ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ನಡೆಯಲಿದೆ 2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ ಪಂದ್ಯಾವಳಿ

|
Google Oneindia Kannada News

2025ರಲ್ಲಿ ನಡೆಯುವ ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ಗೆ ಭಾರತ ಆತಿಥ್ಯ ವಹಿಸಲಿದೆ. ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆಯ ವಾರ್ಷಿಕ ಸಮ್ಮೇಳನದ ಅಂತಿಮ ದಿನದಂದು ಐಸಿಸಿ ಈ ಘೋಷಣೆ ಮಾಡಿದೆ.

ಏಕದಿನ ವಿಶ್ವಕಪ್ ಹೊರತಾಗಿ, 2024ರಲ್ಲಿ ನಡೆಯುವ ಟಿ20 ವಿಶ್ವಕಪ್ ಪಂದ್ಯಾವಳಿಗೆ ಬಾಂಗ್ಲಾ ಆತಿಥ್ಯ ವಹಿಸಲಿದ್ದು, 2026ರ ಟಿ20 ವಿಶ್ವಕಪ್ ಪಂದ್ಯಾವಳಿಗೆ ಇಂಗ್ಲೆಂಡ್ ಆತಿಥ್ಯ ವಹಿಸಲಿದೆ.

ಅಕ್ಷರ್ ಅಬ್ಬರಕ್ಕೆ ವೆಸ್ಟ್ ಇಂಡೀಸ್ ತತ್ತರ!: ಕ್ವೀನ್ಸ್ ಪಾರ್ಕ್‌ ಓವಲ್‌ನಲ್ಲಿ ದಾಖಲೆ ಬರೆದ ಟೀಂ ಇಂಡಿಯಾಅಕ್ಷರ್ ಅಬ್ಬರಕ್ಕೆ ವೆಸ್ಟ್ ಇಂಡೀಸ್ ತತ್ತರ!: ಕ್ವೀನ್ಸ್ ಪಾರ್ಕ್‌ ಓವಲ್‌ನಲ್ಲಿ ದಾಖಲೆ ಬರೆದ ಟೀಂ ಇಂಡಿಯಾ

ಶ್ರೀಲಂಕಾ ಮಹಿಳಾ ಕ್ರಿಕೆಟ್ ತಂಡ ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆದರೆ, 2027ರಲ್ಲಿ ಆಯೋಜಿಸಲಾಗುವ ಮೊದಲ ಮಹಿಳಾ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗೆ ಆತಿಥ್ಯ ವಹಿಸಲಿದೆ.

ಸ್ಪರ್ಧಾತ್ಮಕ ಬಿಡ್ಡಿಂಗ್ ಪ್ರಕ್ರಿಯೆ ಮೂಲಕ ಆತಿಥ್ಯ ವಹಿಸುವ ರಾಷ್ಟ್ರಗಳನ್ನು ಅಂತಿಮಗೊಳಿಸಲಾಗಿದೆ. ಕ್ಲೇರ್ ಕಾನರ್, ಸೌರವ್ ಗಂಗೂಲಿ ಮತ್ತು ರಿಕಿ ಸ್ಕೆರಿಟ್ ಅವರೊಂದಿಗೆ ಮಾರ್ಟಿನ್ ಸ್ನೆಡೆನ್ ಅವರ ಅಧ್ಯಕ್ಷತೆಯ ಮಂಡಳಿಯ ಉಪ ಸಮಿತಿಯು ಪ್ರತಿ ಬಿಡ್ ಅನ್ನು ಪರಿಶೀಲಿಸಿದೆ ಎಂದು ಐಸಿಸಿ ಹೇಳಿದೆ.

ಭಾರತದಲ್ಲಿ ಐದನೇ ಬಾರಿಗೆ ಐಸಿಸಿ ಮಹಿಳಾ ವಿಶ್ವಕಪ್ ಪಂದ್ಯಾವಳಿಯನ್ನು ಆಯೋಜಿಸಲಾಗುತ್ತಿದೆ. ಈವರೆಗೆ ಮೂರು ಏಕದಿನ ಮತ್ತು ಒಂದು ಟಿ20 ಮಹಿಳಾ ವಿಶ್ವಕಪ್ ಪಂದ್ಯಾವಳಿ ಭಾರತದಲ್ಲಿ ಆಯೋಜಿಸಲಾಗಿದೆ.

 9 ವರ್ಷದ ನಂತರ ಭಾರತದಲ್ಲಿ ವಿಶ್ವಕಪ್ ಟೂರ್ನಿ

9 ವರ್ಷದ ನಂತರ ಭಾರತದಲ್ಲಿ ವಿಶ್ವಕಪ್ ಟೂರ್ನಿ

2016ರಲ್ಲಿ ಭಾರತದಲ್ಲಿ ಪುರುಷರ ಮತ್ತು ಮಹಿಳೆಯರ ಟಿ20 ವಿಶ್ವಕಪ್ ಪಂದ್ಯಾವಳಿ ಆಯೋಜನೆ ಮಾಡಲಾಗಿತ್ತು. ಆ ನಂತರ ಭಾರತದಲ್ಲಿ ಯಾವುದೇ ಐಸಿಸಿ ಪಂದ್ಯಾವಳಿಗಳು ಇನ್ನೂ ಆಯೋಜನೆಯಾಗಿಲ್ಲ. ಈಗ 9 ವರ್ಷದ ಬಳಿಕ 2025ರಲ್ಲಿ ಮಹಿಳಾ ಏಕದಿನ ವಿಶ್ವಕಪ್ ಪಂದ್ಯಾವಳಿ ಭಾರತದಲ್ಲಿ ನಡೆಯಲಿದೆ.

2022ರಲ್ಲಿ ನಡೆದ ವಿಶ್ವಕಪ್ ಆವೃತ್ತಿಯಂತೆಯೇ 2025ರ ವಿಶ್ವಕಪ್ ಪಂದ್ಯಾವಳಿ ನಡೆಯಲಿದೆ. ಒಟ್ಟು ಎಂಟು ತಂಡಗಳು ಪ್ರಶಸ್ತಿಗಾಗಿ ಕಾದಾಡಲಿದ್ದು, ಒಟ್ಟು 31 ಪಂದ್ಯಗಳು ನಡೆಯಲಿವೆ.

ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾ ಕಪ್ ಟೂರ್ನಿ ಯುಎಇಗೆ ಸ್ಥಳಾಂತರ: ಸೌರವ್ ಗಂಗೂಲಿಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾ ಕಪ್ ಟೂರ್ನಿ ಯುಎಇಗೆ ಸ್ಥಳಾಂತರ: ಸೌರವ್ ಗಂಗೂಲಿ

 ಮಹಿಳಾ ಕ್ರಿಕೆಟ್ ಜನಪ್ರಿಯತೆ ಹೆಚ್ಚಿಸಲು ಸಹಕಾರಿ

ಮಹಿಳಾ ಕ್ರಿಕೆಟ್ ಜನಪ್ರಿಯತೆ ಹೆಚ್ಚಿಸಲು ಸಹಕಾರಿ

ಭಾರತ 2025ರ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿ ಆತಿಥ್ಯ ವಹಿಸುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಭಾರತದಲ್ಲಿ ಮಹಿಳಾ ಕ್ರಿಕೆಟ್‌ನ ಜನಪ್ರಿಯತೆಗೆ ಈ ಟೂರ್ನಿ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.

"ಭಾರತ 2013ರಲ್ಲಿ ಏಕದಿನ ಮಹಿಳಾ ವಿಶ್ವಕಪ್ ಟೂರ್ನಿ ಆಯೋಜಿಸಿತ್ತು. ಅಂದಿನಿಂದ ಇಂದಿನಿವರೆಗೆ ಕ್ರೀಡೆಯಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಮಹಿಳಾ ಕ್ರಿಕೆಟ್ ಜನಪ್ರಿಯತೆ ಹೆಚ್ಚಾಗುತ್ತಿದೆ. ಭಾರತದಲ್ಲಿ ವಿಶ್ವಕಪ್ ಪಂದ್ಯಾವಳಿ ಆಯೋಜನೆ ಸರಿಯಾದ ಹೆಜ್ಜೆಯಾಗಿದೆ, ಐಸಿಸಿಯಎಲ್ಲಾ ಅವಶ್ಯಕತೆಗಳನ್ನು ಪೂರೈಸಲು ಬಿಸಿಸಿಐ ನಿಕಟವಾಗಿ ಕೆಲಸ ಮಾಡುತ್ತದೆ" ಎಮದು ಹೇಳಿದ್ದಾರೆ.

 ಅದ್ದೂರಿಯಾಗಿ ಪಂದ್ಯಾವಳಿ ಆಯೋಜನೆ

ಅದ್ದೂರಿಯಾಗಿ ಪಂದ್ಯಾವಳಿ ಆಯೋಜನೆ

2025ರ ಮಹಿಳಾ ವಿಶ್ವಕಪ್ ಪಂದ್ಯಾವಳಿಯನ್ನು ಸ್ಮರಣೀಯವನ್ನಾಗಿಸುತ್ತೇವೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ. "ಪಂದ್ಯಾವಳಿಯನ್ನು ಸ್ಮರಣೀಯವಾಗಿಸುವ ಯಾವುದೇ ಅವಕಾಶವನ್ನು ಬಿಸಿಸಿಐ ಕಳೆದುಕೊಳ್ಳುವುದಿಲ್ಲ, ನಾವು ವಿಶ್ವಕಪ್‌ನ ಅತ್ಯಂತ ಯಶಸ್ವಿ ಆವೃತ್ತಿಯನ್ನು ಹೊಂದುತ್ತೇವೆ ಎಂದು ನನಗೆ ವಿಶ್ವಾಸವಿದೆ" ಎಂದು ಅವರು ಹೇಳಿದ್ದಾರೆ.

ಐಸಿಸಿ ಪಂದ್ಯಾವಳಿಯು ಮಹಿಳಾ ಕ್ರಿಕೆಟ್ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

 ಇದುವರೆಗೂ ಒಂದೂ ಕಪ್ ಗೆಲ್ಲದ ಮಹಿಳಾ ತಂಡ

ಇದುವರೆಗೂ ಒಂದೂ ಕಪ್ ಗೆಲ್ಲದ ಮಹಿಳಾ ತಂಡ

ಭಾರತ ಮಹಿಳಾ ತಂಡ ಇದುವರೆಗೂ ಒಮ್ಮೆಯೂ ವಿಶ್ವಕಪ್ ಗೆದ್ದಿಲ್ಲ. 1978, 1997, 2013ರಲ್ಲಿ ಭಾರತ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಗೆ ಆತಿಥ್ಯ ವಹಿಸಿದೆ. 2016ರಲ್ಲಿ ಟಿ20 ಮಹಿಳಾ ವಿಶ್ವಕಪ್‌ಗೆ ಆತಿಥ್ಯ ವಹಿಸಿತ್ತು. 2020ರಲ್ಲಿ ಟಿ20 ವಿಶ್ವಕಪ್‌ನಲ್ಲಿ ಫೈನಲ್ ಪ್ರವೇಶಿಸಿದ್ದ ಭಾರತ ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿ ಪಟ್ಟಿತು.

ಏಕದಿನ ವಿಶ್ವಕಪ್‌ನಲ್ಲಿ ಕೂಡ ಭಾರತ ಮಹಿಳಾ ತಂಡ ಎರಡು ಬಾರಿ ಫೈನಲ್ ಪ್ರವೇಶಿಸಿದ್ದು ಕಪ್ ಗೆಲ್ಲುವಲ್ಲಿ ವಿಫಲವಾಗಿದೆ. ಮಹಿಳಾ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಇಂಗ್ಲೆಂಡ್ ಮಹಿಳಾ ತಂಡ ಹೆಚ್ಚು ಬಾರಿ ಅಂದರೆ 4 ಬಾರಿ ಚಾಂಪಿಯನ್ ಆಗಿದೆ.

Recommended Video

David Or Dravid?? ತಮ್ಮ ಹೆಸರಿನ ಬಗ್ಗೆ ಇದ್ದ ಗೊಂದಲದ ಬಗ್ಗೆ ರಾಹುಲ್ ದ್ರಾವಿಡ್ ಹೇಳಿದ್ದೇನು? | OneIndia

English summary
India will host the ICC Women's ODI World Cup in 2025. The announcement was made by the ICC Board on Tuesday in Birmingham, announcement came out on the final day of the global cricket body's annual conference.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X