ಮತ್ತು ರಿಷಬ್ ಪಂತ್ ತಂಡದಲ್ಲಿ ಇಲ್ಲದೇ ಪ್ರಮುಖ ಪಂದ್ಯಗಳನ್ನು ಆಡಲಿದೆ. ಪಂತ್ ಹೊರತುಪಡಿಸಿ ಉಳಿದ ಆಟಗಾರರು ಏಷ್ಯಾಕಪ್, ವಿಶ್ವಕಪ್‌ನಲ್ಲಿ ಆಡುವ ಸಾಧ್ಯತೆ ಕೂಡ ಇದೆ.

ಭಾರತ ತಂಡದ ಸಂಭಾವ್ಯ ಆಡುವ ಬಳಗ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್/ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಜಯದೇವ್ ಉನದ್ಕತ್, ಮುಖೇಶ್ ಕುಮಾರ್

ವೆಸ್ಟ್ ಇಂಡೀಸ್ ಸಂಭಾವ್ಯ ಆಡುವ ಬಳಗ

ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಕೀಸಿ ಕಾರ್ಟಿ, ಶಾಯ್ ಹೋಪ್ (ನಾಯಕ / ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ರೋವ್‌ಮನ್ ಪೊವೆಲ್, ರೊಮಾರಿಯೋ ಶೆಫರ್ಡ್, ಕೆವಿನ್ ಸಿಂಕ್ಲೇರ್, ಅಲ್ಜಾರಿ ಜೋಸೆಫ್, ಓಶೇನ್ ಥಾಮಸ್, ಜೇಡನ್ ಸೀಲ್ಸ್ / ಯಾನಿಕ್ ಕ್ಯಾರಿಯಾ.

ಪಂದ್ಯ ವೀಕ್ಷಣೆ ಹೇಗೆ

ಭಾರತ - ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯವನ್ನು ಭಾರತದಲ್ಲಿ ದೂರದರ್ಶನ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದು. ಜಿಯೋ ಸಿನಿಮಾ ಆಪ್ ಮತ್ತು ವೆಬ್‌ಸೈಟ್‌ನಲ್ಲಿ ಕೂಡ ಪಂದ್ಯದ ನೇರಪ್ರಸಾರವನ್ನು ವೀಕ್ಷಣೆ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+