India vs Zimbabwe: ಜೈಸ್ವಾಲ್, ಗಿಲ್ ಅರ್ಧಶತಕ; ಸರಣಿ ಗೆದ್ದ ಭಾರತ
ಜಿಂಬಾಬ್ವೆಯ ಹರಾರೆಯಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯ 4ನೇ ಪಂದ್ಯದಲ್ಲಿ ಭಾರತ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ 3-1 ರಲ್ಲಿ ಮುನ್ನಡೆ ಸಾಧಿಸಿದ್ದು, ಇನ್ನೂ ಒಂದು ಪಂದ್ಯ ಬಾಕಿ ಇರುವಂತೆ ಸರಣಿ ಗೆದ್ದುಕೊಂಡಿದೆ.
ಜಿಂಬಾಬ್ವೆ ನೀಡಿದ153 ರನ್‌ಗಳ ಗುರಿಯನ್ನು ಭಾರತ 15.2 ಓವರ್ ಗಳಲ್ಲಿ ಯಾವುದೇ ವಿಕೆಟ್ ಕಳೆದುಕೊಳ್ಳದೆ ಬೆನ್ನಟ್ಟುವ ಮೂಲಕ ಬೃಹತ್ ಗೆಲುವು ಸಾಧಿಸಿತು.

ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 152 ರನ್ ಗಳಿಸಿತು.
ವೆಸ್ಲಿ ಮಾಧೆವೆರೆ 25 ರನ್ ಗಳಿಸಿದರೆ, ಮರುಮನಿ 32 ರನ್ ಗಳಿಸಿದರು. ಬ್ರಿಯಾನ್ ಬೆನ್ನೆಟ್ 9 ರನ್ ಗಳಿಸಿದರು. ನಾಯಕ ಸಿಕಂದರ್ ರಝಾ 28 ಎಸೆತಗಳಲ್ಲಿ 46 ರನ್ ಗಳಿಸುವ ಮೂಲಕ ಜಿಂಬಾಬ್ವೆ ತಂಡ ಗೌರವಯುತ ಮೊತ್ತ ಕಲೆಹಾಕಲು ಕಾರಣವಾದರು.
ಖಲೀಲ್ ಅಹ್ಮದ್ 2 ವಿಕೆಟ್ ಪಡೆದರೆ, ತುಷಾರ್ ದೇಶಪಾಂಡೆ, ವಾಷಿಂಗ್ಟನ್ ಸುಂದರ್, ಅಭಿಷೇಕ್ ಶರ್ಮಾ ಮತ್ತು ಶಿವಂ ದುಬೆ ತಲಾ 1 ವಿಕೆಟ್ ಪಡೆದರು.
ಜೈಸ್ವಾಲ್ ಅರ್ಧಶತಕ
ಈ ಮೊತ್ತವನ್ನು ಬೆನ್ನತ್ತಿದ ಜಿಂಬಾಬ್ವೆ ಸ್ಫೋಟಕ ಆರಂಭ ಪಡೆಯಿತು. ಜಯಸ್ವಾಲ್ ಜಿಂಬಾಬ್ವೆ ಬೌಲರ್ ಗಳನ್ನು ಮನಬಂದಂತೆ ದಂಡಿಸಿದರು. 53 ಎಸೆತಗಳಲ್ಲಿ 13 ಬೌಂಡರಿ 2 ಭರ್ಜರಿ ಸಿಕ್ಸರ್ ಸಹಿತ 93 ರನ್ ಗಳಿಸಿದರು.
ನಾಯಕ ಶುಭಮನ್ ಗಿಲ್ ಆರಂಭದಲ್ಲಿ ಎಚ್ಚರಿಕೆಯಿಂದ ಆಡಿದರೆ, ಬಳಿಕ ಅವರ ಕೂಡ ಬೌಂಡರಿಗಳನ್ನು ಗಳಿಸಿದರು. 39 ಎಸೆತಗಳಲ್ಲಿ 6 ಬೌಂಡರಿ 2 ಸಿಕ್ಸರ್ ಸಹಿತ 58 ರನ್ ಗಳಿಸಿ ಮಿಂಚಿದರು.
ಇಬ್ಬರ ಅಮೋಘ ಆಟದ ನೆರವಿನಿಂದ ಭಾರತ ಯಾವುದೇ ವಿಕೆಟ್ ಕಳೆದುಕೊಳ್ಳದೆ ಗೆಲುವಿನ ಗುರಿ ಮುಟ್ಟಿತು. ಈ ಗೆಲುವಿನ ಮೂಲಕ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿಯನ್ನು ಗೆದ್ದುಕೊಂಡಿದೆ.












Click it and Unblock the Notifications