India vs Pakistan: ಮಿಂಚಿದ ಶ್ರೇಯಾಂಕಾ ಪಾಟೀಲ್; ಪಾಕಿಸ್ತಾನದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತ

ಟಿ20 ಮಹಿಳಾ ವಿಶ್ವಕಪ್ ಪಂದ್ಯದಲ್ಲಿ ಭಾರತ ಪಾಕಿಸ್ತಾನದ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಭಾನುವಾರ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತ ಉತ್ತಮ ಆಲ್‌ರೌಂಡ್ ಪ್ರದರ್ಶನ ನೀಡಿತು, ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು ಕಂಡಿದ್ದ ಭಾರತಕ್ಕೆ ಸೆಮಿಫೈನಲ್ ಆಸೆ ಜೀವಂತವಾಗಿಟ್ಟುಕೊಳ್ಳಲು ಈ ಪಂದ್ಯದಲ್ಲಿ ಗೆಲ್ಲುವುದು ಅನಿವಾರ್ಯವಾಗಿತ್ತು.

ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಮೊದಲನೇ ಪಂದ್ಯದಲ್ಲಿ ಬೌಲಿಂಗ್‌ನಲ್ಲಿ ವಿಫಲವಾಗಿದ್ದ ಭಾರತ ಎರಡನೇ ಪಂದ್ಯದಲ್ಲಿ ಶಿಸ್ತಿನ ಬೌಲಿಂಗ್ ದಾಳಿ ನಡೆಸಿತು. ಪಾಕಿಸ್ತಾನ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 105 ರನ್ ಗಳಿಸಿತು. ಮುನೀಬ್ ಅಲಿ 17 ರನ್, ನಿದಾ ದರ್ 28 ರನ್, ಫಾತಿಮಾ ಸನಾ 13 ರನ್, ಸೈಯದ್ ಅರೂಬ್ ಶಾ 14 ರನ್ ಗಳಿಸಿದರು.

India win against pakistan in womens t20 world cup

ಭಾರತ ಅತ್ಯುತ್ತಮ ಸ್ಪಿನ್ ದಾಳಿ ಸಂಘಟಿಸಿತು, ಅರುಂಧತಿ ರೆಡ್ಡಿ 4 ಓವರ್ ಗಳಲ್ಲಿ 19 ರನ್ ನೀಡಿ 3 ವಿಕೆಟ್ ಪಡೆದು ಮಿಂಚಿದರು. ಶ್ರೇಯಾಂಕಾ ಪಾಟೀಲ್ ಕೂಡ 4 ಓವರ್ ಗಳಲ್ಲಿ ಕೇವಲ 12 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ರೇಣುಕಾಸಿಂಗ್, ದೀಪ್ತಿ ಶರ್ಮಾ ಮತ್ತು ಆಶಾ ಶೋಭನಾ ತಲಾ ಒಂದು ವಿಕೆಟ್ ಪಡೆದರು.

ಶಫಾಲಿ, ಜೆಮಿಮಾ, ಹರ್ಮನ್‌ಪ್ರೀತ್ ಮಿಂಚು

106 ರನ್‌ಗಳ ಸುಲಭ ಗುರಿಯನ್ನು ಬೆನ್ನತ್ತಿದ ಭಾರತ 18.5 ಓವರ್ ಗಳಲ್ಲಿ 108 ರನ್ ಗಳಿಸುವ ಮೂಲಕ 6 ವಿಕೆಟ್‌ಗಳ ಸುಲಭ ಗೆಲುವು ಸಾಧಿಸಿತು. ಶಫಾಲಿ ವರ್ಮಾ 32 ರನ್ ಗಳಿಸಿದರೆ, ಜೆಮಿಮಾ ರೋಡ್ರಿಗಸ್ 23 ರನ್ ಗಳಿಸಿದರೆ, ನಾಯಕಿ ಹರ್ಮನ್‌ಪ್ರೀತ್ ಕೌರ್ 29 ರನ್ ಗಳಿಸಿದರು.

ಈ ಗೆಲುವಿನ ಮೂಲಕ ಭಾರತದ ಸೆಮಿಫೈನಲ್ ಆಸೆ ಜೀವಂತವಾಗಿದೆ. ಭಾರತ ಮುಂದಿನ ಪಂದ್ಯಗಳಲ್ಲಿ ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ವಿರುದ್ಧ ಸೆಣೆಸಲಿದ್ದು, ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಸೆಮಿಫೈನಲ್ ತಲುಪಲಿದೆ. ಮೊದಲನೇ ಪಂದ್ಯದಲ್ಲಿ 58 ರನ್‌ಗಳಿಂದ ಸೋತಿದ್ದರಿಂದ ರನ್‌ ರೇಟ್ ಮೇಲೆ ಪರಿಣಾಮ ಬೀರಿದ್ದು, ಮುಂದಿನ ಪಂದ್ಯಗಳಲ್ಲಿ ಗೆಲ್ಲುವ ಜೊತೆಗೆ, ರನ್ ರೇಟ್ ಬಗ್ಗೆ ಕೂಡ ಗಮನ ಹರಿಸಬೇಕಾಗಿದೆ. ಅಕ್ಟೋಬರ್ 9ರಂದು ನಡೆಯುವ ಪಂದ್ಯದಲ್ಲಿ ಭಾರತ ಶ್ರೀಲಂಕಾ ವಿರುದ್ಧ ಸೆಣೆಸಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+