India vs Australia: ಪಿಂಕ್‌ ಬಾಲ್‌ ಟೆಸ್ಟ್‌ಗೆ ಭಾರತ ಸಜ್ಜು; ಅಭ್ಯಾಸ ಪಂದ್ಯ ಗೆದ್ದ ಟೀಂ ಇಂಡಿಯಾ

ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಭಾರತ ಎರಡನೇ ಟೆಸ್ಟ್‌ಗೆ ಸಜ್ಜಾಗಿದೆ. ಡಿಸೆಂಬರ್ 6ರಂದು ಅಡಿಲೇಡ್‌ನಲ್ಲಿ ಎರಡನೇ ಟೆಸ್ಟ್ ನಡೆಯಲಿದ್ದು, ಭಾರತ ತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದು ಪಿಂಕ್‌ ಬಾಲ್ ಟೆಸ್ಟ್ ಆಗಿರುವ ಕಾರಣ, ಅದಕ್ಕೂ ಮುನ್ನ ಭಾರತ ಅಭ್ಯಾಸ ಪಂದ್ಯವನ್ನು ಆಡಿದ್ದು ಭರ್ಜರಿ ಗೆಲುವು ಸಾಧಿಸಿದೆ.

ಪ್ರೈಮ್ ಮಿನಿಸ್ಟರ್ಸ್ (PM) ಇಲೆವೆನ್‌ ವಿರುದ್ಧದ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದ್ದು ಎರಡನೇ ಟೆಸ್ಟ್‌ಗೆ ಆತ್ಮವಿಶ್ವಾಸದಿಂದಲೇ ಸಜ್ಜಾಗಿದೆ. ಅಭ್ಯಾಸ ಪಂದ್ಯದಲ್ಲಿ ಭಾರತ ಉತ್ತಮ ಪ್ರದರ್ಶನ ನೀಡಿತು. ನಾಯಕ ರೋಹಿತ್ ಶರ್ಮಾ ಏಳು ಬೌಲರ್‌ಗಳಿಗೆ ಅವಕಾಶ ನೀಡಿದರು. ಅದರಲ್ಲಿ ಆರು ಬೌಲರ್ ಗಳು ವಿಕೆಟ್ ಪಡೆದು ಮಿಂಚಿದರು. ಮೊದಲು ಬ್ಯಾಟಿಂಗ್ ಮಾಡಿದ ಪ್ರೈಮ್ ಮಿನಿಸ್ಟರ್ಸ್ ಇಲೆವೆನ್ 240 ರನ್‌ಗಳಿಗೆ ಆಲೌಟ್ ಆಯಿತು.

India win in pink ball practice match against australia PM XI match

ಹರ್ಷಿತ್ ರಾಣಾ 4 ವಿಕೆಟ್ ಪಡೆಯುವ ಮೂಲಕ ಮಿಂಚಿದರು. ಜಸ್ಪ್ರೀತ್ ಬುಮ್ರಾ ಈ ಅಭ್ಯಾಸ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದರು. ಆಕಾಶ್ ದೀಪ್ 2 ವಿಕೆಟ್ ಪಡೆದರು. ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ವಾಷಿಂಗ್ಟನ್ ಸುಂದರ್ ಮತ್ತು ರವೀಂದ್ರ ಜಡೇಜಾ ತಲಾ ಒಂದು ವಿಕೆಟ್ ಪಡೆದರು.

ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ

ಬಳಿಕ ಬ್ಯಾಟಿಂಗ್ ಆರಂಭಿಸಿದ ಭಾರತ ಉತ್ತಮ ಆರಂಭ ಪಡೆಯಿತು. ಕೆಎಲ್ ರಾಹುಲ್ ಮತ್ತು ಯಶಸ್ವಿ ಜೈಸ್ವಾಲ್ ಇನ್ನಿಂಗ್ಸ್ ಆರಂಭಿಸಿದರೆ, ನಾಯಕ ರೋಹಿತ್ ಶರ್ಮಾ ನಾಲ್ಕನೇ ಕ್ರಮಾಂಕದಲ್ಲಿ ಆಡಿದ್ದು ವಿಶೇಷವಾಗಿತ್ತು. ಈ ಮೂಲಕ ಅಡಿಲೇಡ್‌ ಟೆಸ್ಟ್‌ನಲ್ಲಿ ಕೂಡ ಕೆಎಲ್ ರಾಹುಲ್ ಮತ್ತು ಯಶಸ್ವಿ ಜೈಸ್ವಾಲ್ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗಿದೆ.

ಯಶಸ್ವಿ ಜೈಸ್ವಾಲ್ 45 ರನ್ ಗಳಿಸಿದರೆ, ಕೆಎಲ್ ರಾಹುಲ್ 27 ರನ್ ಗಳಿಸಿದರು. ಶುಭಮನ್ ಗಿಲ್ 50 ರನ್ ಗಳಿಸಿದರು. ಮೊದಲ ಟೆಸ್ಟ್‌ ತಪ್ಪಿಸಿಕೊಂಡಿದ್ದ ರೋಹಿತ್ ಶರ್ಮಾ ಎರಡನೇ ಟೆಸ್ಟ್‌ಗೆ ಸಜ್ಜಾಗುತ್ತಿದ್ದು ಅಭ್ಯಾಸ ಪಂದ್ಯದಲ್ಲಿ 3 ರನ್‌ಗಳಿಗೆ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ವಿರಾಟ್ ಕೊಹ್ಲಿ ಅಭ್ಯಾಸ ಪಂದ್ಯದಲ್ಲಿ ಕಣಕ್ಕಿಳಿಯಲಿಲ್ಲ.

ನಿತೀಶ್ ರೆಡ್ಡಿ 42 ರನ್, ವಾಷಿಂಗ್ಟನ್ ಸುಂದರ್ 42 ರನ್, ರವೀಂದ್ರ ಜಡೇಜಾ 27 ರನ್ ಗಳಿಸಿದರು. ದೇವದತ್ ಪಡಿಕ್ಕಲ್ ಅಜೇಯ 7 ರನ್ ಗಳಿಸಿದರು. 46 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 257 ರನ್ ಗಳಿಸುವ ಮೂಲಕ ಭಾರತ ಗೆಲುವು ಸಾಧಿಸಿತು.

ರೋಹಿತ್ ಶರ್ಮಾ ಹೇಳಿದ್ದೇನು?

ಪಂದ್ಯದ ಬಳಿಕ ಮಾತನಾಡಿದ ನಾಯಕ ರೋಹಿತ್ ಶರ್ಮಾ, ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೆ ಸಿದ್ಧತೆ ಉತ್ತಮವಾಗಿದೆ ಎಂದರು. ಮಳೆಯಿಂದಾಗಿ ಮೊದಲ ದಿನದ ಪಂದ್ಯ ನಡೆಯದೇ ಇದ್ದರೂ, ಎರಡನೇ ದಿನದ ಪಂದ್ಯ ನಡೆಯಿತು. ನಾವು ಗೆಲುವ ಸಾಧಿಸಿದ್ದು ಉತ್ತಮವಾಗಿತ್ತು, ತಂಡವಾಗಿ ನಮಗೇನು ಬೇಕು ಅದು ಸಿಕ್ಕಿದೆ. ಸಂಪೂರ್ಣ ಆಟವನ್ನು ಆಡಲು ಸಾಧ್ಯವಾಗದಿರುವುದು ದುರದೃಷ್ಟ ಎನಿಸಿದರೂ, ನಾವು ಹೆಚ್ಚಿನ ಸಮಯ ಮೈದಾನದಲ್ಲಿ ಕಳೆದಿದ್ದೇವೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+