India vs Pakistan: ಫೈನಲ್‌ನಲ್ಲಿ ಭಾರತ ಪಾಕಿಸ್ತಾನ ಮುಖಾಮುಖಿ
ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ 2024ರ ಪಂದ್ಯಾವಳಿಯ ಫೈನಲ್‌ನಲ್ಲಿ ಭಾರತ ಚಾಂಪಿಯನ್ಸ್ ಪಾಕಿಸ್ತಾನ ಚಾಂಪಿಯನ್ಸ್ ತಂಡವನ್ನು ಎದುರಿಸಲಿದೆ. ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬ್ಯಾಸ್ಟನ್‌ನಲ್ಲಿ ಈ ಪಂದ್ಯ ನಡೆಯಲಿದೆ.
ಶುಕ್ರವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಚಾಂಪಿಯನ್ಸ್ ವೆಸ್ಟ್ ಇಂಡೀಸ್ ಚಾಂಪಿಯನ್ಸ್ ವಿರುದ್ಧ 20 ರನ್‌ಗಳ ಗೆಲುವು ಸಾಧಿಸುವ ಮೂಲಕ ಫೈನಲ್ ಪ್ರವೇಶಿಸಿದ್ದು, ಭಾರತ ಆಸ್ಟ್ರೇಲಿಯಾ ವಿರುದ್ಧ 86 ರನ್‌ಗಳ ಭರ್ಜರಿ ಗೆಲುವು ಸಾಧಿಸಿದ್ದು ಫೈನಲ್‌ಗೆ ಪ್ರವೇಶಿಸಿದೆ.

ಸೇಡು ತೀರಿಸಿಕೊಳ್ಳುತ್ತಾ ಭಾರತ
ಲೀಗ್ ಹಂತದ ಪಂದ್ಯದಲ್ಲಿ ಭಾರತ ಪಾಕಿಸ್ತಾನ ಮುಖಾಮುಖಿಯಾಗಿದ್ದವರು, ಈ ಪಂದ್ಯದಲ್ಲಿ ಪಾಕಿಸ್ತಾನ ಭಾರತದ ವಿರುದ್ಧ 68 ರನ್‌ಗಳಿಂದ ಗೆಲುವು ಸಾಧಿಸಿತ್ತು. ಈಗ ಫೈನಲ್‌ನಲ್ಲಿ ಮತ್ತೆ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗುತ್ತಿದ್ದು, ಭಾರತ ಗೆಲುವು ಸಾಧಿಸಲು ರಣತಂತ್ರ ರೂಪಿಸಿದೆ.
ಪಂದ್ಯದ ಸಮಯ, ಮಾಹಿತಿ
ಶನಿವಾರ (ಇಂದು) ಭಾರತೀಯ ಕಾಲಮಾನ ರಾತ್ರಿ 9 ಗಂಟೆಗೆ ಪಂದ್ಯ ಆರಂಭವಾಗಲಿದೆ. ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ಈ ಪಂದ್ಯ ನಡೆಯಲಿದೆ. ಮೊಬೈಲ್‌ನಲ್ಲಿ ಈ ಪಂದ್ಯದ ನೇರಪ್ರಸಾರವನ್ನು ಫ್ಯಾನ್‌ಕೋಡ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಪಂದ್ಯವನ್ನು ನೋಡಬಹುದು. ಟಿವಿಯಲ್ಲಿ ವೀಕ್ಷಿಸುವವರು ಸ್ಟಾರ್ ಸ್ಪೋರ್ಟ್ಸ್ 1 ಮತ್ತು ಸ್ಟಾರ್ ಸ್ಪೋರ್ಟ್ಸ್ 1 ಎಚ್‌ಡಿ ಚಾನೆಲ್‌ನಲ್ಲಿ ನೋಡಬಹುದಾಗಿದೆ.
ಉಭಯ ತಂಡಗಳ ಸಂಭಾವ್ಯ ಆಡುವ ಬಳಗ
ಭಾರತ: ರಾಬಿನ್ ಉತ್ತಪ್ಪ (ವಿಕೆಟ್ ಕೀಪರ್), ಗುರುಕೀರತ್ ಸಿಂಗ್ ಮಾನ್, ಸುರೇಶ್ ರೈನಾ, ಅಂಬಟಿ ರಾಯುಡು, ಯುವರಾಜ್ ಸಿಂಗ್ (ನಾಯಕ), ಯೂಸುಫ್ ಪಠಾಣ್, ಇರ್ಫಾನ್ ಪಠಾಣ್, ಪವನ್ ನೇಗಿ, ವಿನಯ್ ಕುಮಾರ್, ಹರ್ಭಜನ್ ಸಿಂಗ್, ಧವಲ್ ಕುಲಕರ್ಣಿ.
ಪಾಕಿಸ್ತಾನ: ಕಮ್ರಾನ್ ಅಕ್ಮಲ್ (ವಿಕೆಟ್ ಕೀಪರ್), ಶಾರ್ಜೀಲ್ ಖಾನ್, ಸೊಹೈಬ್ ಮಕ್ಸೂದ್, ಯೂನಿಸ್ ಖಾನ್ (ನಾಯಕ), ಶಾಹಿದ್ ಅಫ್ರಿದಿ, ಶೋಯೆಬ್ ಮಲಿಕ್, ಮಿಸ್ಬಾ-ಉಲ್-ಹಕ್, ಅಮೀರ್ ಯಾಮಿನ್, ಸೊಹೈಲ್ ಖಾನ್, ವಹಾಬ್ ರಿಯಾಜ್, ಸೊಹೈಲ್ ತನ್ವೀರ್.












Click it and Unblock the Notifications