T20 World Cup: ಟಿ20 ವಿಶ್ವಕಪ್ ಭಾರತ ತಂಡ; ಯಾವ ಐಪಿಎಲ್ ತಂಡದಿಂದ ಹೆಚ್ಚು ಆಟಗಾರರು ಆಯ್ಕೆ?
ಜೂನ್ 2ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಘೋಷಣೆ ಮಾಡಲಾಗಿದೆ. ಸದ್ಯ ನಡೆಯುತ್ತಿರುವ ಐಪಿಎಲ್ ಪಂದ್ಯಾವಳಿಯಲ್ಲಿ ಆಟಗಾರರ ಪ್ರದರ್ಶನವನ್ನು ಆಧಾರವಾಗಿಟ್ಟುಕೊಂಡು ಆಟಗಾರರನ್ನು ಆಯ್ಕೆ ಮಾಡಲಾಗಿದೆ.
ಜಯ್ ಶಾ, ಬಿಸಿಸಿಐ ಆಯ್ಕೆಗಾರ ಅಜಿತ್ ಅಗರ್ಕರ್, ಮುಖ್ಯ ಕೋಚ್ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ತಂಡವನ್ನು ಆಯ್ಕೆ ಮಾಡಲಾಗಿದೆ. ನಿರೀಕ್ಷೆ ಮಾಡಿದಂತೆ ತಂಡವನ್ನು ಆಯ್ಕೆ ಮಾಡಿದ್ದರೂ ಕೆಎಲ್ ರಾಹುಲ್‌ರನ್ನು ಕೈಬಿಟ್ಟಿರುವುದು ಸ್ವಲ್ಪ ಅಚ್ಚರಿ ಮೂಡಿಸಿದೆ.

ಈಗ ಆಯ್ಕೆಯಾಗಿರುವ ಭಾರತ ತಂಡದ ಆಟಗಾರರು ವಿವಿಧ ಐಪಿಎಲ್ ತಂಡಗಳನ್ನು ಪ್ರತಿನಿಧಿಸುತ್ತಿದ್ದಾರೆ. ಆದರೆ ಸನ್‌ರೈಸರ್ಸ್ ಹೈದರಾಬಾದ್ ಮತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಮಾತ್ರ ಯಾರೊಬ್ಬರು ಆಯ್ಕೆಯಾಗಿಲ್ಲ.
ಯಾವ ತಂಡದಲ್ಲಿ ಹೆಚ್ಚು ಆಟಗಾರರು?
ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ ಮತ್ತು ರಾಜಸ್ಥಾನ ರಾಯಲ್ಸ್ ತಂಡದಿಂದ ಹೆಚ್ಚಿನ ಆಟಗಾರರು ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈ ಮೂರು ತಂಡಗಳಿಂದ ತಲಾ ನಾಲ್ವರು ಆಟಗಾರರು ಟಿ20 ವಿಶ್ವಕಪ್ ಭಾರತ ತಂಡದಲ್ಲಿ ಅವಕಾಶ ಪಡೆದಿದ್ದಾರೆ.
ರಾಜಸ್ಥಾನ ರಾಯಲ್ಸ್ ತಂಡದಲ್ಲಿರುವ ಸಂಜು ಸ್ಯಾಮ್ಸನ್, ಯುಜುವೇಂದ್ರ ಚಹಾಲ್, ಆವೇಶ್ ಖಾನ್, ಯಶಸ್ವಿ ಜೈಸ್ವಾಲ್ ಆಯ್ಕೆಯಾಗಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ರಿಷಬ್ ಪಂತ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್, ಅಕ್ಷರ್ ಪಟೇಲ್ ಭಾರತ ತಂಡದಲ್ಲಿ ಅವಕಾಶ ಪಡೆದಿದ್ದಾರೆ.
ಆರ್ ಸಿಬಿ ಮತ್ತು ಸಿಎಸ್‌ಕೆ ತಂಡದ ತಲಾ ಇಬ್ಬರು ಆಟಗಾರರು ಭಾರತ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಆರ್ ಸಿಬಿ ತಂಡದವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್ ಮತ್ತು ಸಿಎಸ್‌ಕೆ ತಂಡದ ಶಿವಂ ದುಬೆ ಮತ್ತು ರವೀಂದ್ರ ಜಡೇಜಾ ಅವಕಾಶ ಪಡೆದಿದ್ದಾರೆ.
ಪಂಜಾಬ್ ಕಿಂಗ್ಸ್‌ನ ಅರ್ಷದೀಪ್ ಸಿಂಗ್, ಕೆಕೆಆರ್ ತಂಡದ ರಿಂಕು ಸಿಂಗ್ ಮತ್ತು ಗುಜರಾತ್ ಟೈಟಾನ್ಸ್ ತಂಡದ ಶುಭಮನ್ ಗಿಲ್ ಮಾತ್ರ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಟಿ20 ವಿಶ್ವಕಪ್‌ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ರಿಷಬ್ ಪಂತ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಯುಜುವೇಂದ್ರ ಚಹಾಲ್,
ಮೀಸಲು ಆಟಗಾರರು: ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಆವೇಶ್ ಖಾನ್.












Click it and Unblock the Notifications