• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಕಾಮನ್‌ವೆಲ್ತ್ ಗೇಮ್ಸ್‌ ಕ್ರೀಡಾಕೂಟಕ್ಕೆ ಕ್ರಿಕೆಟ್ ತಂಡ ಪ್ರಕಟ

|
Google Oneindia Kannada News

ಮುಂಬೈ, ಜುಲೈ 11: ಕಾಮನ್‌ವೆಲ್ತ್ ಗೇಮ್ಸ್‌ ಕ್ರೀಡಾಕೂಟದಲ್ಲಿ ಈ ಬಾರಿ ಕ್ರಿಕೆಟ್ ಆಟವನ್ನು ಸೇರಿಸಲಾಗಿದೆ. ಈಗಾಗಲೇ ವಿವಿಧ ಕ್ರೀಡೆಗಳಲ್ಲಿ ಸ್ಪರ್ಧಿಸುವ ಭಾರತೀಯ ಕ್ರೀಡಾಪಟುಗಳ ಪಟ್ಟಿ ಪ್ರಕಟಿಸಲಾಗಿದೆ. ಈಗ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಜುಲೈ 11ರಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ. ಹರ್ಮನ್ ಪ್ರೀತ್ ಕೌರ್ ತಂಡದ ನಾಯಕಿಯಾಗಿ ಮುಂದುವರೆಯಲಿದ್ದಾರೆ.

108 ಪುರುಷ ಮತ್ತು 107 ಮಹಿಳಾ ಅಥ್ಲಿಟ್‌ಗಳನ್ನು ಒಳಗೊಂಡ 215 ಸದಸ್ಯರ ಭಾರತೀಯ ತಂಡವು ಬರ್ಮಿಂಗ್‌ಹ್ಯಾಮ್‌ನಲ್ಲಿ ಜುಲೈ 28 ರಿಂದ ಆಗಸ್ಟ್ 8 ರವರೆಗೆ ನಡೆಯಲಿರುವ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ತೆರಳಲಿದೆ.

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ 2022ರ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ತಂಡವನ್ನು ಆಯ್ಕೆ ಮಾಡಲು ಅಖಿಲ ಭಾರತ ಮಹಿಳಾ ಆಯ್ಕೆ ಸಮಿತಿ ಸೋಮವಾರ ಸಭೆ ನಡೆಸಿ ತಂಡವನ್ನು ಹೆಸರಿಸಿದೆ. ಮಹಿಳಾ ಟಿ20 ಅಂತಾರಾಷ್ಟ್ರೀಯ ಪ್ರತಿಷ್ಠಿತ ಬಹು-ಕ್ರೀಡಾ ಸ್ಪರ್ಧೆಯಲ್ಲಿ ಕಾಣಿಸಿಕೊಂಡಿರುವುದು ಇದೇ ಮೊದಲು ಎಂದು ಬಿಸಿಸಿಐ ಹೇಳಿಕೆ ತಿಳಿಸಿದೆ.

"ಆಸ್ಟ್ರೇಲಿಯಾ, ಬಾರ್ಬಡೋಸ್ ಮತ್ತು ಪಾಕಿಸ್ತಾನದೊಂದಿಗೆ ಭಾರತವ ತಂಡವು ಎ ಗುಂಪಿನಲ್ಲಿದೆ. ಶ್ರೀಲಂಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾವು ಬಿ ಗುಂಪಿನಲ್ಲಿ ಸ್ಥಾನ ಪಡೆದಿವೆ. ಆಯಾ ಪೂಲ್‌ಗಳಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಮುನ್ನಡೆಯುತ್ತವೆ. ಲೀಗ್ ಹಂತದಲ್ಲಿ ಮೂರು ಪಂದ್ಯಗಳನ್ನು ಆಡಲು ಭಾರತ ಸಜ್ಜಾಗಿದ್ದು, ಜುಲೈ29, 2022ರಂದು ಮೊದಲ ಪಂದ್ಯವಾಡಲಿದೆ"

Indian Womens Cricket Squad For Commonwealth Games Announced

ಟೀಂ ಇಂಡಿಯಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪ ನಾಯಕಿ), ಶಫಾಲಿ ವರ್ಮಾ, ಎಸ್. ಮೇಘನಾ, ತನಿಯಾ ಸಪ್ನಾ ಭಾಟಿಯಾ (ವಿಕೆಟ್ ಕೀಪರ್), ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ರಾಜೇಶ್ವರಿ ಗಾಯಕ್ವಾಡ್, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ರೇಣುಕಾ ಠಾಕೂರ್ , ಜೆಮಿಮಾ ರೋಡ್ರಿಗಸ್, ರಾಧಾ ಯಾದವ್, ಹರ್ಲೀನ್ ಡಿಯೋಲ್, ಸ್ನೇಹ ರಾಣಾ.

ಸ್ಟ್ಯಾಂಡ್‌ಬೈ: ಸಿಮ್ರಾನ್ ದಿಲ್ ಬಹದ್ದೂರ್, ರಿಚಾ ಘೋಷ್, ಪೂನಂ ಯಾದವ್.

ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್‌ ಕ್ರೀಡಾಕೂಟ: ಪದಕದ ಬೇಟೆಗೆ ಸಜ್ಜಾದ ಭಾರತೀಯ ಅಥ್ಲಿಟ್‌ಗಳುಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್‌ ಕ್ರೀಡಾಕೂಟ: ಪದಕದ ಬೇಟೆಗೆ ಸಜ್ಜಾದ ಭಾರತೀಯ ಅಥ್ಲಿಟ್‌ಗಳು


ಕ್ರೀಡಾಪಟುಗಳ ತಂಡ:72 ತಂಡದ ಅಧಿಕಾರಿಗಳು, 26 ಹೆಚ್ಚುವರಿ ಅಧಿಕಾರಿಗಳು, ಮೂವರು ಜನರಲ್ ಮ್ಯಾನೇಜರ್‌ಗಳು ಸೇರಿದಂತೆ ಒಂಬತ್ತು ಸಿಬ್ಬಂದಿ ಸೇರಿದಂತೆ ಒಟ್ಟು 322 ಜನ ಪ್ರಯಾಣಿಸಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಧ್ವಜಾರೋಹಣ ಮಾಡುವ ಸಾಧ್ಯತೆಯಿದೆ.

ಭಾರತದ ಕ್ರೀಡಾಪಟುಗಳು 16 ವಿಭಾಗಗಳಲ್ಲಿ ಸ್ಪರ್ಧಿಸಲಿದ್ದಾರೆ. ಚೊಚ್ಚಲ, ಅಕ್ವಾಟಿಕ್ಸ್, ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಬಾಕ್ಸಿಂಗ್, ಸೈಕ್ಲಿಂಗ್, ಜಿಮ್ನಾಸ್ಟಿಕ್ಸ್, ಟ್ರಯಥ್ಲಾನ್, ಕುಸ್ತಿ, ವೇಟ್‌ಲಿಫ್ಟಿಂಗ್, ಲಾನ್ ಬೌಲ್ಸ್, ಸ್ಕ್ವಾಷ್, ಜೂಡೋ ಮತ್ತು ಪ್ಯಾರಾ ಕ್ರೀಡೆಗಳಲ್ಲಿ ಭಾರತ ಭಾಗವಹಿಸಲಿದೆ. ಭಾರತವು ಮಹಿಳಾ ಕ್ರಿಕೆಟ್‌ನಲ್ಲಿ ಕೂಡ ಭಾಗವಹಿಸಲಿದೆ.

Recommended Video

   Basavaraj Bommai ಇಂದಿನಿಂದ ಎರೆಡು ದಿನ ಕರಾವಳಿ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ | *Karnataka | OneIndia

   2022 ಕಾಮನ್‌ವೆಲ್ತ್ ಕ್ರೀಡಾಕೂಟದ 22 ನೇ ಆವೃತ್ತಿಯಾಗಿದೆ. 2018 ರಲ್ಲಿ ಗೋಲ್ಡ್ ಕೋಸ್ಟ್ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ, ಭಾರತವು 26 ಚಿನ್ನ, 20 ಬೆಳ್ಳಿ ಮತ್ತು ಕಂಚು ಸೇರಿದಂತೆ 66 ಪದಕಗಳೊಂದಿಗೆ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಂತರದ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಗಳಿಸಿತ್ತು.

   English summary
   India's squad for women's cricket competition was announced by the BCCI on Monday. Harmanpreet Kaur to lead.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X