IPL 2025: ಐಪಿಎಲ್ ಆರಂಭಕ್ಕೆ ಮುಹೂರ್ತ ಫಿಕ್ಸ್

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಆರಂಭಕ್ಕೆ ಮುಹೂರ್ತ ನಿಗದಿಯಾಗಿದೆ. ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎನಿಸಿಕೊಂಡಿರುವ ಐಪಿಎಲ್ 2025ರ ಸೀಸನ್‌ ಮಾರ್ಚ್ 21ರಿಂದ ಆರಂಭವಾಗಲಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾಹಿತಿ ನೀಡಿದ್ದಾರೆ. ಮುಂಬೈನಲ್ಲಿ ನಡೆದ ಬಿಸಿಸಿಐ ವಿಶೇಷ ಮಹಾಸಭೆಯ ಬಳಿಕ ಅವರು ಐಪಿಎಲ್‌ ಆರಂಭದ ದಿನಾಂಕದ ಬಗ್ಗೆ ಮಾಹಿತಿ ನೀಡಿದ್ದಾರೆ.

ಬಿಸಿಸಿಐ ವಿಶೇಷ ಮಹಾಸಭೆಯಲ್ಲಿ ದೇವಜಿತ್ ಸೈಕಿಯಾರನ್ನು ಬಿಸಿಸಿಐನ ಹೊಸ ಕಾರ್ಯದರ್ಶಿ ಮತ್ತು ಮತ್ತು ಪ್ರಭ್ತೇಜ್ ಸಿಂಗ್ ಭಾಟಿಯಾರನ್ನು ಖಜಾಂಚಿಯನ್ನಾಗಿ ಆಯ್ಕೆ ಮಾಡಲಾಗಿದೆ. ಜಯ್ ಶಾ ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಖಾಲಿ ಇರುವ ಸ್ಥಾನಕ್ಕೆ ಒಬ್ಬರೇ ವ್ಯಕ್ತಿ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

indian premier league ipl 2025 season begins march 23

ಚಾಂಪಿಯನ್ಸ್ ಟ್ರೋಫಿ ಮುಗಿದ ಕೆಲವೇ ದಿನಗಳ ಬಳಿಕ ಐಪಿಎಲ್ ಆರಂಭವಾಗಲಿದೆ. ಆದರೆ ಮಹಿಳಾ ಪ್ರೀಮಿಯರ್ ಲೀಗ್ ಯಾವಾಗ ನಡೆಸುತ್ತಾರೆ ಎನ್ನುವ ಬಗ್ಗೆ ಖಚಿತತೆ ಸಿಕ್ಕಿಲ್ಲ, ಮೊದಲು ಮಹಿಳಾ ಪ್ರೀಮಿಯರ್ ಲೀಗ್ ನಡೆಯುವುದು ವಾಡಿಕೆಯಾಗಿದ್ದು ಐಪಿಎಲ್‌ಗೆ ಮೊದಲೇ ಮುಗಿಯಬೇಕಾಗುತ್ತದೆ.

ಬಲಿಷ್ಠ ತಂಡ ಕಟ್ಟಿರುವ ಫ್ರಾಂಚೈಸಿಗಳು

2025ರ ಐಪಿಎಲ್‌ಗೆ ಮುನ್ನ ಮೆಗಾ ಹರಾಜು ನಡೆಯಿತು. ಜೆಡ್ಡಾದಲ್ಲಿ ಎರಡು ದಿನ ಹರಾಜು ಪ್ರಕ್ರಿಯೆ ನಡೆದಿದ್ದು ಎಲ್ಲಾ ತಂಡಗಳು ಬಲಿಷ್ಠ ತಂಡವನ್ನು ಆಯ್ಕೆ ಮಾಡಿವೆ. ಲಕ್ನೋ ಸೂಪರ್ ಜೈಂಟ್ಸ್ ರಿಷಬ್‌ ಪಂತ್‌ಗೆ ಬರೋಬ್ಬರಿ 27 ಕೋಟಿ ರೂಪಾಯಿ ನೀಡುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ. ಐಪಿಎಲ್ ಇತಿಹಾಸದಲ್ಲಿ ರಿಷಬ್ ಪಂತ್ ದುಬಾರಿ ಆಟಗಾರ ಎನಿಸಿಕೊಂಡಿದ್ದಾರೆ.

ಕೋಲ್ಕತ್ತಾದಲ್ಲಿ ಉದ್ಘಾಟನಾ ಪಂದ್ಯ

ಈ ಬಾರಿ ಐಪಿಎಲ್‌ನ ಉದ್ಘಾಟನಾ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಐಪಿಎಲ್‌ ವಾಡಿಕೆಯಂತೆ ಹೊಸ ಸೀಸನ್‌ನ ಉದ್ಘಾಟನಾ ಪಂದ್ಯವನ್ನು ಹಾಲಿ ಚಾಂಪಿಯನ್ ತವರಿನ ಅಂಗಳಲ್ಲಿ ಆಯೋಜಿಸಲಾಗುತ್ತದೆ. 2024ರ ಐಪಿಎಲ್‌ನಲ್ಲಿ ಪ್ರಶಸ್ತಿ ಗೆದ್ದಿರುವ ಕೆಕೆಆರ್ ತವರಿನ ಅಂಗಳದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ. ಫೈನಲ್ ಪಂದ್ಯ ಕೂಡ ಈಡನ್ ಗಾರ್ಡನ್ಸ್‌ನಲ್ಲೇ ನಡೆಯಲಿದೆ.

ನಿಖರವಾದ ವೇಳಾಪಟ್ಟಿ ಇನ್ನೂ ಘೋಷಣೆಯಾಗಬೇಕಿದೆ. ಫೆಬ್ರವರಿಯಲ್ಲಿ ವೇಳಾಪಟ್ಟಿ ಘೋಷಣೆಯಾಗುವ ನಿರೀಕ್ಷೆ ಇದೆ. ಮಾರ್ಚ್ 21 ರಂದು ಮೊದಲ ಪಂದ್ಯ ನಡೆಯಲಿದ್ದು, ಮೇ 25 ರಂದು ಫೈನಲ್ ಪಂದ್ಯ ನಡೆಯಲಿದೆ. 65 ದಿನಗಳ ಕಾಲ ಕ್ರಿಕೆಟ್ ಪ್ರೇಮಿಗಳಿಗೆ ಭರ್ಜರಿ ಮನರಂಜನೆ ಸಿಗಲಿದೆ.

ಪ್ಲೇ ಆಫ್ ಪಂದ್ಯಗಳಿಗೆ ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣ ಮತ್ತು ಕೋಲ್ಕತ್ತಾದ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣ ಆತಿಥ್ಯ ವಹಿಸಲಿವೆ. ಹೈದರಾಬಾದ್‌ನಲ್ಲಿ ಕ್ವಾಲಿಫೈಯರ್ 1 ಮತ್ತು ಎಲಿಮಿನೇಟರ್ ಪಂದ್ಯ ನಡೆಯಲಿದೆ. ಕ್ವಾಲಿಫೈಯರ್ 2 ಮತ್ತು ಫೈನಲ್ ಪಂದ್ಯ ಈಡನ್ ಗಾರ್ಡನ್ಸ್‌ ಆತಿಥ್ಯ ವಹಿಸಲಿದೆ.

ಮೇ 20ರಂದು ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು, ಮೇ 21ರಂದು ಎಲಿಮಿನೇಟರ್ ಪಂದ್ಯ ನಡೆಯಲಿದೆ. ಮೇ 23ರಂದು ಕ್ವಾಲಿಫೈಯರ್ 2 ಪಂದ್ಯ ನಡೆಯಲಿದೆ. ಮೇ 25 ರಂದು ಫೈನಲ್ ಪಂದ್ಯ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+