India vs Pakistan: ಪಾಕಿಸ್ತಾನಕ್ಕೆ ಮತ್ತೊಂದು ಶಾಕ್ ಕೊಟ್ಟ ಭಾರತ

ಪ್ರಮುಖ ಬೆಳವಣಿಗೆಯೊಂದರಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಏಷ್ಯಾ ಕಪ್‌ನಿಂದ ಹಿಂದೆ ಸರಿದಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಭಿನ್ನಾಭಿಪ್ರಾಯದಿಂದಾಗಿ, ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಭಾರತವು ಈ ವರ್ಷದ ಕೊನೆಯಲ್ಲಿ ಟಿ20 ಸ್ವರೂಪದ ಏಷ್ಯಾ ಕಪ್ ಅನ್ನು ಆಯೋಜಿಸಲು ನಿರ್ಧರಿಸಲಾಗಿತ್ತು. ಆದರೆ ಈಗ ಪಂದ್ಯಾವಳಿಯಿಂದಲೇ ಹಿಂದೆ ಸರಿದಿದ್ದು ಪಾಕಿಸ್ತಾನಕ್ಕೆ ದೊಡ್ಡ ಆಘಾತ ನೀಡಿದೆ.

ಮುಂದಿನ ತಿಂಗಳು ಶ್ರೀಲಂಕಾದಲ್ಲಿ ನಡೆಯಲಿರುವ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್‌ನಲ್ಲಿ ಕೂಡ ಭಾಗವಹಿಸುವುದಿಲ್ಲ ಎಂದು ಬಿಸಿಸಿಐ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಗೆ ತಿಳಿಸಿದೆ ಮತ್ತು ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿರುವ ಪುರುಷರ ಏಷ್ಯಾ ಕಪ್‌ನಿಂದ ಹಿಂದೆ ಸರಿದಿದೆ. ಪಾಕಿಸ್ತಾನದ ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಎಸಿಸಿ ಅಧ್ಯಕ್ಷತೆ ವಹಿಸಿದ್ದಾರೆ, ಅವರು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ಮುಖ್ಯಸ್ಥರೂ ಆಗಿದ್ದಾರೆ.

india withdraws from asia cup impact on pakistan and other teams

ಏಷ್ಯಾ ಕಪ್‌ನಲ್ಲಿ ಭಾರತ ಆಡಲ್ಲ

ಭಾರತವು ಪಾಕಿಸ್ತಾನದ ವಿರುದ್ಧ ಕ್ರಿಕೆಟ್‌ನಲ್ಲೂ ದೂರವಿರುವ ನಿರ್ಧಾರಕ್ಕೆ ಬದ್ದವಾಗಿದೆ. ಪಾಕಿಸ್ತಾನದ ಸಚಿವರನ್ನು ಮುಖ್ಯಸ್ಥರನ್ನಾಗಿ ಹೊಂದಿರುವ ಎಸಿಸಿ ಆಯೋಜಿಸುವ ಪಂದ್ಯಾವಳಿಯಲ್ಲಿ ಭಾರತ ತಂಡ ಆಡಲು ಸಾಧ್ಯವಿಲ್ಲ. ಅದು ದೇಶದ ಭಾವನೆ. ಮುಂಬರುವ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್‌ನಿಂದ ನಾವು ಹಿಂದೆ ಸರಿಯುವ ಬಗ್ಗೆ ನಾವು ಎಸಿಸಿಗೆ ಮೌಖಿಕವಾಗಿ ತಿಳಿಸಿದ್ದೇವೆ ಮತ್ತು ಅವರ ಕಾರ್ಯಕ್ರಮಗಳಲ್ಲಿ ನಮ್ಮ ಭವಿಷ್ಯದ ಭಾಗವಹಿಸುವಿಕೆಯನ್ನು ಸಹ ತಡೆಹಿಡಿಯಲಾಗಿದೆ. ನಾವು ಭಾರತ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಮಂಡಳಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಭಾರತದ ಜಯ್ ಶಾ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಅಧ್ಯಕ್ಷರಾದ ನಂತರ ಮೊಹ್ಸಿನ್ ನಖ್ವಿ ಎಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಎಸಿಸಿ ವಿಸರ್ಜನೆಯ ಬಗ್ಗೆ ಸುನಿಲ್ ಗವಾಸ್ಕರ್ ಧ್ವನಿ ಎತ್ತಿದ್ದು ಮುಂದಿನ ದಿನಗಳಲ್ಲಿ ಇದು ಜಾರಿಗೂ ಬರಬಹುದು.

ಏಷ್ಯಾಕಪ್‌ನಲ್ಲಿ ಭಾರತ ಆಡದೇ ಇದ್ದರೆ ಪಂದ್ಯಾವಳಿಯೇ ತೋಪಾಗಲಿದೆ. ಪ್ರಸಾರಕರು ಮತ್ತು ಪ್ರಾಯೋಜಕರಲ್ಲಿ ಹೆಚ್ಚಿನ ಸಂಖ್ಯೆಯ ಜನ ಭಾರತದಲ್ಲಿ ನೆಲೆಸಿದ್ದಾರೆ. ಪಂದ್ಯಾವಳಿಯಲ್ಲಿ ಭಾರಿ ಹೂಡಿಕೆ ಮಾಡಿದ್ದಾರೆ. ಭಾರತ vs ಪಾಕಿಸ್ತಾನ ಪಂದ್ಯದ ಮೇಲೆ ಭಾರಿ ನಿರೀಕ್ಷೆ ಇರುವ ಕಾರಣ, ಪ್ರಾಯೋಜಕರಿಗೆ ಇದು ಮಹತ್ವವಾಗಿದೆ. ಪ್ರಸ್ತುತ ನೇರಪ್ರಸಾರದ ಹಕ್ಕುಗಳನ್ನು ಹೊಂದಿರುವ ಸೋನಿ ಪಿಕ್ಚರ್ಸ್ ನೆಟ್‌ವರ್ಕ್ಸ್ ಇಂಡಿಯಾ, 2024 ರಲ್ಲಿ $170 ಮಿಲಿಯನ್ ಮೌಲ್ಯದ ಎಂಟು ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಿತ್ತು. ಐದು ಪೂರ್ಣ ಎಸಿಸಿ ಸದಸ್ಯರಾದ (ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ) ಪ್ರಸಾರ ಆದಾಯದ 15% ಅನ್ನು ಪಡೆಯುತ್ತಾರೆ, ಉಳಿದ ಮೊತ್ತವನ್ನು ಅಸೋಸಿಯೇಟ್ ಮತ್ತು ಅಂಗಸಂಸ್ಥೆ ಸದಸ್ಯರಿಗೆ ವಿತರಣೆ ಮಾಡಲಾಗುತ್ತದೆ.

ಏಷ್ಯಾ ಕಪ್ ಯೋಜಿಸಿದಂತೆ ನಡೆಯದಿದ್ದರೆ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಖಂಡಿತವಾಗಿಯೂ ಆಕ್ರೋಶ ವ್ಯಕ್ತಪಡಿಸುತ್ತದೆ. ಪಾಕಿಸ್ತಾನ ಈ ಸನ್ನಿವೇಶವನ್ನು ಹೇಗೆ ಎದುರಿಸುತ್ತದೆ ಎನ್ನುವುದನ್ನು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+