Ind vs Aus: ಸೆಮಿಫೈನಲ್‌ನಲ್ಲಿ ಭಾರತಕ್ಕೆ ಆಸ್ಟ್ರೇಲಿಯಾ ಎದುರಾಳಿ; ಪಂದ್ಯ ಯಾವಾಗ?

ಭಾನುವಾರ ನಡೆದ ಚಾಂಪಿಯನ್ಸ್ ಟ್ರೋಫಿ 2025ರ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ 44 ರನ್‌ಗಳ ಭರ್ಜರಿ ಗೆಲುವು ಸಾಧಿಸಿದ್ದು ಎ ಗುಂಪಿನಲ್ಲಿ ಅಗ್ರಸ್ಥಾನದೊಂದಿಗೆ ಸೆಮಿಫೈನಲ್ ಪ್ರವೇಶಿಸಿದೆ. ಈ ಬಾರಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಮೊದಲ ಪಂದ್ಯ ಆಡಿದ ವರುಣ್ ಚಕ್ರವರ್ತಿ 5 ವಿಕೆಟ್ ಪಡೆಯುವ ಮೂಲಕ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.

ಸೆಮಿಫೈನಲ್‌ನಲ್ಲಿ ಭಾರತಕ್ಕೆ ಆಸ್ಟ್ರೇಲಿಯಾ ಎದುರಾಳಿಯಾಗಲಿದೆ. 2023ರ ಏಕದಿನ ವಿಶ್ವಕಪ್ ಫೈನಲ್ ಸೋಲಿನ ಲೆಕ್ಕಾ ಚುಕ್ತಾ ಮಾಡಲು ಭಾರತಕ್ಕೆ ಇದೀಗ ಒಳ್ಳೆಯ ಅವಕಾಶ ಸಿಕ್ಕಿದೆ. ಮತ್ತೊಂದು ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ.

india will face australia in champions trophy 2025 semifinal

ಭಾರತ vs ಆಸ್ಟ್ರೇಲಿಯಾ ಪಂದ್ಯ ಯಾವಾಗ?

ಮಾರ್ಚ್ 4 ರಂದು ಮಂಗಳವಾರ ನಡೆಯುವ ಮೊದಲನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲೇ ಈ ಪಂದ್ಯ ನಡೆಯಲಿದೆ. ಮಾರ್ಚ್ 5ರಂದು ಎರಡನೇ ಸೆಮಿಫೈನಲ್ ಪಂದ್ಯ ನಡೆಯಲಿದ್ದು ದಕ್ಷಿಣ ಆಫ್ರಿಕಾ ನ್ಯೂಜಿಲೆಂಡ್ ವಿರುದ್ಧ ಸೆಣೆಸಲಿದೆ. ಲಾಹೋರ್ ನ ಗಡಾಫಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಎರಡೂ ಪಂದ್ಯಗಳು ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿವೆ.

ಆಸ್ಟ್ರೇಲಿಯಾ ಕೂಡ ಈ ಬಾರಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಅಜೇಯವಾಗಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದೆ. 3 ಪಂದ್ಯದಲ್ಲಿ ಒಂದೇ ಒಂದು ಪಂದ್ಯ ಮಾತ್ರ ಗೆದ್ದಿದ್ದು ಉಳಿದ ಎರಡು ಪಂದ್ಯಗಳಲ್ಲಿ ಒಂದು ಪಂದ್ಯ ಮಳೆಯಿಂದ ಸಂಪೂರ್ಣವಾಗಿ ರದ್ದಾದರೆ ಇನ್ನೊಂದು ಪಂದ್ಯ ಅರ್ಧಕ್ಕೆ ನಿಂತಿದ್ದರಿಂದ ಫಲಿತಾಂಶವಿಲ್ಲದೆ ಮುಕ್ತಾಯಗೊಂಡಿತ್ತು. ಆದರೂ 4 ಅಂಕಗಳೊಂದಿಗೆ ಸೆಮಿಫೈನಲ್‌ಗೆ ಪ್ರವೇಶಿಸಿದೆ.

ಭಾರತ ಆಡಿರುವ ಮೂರು ಪಂದ್ಯಗಳನ್ನು ಗೆದ್ದು 6 ಅಂಕಗಳೊಂದಿಗೆ ಮೊದಲನೇ ಸ್ಥಾನದಲ್ಲಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದೆ. ಬ್ಯಾಟಿಂಗ್, ಬೌಲಿಂಗ್ ಎರಡೂ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿದ್ದು ಸೆಮಿಫೈನಲ್‌ನಲ್ಲೂ ಉತ್ತಮ ಪ್ರದರ್ಶನ ಮುಂದುವರೆಸುವ ವಿಶ್ವಾಸದಲ್ಲಿದೆ.

2023ರಲ್ಲಿ ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಅಜೇಯವಾಗಿ ಫೈನಲ್ ಪ್ರವೇಶಿಸಿ ಚಾಂಪಿಯನ್ ಆಗುವ ವಿಶ್ವಾಸದಲ್ಲಿದ್ದ ಭಾರತಕ್ಕೆ ಆಸ್ಟ್ರೇಲಿಯಾ ಬಿಗ್ ಶಾಕ್ ನೀಡಿತ್ತು. ಅಹಮದಾಬಾದ್‌ನಲ್ಲಿ ನಡೆದಿದ್ದ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಭಾರತವನ್ನು ಸೋಲಿಸುವ ಮೂಲಕ ಚಾಂಪಿಯನ್ ಆಗಿತ್ತು. ಈಗ ಅಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಅವಕಾಶ ಭಾರತಕ್ಕೆ ಸಿಕ್ಕಿದೆ.

ಮೂರು ಪಂದ್ಯಗಳನ್ನು ದುಬೈನಲ್ಲಿ ಆಡಿರುವ ಭಾರತ ಇಲ್ಲಿನ ಪರಿಸ್ಥಿತಿಗೆ ಒಗ್ಗಿಕೊಂಡಿದೆ. ಆಸ್ಟ್ರೇಲಿಯಾ ಪಾಕಿಸ್ತಾನದಲ್ಲಿ ಆಡಿ ದುಬೈಗೆ ಆಗಮಿಸಿದ್ದು, ಇಲ್ಲಿನ ಪಿಚ್‌ಗೆ ಹೊಂದಿಕೊಳ್ಳಲು ಕಷ್ಟಪಡುವ ಸಾಧ್ಯತೆ ಇದ್ದು, ಭಾರತ ಇದರ ಲಾಭ ಪಡೆದರೆ ಆಸ್ಟ್ರೇಲಿಯಾವನ್ನು ಮಣಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+