India vs West Indies: ಮಿಂಚಿದ ಕನ್ನಡಿಗ! ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ 7 ರನ್‌ಗಳ ರೋಚಕ ಗೆಲುವು
ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಇಂಟರ್ನ್ಯಾಷನಲ್ ಮಾಸ್ಟರ್ಸ್ ಲೀಗ್ ಟಿ20 ಪಂದ್ಯದಲ್ಲಿ ಭಾರತ ವೆಸ್ಟ್ ಇಂಡೀಸ್ ವಿರುದ್ಧ 7 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಸಚಿನ್ ತೆಂಡೂಲ್ಕರ್ ವಿಶ್ರಾಂತಿ ಪಡೆದ ಕಾರಣ ಯುವರಾಜ್ ಸಿಂಗ್ ಈ ಪಂದ್ಯದಲ್ಲಿ ನಾಯಕತ್ವ ವಹಿಸಿಕೊಂಡಿದ್ದರು, ಕನ್ನಡಿಗ ಸ್ಟುವರ್ಟ್ ಬಿನ್ನಿ ಅತ್ಯುತ್ತಮ ಬೌಲಿಂಗ್ ಮೂಲಕ ಭಾರತಕ್ಕೆ ರೋಚಕ ಗೆಲುವು ತಂದುಕೊಟ್ಟರು.
ಟಾಸ್ ಗೆದ್ದ ವೆಸ್ಟ್ ಇಂಡೀಸ್ ಮಾಸ್ಟರ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಇಂಡಿಯಾ ಮಾಸ್ಟರ್ಸ್ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 253 ರನ್ ಕಲೆಹಾಕಿತು. ಸೌರಭ್ ತಿವಾರಿ 37 ಎಸೆತಗಳಲ್ಲಿ 7 ಬೌಂಡರಿ 2 ಸಿಕ್ಸರ್ ಸಹಿತ 60 ರನ್ ಗಳಸಿದರು. ಅಂಬಾಟಿ ರಾಯುಡು 35 ಎಸೆತಗಳಲ್ಲಿ 8 ಬೌಂಡರಿ 4 ಸಿಕ್ಸರ್ ಸಹಿತ 63 ರನ್ ಗಳಿಸಿದರು.

ಬಳಿಕ ಬಂದ ಗುರುಕೀರತ್ ಸಿಂಗ್ 21 ಎಸೆತಗಳಲ್ಲೇ 4 ಬೌಂಡರಿ 3 ಸಿಕ್ಸರ್ ಸಹಿತ 46 ರನ್ ಗಳಿಸಿದರು. ಯೂಸುಫ್ ಪಠಾಣ್ ಅಜೇಯ 14 ರನ್ ಗಳಿಸಿದರೆ, ನಾಯಕ ಯುವರಾಜ್ ಸಿಂಗ್ 20 ಎಸೆತಗಳಲ್ಲಿ 6 ಬೌಂಡರಿ 3 ಸಿಕ್ಸರ್ ಸಹಿತ ಅಜೇಯ 49 ರನ್ ಗಳಿಸಿದರು.
ಈ ಬೃಹತ್ ಮೊತ್ತವನ್ನು ಬೆನ್ನಟ್ಟಿದ ವೆಸ್ಟ್ ಇಂಡೀಸ್ ಕೂಡ ದಿಟ್ಟ ಹೋರಾಟ ನೀಡಿತು. ಡ್ವಾನ್ ಸ್ಮಿತ್ 34 ಎಸೆತಗಳಲ್ಲಿ 7 ಬೌಂಡರಿ 6 ಭರ್ಜರಿ ಸಿಕ್ಸರ್ ಸಹಿತ 79 ರನ್ ಗಳಿಸಿದರೆ, ವಿಲಿಯಮ್ ಪೆರ್ಕಿನ್ಸ್ 24 ಎಸೆತಗಳಲ್ಲಿ 4 ಬೌಂಡರಿ 4 ಸಿಕ್ಸರ್ ಸಹಿತ 52 ರನ್ ಗಳಿಸಿ ಮಿಂಚಿದರು. ಲೆಂಡಲ್ ಸಿಮನ್ಸ್ 13 ಎಸೆತಗಳಲ್ಲಿ 1 ಬೌಂಡರಿ 5 ಭರ್ಜರಿ ಸಿಕ್ಸರ್ ಸಹಿತ 38 ರನ್ ಗಳಿಸಿದರು. ಆಶ್ಲೆ ನರ್ಸ್ 12 ಎಸೆತಗಳಲ್ಲಿ 21 ರನ್ ಗಳಿಸಿದರೆ, ನಾರ್ಸಿಂಗ್ ಡಿಯೋನರೈನ್ 28 ರನ್ ಗಳಿಸಿದರು.
ಉತ್ತಮ ಹೋರಾಟ ಕೊಟ್ಟರೂ ವೆಸ್ಟ್ ಇಂಡೀಸ್ ಗೆಲುವಿನ ಗಡಿ ದಾಟುವಲ್ಲಿ ವಿಫಲವಾಯಿತು. 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 246 ರನ್ ಗಳಿಸುವ ಮೂಲಕ 7 ರನ್‌ಗಳಿಂದ ಸೋಲು ಕಂಡಿತು. ಕನ್ನಡಿಗ ಸ್ಟುವರ್ಟ್ ಬಿನ್ನಿ 2 ಓವರ್ ಗಳಲ್ಲಿ 13 ರನ್ ಬಿಟ್ಟುಕೊಟ್ಟು 3 ವಿಕೆಟ್ ಪಡೆಯುವ ಮೂಲಕ ವೆಸ್ಟ್ ಇಂಡೀಸ್ ಅಬ್ಬರಕ್ಕೆ ಕಡಿವಾಣ ಹಾಕಿದರು.
-
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications