India World Cup Squad 2023: ವಿಶ್ವಕಪ್ ಪಂದ್ಯಾವಳಿಗೆ ಭಾರತ ತಂಡ ಪ್ರಕಟ: ಯಾರಿಗೆಲ್ಲಾ ಸಿಕ್ಕಿದೆ ಅವಕಾಶ?
ಅಕ್ಟೋಬರ್-ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ನಡೆಯಲಿರುವ ಮಹತ್ವದ ಏಕದಿನ ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಬಿಸಿಸಿಐ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಸಂಜು ಸ್ಯಾಮ್ಸನ್, ಪ್ರಸಿದ್ಧ್ ಕೃಷ್ಣ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದಾರೆ.
ಉಳಿದಂತೆ ಸದ್ಯ ಏಷ್ಯಾಕಪ್‌ನಲ್ಲಿ ಆಡುತ್ತಿರುವ ತಂಡವೇ ಏಕದಿನ ವಿಶ್ವಕಪ್‌ನಲ್ಲಿ ಆಡಲಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ರಾಷ್ಟ್ರೀಯ ಆಯ್ಕೆ ಸಮಿತಿಯು ಕಳೆದ ಶನಿವಾರದಂತೇ 15 ಆಟಗಾರರ ಪಟ್ಟಿಯನ್ನು ಆಯ್ಕೆ ಮಾಡಿತ್ತು. ಇಂದು (ಸೆಪ್ಟೆಂಬರ್ 5) ರಂದು ಅದೇ ತಂಡಕ್ಕೆ ಅಧಿಕೃತ ಮುದ್ರೆ ಒತ್ತಲಾಗಿದೆ.

ಗಾಯದಿಂದ ಚೇತರಿಸಿಕೊಂಡು ಫಿಟ್ ಆಗಿರುವ ಕೆಎಲ್ ರಾಹುಲ್ ಏಕದಿನ ವಿಶ್ವಕಪ್‌ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಪಾಕ್ ವಿರುದ್ಧದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಇಶಾನ್ ಕಿಶನ್ ಬ್ಯಾಕ್ಅಪ್ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದು ಸಂಜು ಸ್ಯಾಮ್ಸನ್ ಅವರನ್ನು ಕೈಬಿಡಲಾಗಿದೆ.
ತಂಡ ಫೈನಲ್ ಮಾಡಲು ಶ್ರೀಲಂಕಾಗೆ ತೆರಳಿದ್ದ ಅಗರ್ಕರ್
ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ಅವರನ್ನು ಭೇಟಿ ಮಾಡಲು ಶ್ರೀಲಂಕಾಕ್ಕೆ ತೆರಳಿದ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಅವರು ತಂಡವನ್ನು ಆಯ್ಕೆ ಮಾಡಿದ್ದರು.
ಏಷ್ಯಾ ಕಪ್ 2023 ಗಾಗಿ ಪ್ರಸ್ತುತ ಶ್ರೀಲಂಕಾದಲ್ಲಿರುವ ಸಂಜು ಸ್ಯಾಮ್ಸನ್, ತಿಲಕ್ ವರ್ಮಾ ಮತ್ತು ಪ್ರಸಿದ್ಧ್ ಕೃಷ್ಣ ಅವರು ಭಾರತ ತಂಡ ವಿಶ್ವಕಪ್ ಪಟ್ಟಿಯಿಂದ ಹೊರಗುಳಿದಿದ್ದಾರೆ. ಆಯ್ಕೆ ಸಮಿತಿಯು ತನ್ನ ಏಷ್ಯಾ ಕಪ್ 18 ಸದಸ್ಯರ ಪಟ್ಟಿಯಿಂದ ವಿಶ್ವಕಪ್ ತಂಡವನ್ನು ಆಯ್ಕೆ ಮಾಡುತ್ತದೆ ಎಂದು ಅಗರ್ಕರ್ ಈಗಾಗಲೇ ಹೇಳಿದ್ದರಿಂದ, ಯಾವುದೇ ಅಚ್ಚರಿಯ ಆಯ್ಕೆಗಳನ್ನು ಈ ಬಾರಿ ನೋಡಲಾಗಿಲ್ಲ.
ಹಿರಿಯ ಸ್ಪಿನ್ನರ್ ಯುಜುವೇಂದ್ರ ಚಹಾಲ್, ರವಿಚಂದ್ರನ್ ಅಶ್ವಿನ್ ಅವರನ್ನು ಆಯ್ಕೆ ಮಾಡದಿರುವುದರ ಬಗ್ಗೆ ಹಲವು ಮಾಜಿ ಕ್ರಿಕೆಟಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಶ್ವಕಪ್‌ನಂತಹ ದೊಡ್ಡ ಪಂದ್ಯಾವಳಿಗಳಲ್ಲಿ ಒತ್ತಡಕ್ಕೆ ಒಳಗಾಗದೆ ಆಡುವ ಅನುಭವಿಗಳು ಕೂಡ ಬೇಕು ಎಂದು ಹೇಳಿದ್ದಾರೆ. ರವಿಚಂದ್ರನ್ ಅಶ್ವಿನ್ ಭಾರತದಲ್ಲಿ ಅತ್ಯುತ್ತಮ ಬೌಲಿಂಗ್ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಬ್ಯಾಟಿಂಗ್‌ನಲ್ಲೂ ಕೂಡ ಮಿಂಚಬಲ್ಲರು, ಅವರನ್ನು ತಂಡದಿಂದ ಹೊರಗಿಟ್ಟಿದ್ದಕ್ಕೆ ಹಲವರು ಬೇಸರ ವ್ಯಕ್ತಪಡಿಸಿದ್ದಾರೆ.
ಅಕ್ಟೋಬರ್ 5ರಿಂದ ಪಂದ್ಯಾವಳಿ
ಅಕ್ಟೋಬರ್ 5ರಿಂದ ಏಕದಿನ ವಿಶ್ವಕಪ್‌ಗೆ ಚಾಲನೆ ಸಿಗಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ.
ಭಾರತ ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಅಕ್ಟೋಬರ್ 8ರಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಅಕ್ಟೋಬರ್ 14ರಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ.
ಏಕದಿನ ವಿಶ್ವಕಪ್‌ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್) , ಇಶಾನ್ ಕಿಶನ್ (ವಿಕೆಟ್ ಕೀಪರ್) ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್.












Click it and Unblock the Notifications