Ind vs Eng: ತಿಲಕ್‌ ವರ್ಮಾ ಅಬ್ಬರ; ಭಾರತಕ್ಕೆ ರೋಚಕ ಗೆಲುವು

ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತ 2 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ. ಒಂದು ಕಡೆ ವಿಕೆಟ್ ಬೀಳುತ್ತಿದ್ದರೂ ಕೊನೆಯವರೆಗೂ ಹೋರಾಟ ನೀಡಿದ ತಿಲಕ್ ವರ್ಮಾ ಭಾರತಕ್ಕೆ ಕೊನೆಯ ಓವರ್ ನಲ್ಲಿ ರೋಚಕ ಗೆಲುವು ತಂದುಕೊಟ್ಟರು.

ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಭಾರತ ಬೌಲರ್ ಗಳು ಮತ್ತೊಮ್ಮೆ ಇಂಗ್ಲೆಂಡ್ ತಂಡವನ್ನು ಕಾಡಿದರು. ಅರ್ಷದೀಪ್‌ ಸಿಂಗ್ ಇಂಗ್ಲೆಂಡ್‌ಗೆ ಮೊದಲ ಆಘಾತ ನೀಡಿದರು. ಇಂಗ್ಲೆಂಡ್‌ನ ಸ್ಫೋಟಕ ಬ್ಯಾಟರ್ ಫಿಲ್ ಸಾಲ್ಟ್‌ 4 ರನ್ ಗಳಿಸಿದ್ದಾಗ ಅರ್ಷದೀಪ್ ಅವರಿಗೆ ವಿಕೆಟ್ ಒಪ್ಪಿಸಿದರು.

India win against england by 2 wickets in chennai thriller tilak varma

ಬೆನ್ ಡಕೆಟ್ 3 ರನ್ ಗಳಿಸಿ ವಾಷಿಂಗ್ಟನ್ ಸುಂದರ್ ಅವರ ಬೌಲಿಂಗ್‌ನಲ್ಲಿ ಔಟಾದರು. ನಾಯಕ ಜೋಸ್ ಬಟ್ಲರ್ ಮಾತ್ರ ಭಾರತದ ಬೌಲಿಂಗ್ ಅನ್ನು ಸಮರ್ಥವಾಗಿ ಎದುರಿಸಿದರು. 30 ಎಸೆತಗಳಲ್ಲಿ 2 ಬೌಂಡರಿ ಮೂರು ಸಿಕ್ಸರ್ ಸಹಿತ 45 ರನ್ ಗಳಿಸಿದರು. ಹ್ಯಾರಿ ಬ್ರೂಕ್ 13 ರನ್, ಲಿವಿಂಗ್‌ಸ್ಟೋನ್ 14 ರನ್ ಗಳಿಸಿದರು.

ಜೇಮ್ ಸ್ಮಿತ್ 12 ಎಸೆತಗಳಲ್ಲಿ 22 ರನ್ ಗಳಿಸಿದರೆ, ಬ್ರೈಡನ್ ಕಾರ್ಸ್ 17 ಎಸೆತಗಳಲ್ಲಿ 1 ಬೌಂಡರಿ 3 ಸಿಕ್ಸರ್ ಸಹಿತ 31 ರನ್ ಗಳಿಸಿ ರನೌಟ್ ಆದರು. ಇಂಗ್ಲೆಂಡ್ ಅಂತಿಮವಾಗಿ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 165 ರನ್ ಕಲೆಹಾಕಿತು.

ಅಕ್ಷರ್ ಪಟೇಲ್ ಮತ್ತು ವರುಣ್ ಚಕ್ರವರ್ತಿ ತಲಾ ಎರಡು ವಿಕೆಟ್ ಪಡೆದರೆ, ಅರ್ಷದೀಪ್ ಸಿಂಗ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್ ಮತ್ತು ಅಭಿಷೇಕ್ ಶರ್ಮಾ ತಲಾ ಒಂದು ವಿಕೆಟ್ ಪಡೆದರು.

ಭಾರತಕ್ಕೆ ಗೆಲುವಿನ 'ತಿಲಕ'

166 ರನ್‌ಗಳ ಸವಾಲಿನ ಗುರಿಯನ್ನು ಬೆನ್ನತ್ತಿದ ಭಾರತ ಉತ್ತಮ ಆರಂಭವನ್ನು ಪಡೆಯಲಿಲ್ಲ. ಸಂಜು ಸ್ಯಾಮ್ಸನ್ 7 ಎಸೆತಗಳಲ್ಲಿ 5 ರನ್ ಗಳಿಸಿ ಜೋಫ್ರಾ ಆರ್ಚರ್ ಬೌಲಿಂಗ್‌ನಲ್ಲಿ ಔಟಾದರು. ಅಭಿಷೇಕ್ ಶರ್ಮಾ 6 ಎಸೆತಗಳಲ್ಲಿ 12 ರನ್ ಗಳಿಸಿ ಔಟಾದರು. ನಾಯಕ ಸೂರ್ಯಕುಮಾರ್ ಯಾದವ್ ಕೂಡ 7 ಎಸೆತಗಳಲ್ಲಿ 12 ರನ್ ಗಳಿಸಿ ಔಟಾದರು.

ಧ್ರುವ್ ಜುರೆಲ್ 4 ರನ್ ಗಳಿಸಿದರೆ, ಹಾರ್ದಿಕ್ ಪಾಂಡ್ಯ 7 ರನ್ ಗಳಿಸಿದರು. ವಾಷಿಂಗ್ಟನ್ ಸುಂದರ್ 19 ಎಸೆತಗಳಲ್ಲಿ 26 ರನ್ ಗಳಿಸುವ ಮೂಲಕ ತಿಲಕ್ ವರ್ಮಾ ಅವರಿಗೆ ಜೊತೆಯಾದರು. ತಿಲಕ್ ವರ್ಮಾ 55 ಎಸೆತಗಳಲ್ಲಿ 4 ಬೌಂಡರಿ 5 ಸಿಕ್ಸರ್ ಸಹಿತ ಅಜೇಯ 72 ರನ್ ಗಳಿಸುವ ಮೂಲಕ ಭಾರತಕ್ಕೆ ಕೊನೆಯ ಓವರ್ ನಲ್ಲಿ ಗೆಲುವು ತಂದುಕೊಟ್ಟರು. ರವಿ ಬಿಷ್ಣೋಯ್ ಕೂಡ 5 ಎಸೆತಗಳಲ್ಲಿ ಅಜೇಯ 9 ರನ್ ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+