ರೋಹಿತ್-ವಿರಾಟ್ ಸ್ಥಾನ ತುಂಬುವುದು ಯಾರು? ಶ್ರೀಲಂಕಾ ವಿರುದ್ಧ ಹೇಗಿರಲಿದೆ ಭಾರತದ ಪ್ಲೇಯಿಂಗ್ ಇಲೆವೆನ್‌

ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿದ ಬಳಿಕ ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್‌ ಕೊಹ್ಲಿ, ರವೀಂದ್ರ ಜಡೇಜಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಈ ಸ್ಟಾರ್ ಆಟಗಾರರು ನಿವೃತ್ತಿಯ ಬೆನ್ನಲ್ಲೆ ಟಿ20 ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ಮುಂದಿನ ಆರಂಭಿಕರು ಯಾರು ಎಂಬ ಪ್ರಶ್ನೆ ಉದ್ಭವಿಸಿದೆ.

ಟೀಮ್ ಇಂಡಿಯಾಕ್ಕೆ ಟಿ20 ಕ್ರಿಕೆಟ್‌ನಲ್ಲಿ ಆರಂಭರಾಗಿ ಕಾಣಿಸಿಕೊಳ್ಳುವವರು ಯಾರು ಎಂಬ ಪ್ರಶ್ನೆಗೆ ಶನಿವಾರ ಉತ್ತರ ಲಭಿಸಲಿದೆ. ಸದ್ಯ ಭಾರತ ತಂಡ ಶ್ರೀಲಂಕಾ ಪ್ರವಾಸದಲ್ಲಿದ್ದು, ಪ್ರವಾಸದಲ್ಲಿ ಟಿ20 ಪಂದ್ಯಗಳನ್ನು ಆಡಲಿದೆ. ಈ ವೇಳೆ ಟೀಮ್ ಇಂಡಿಯಾಕ್ಕೆ ನೂತನ ಓಪನರ್ಸ್‌ ಸಿಗುವುದು ಕನ್ಫರ್ಮ್‌.

India s New Era Young Stars to Shine as Rohit and Virat Retire from T20I

ಮೊದಲ ಪರೀಕ್ಷೆ

ಶನಿವಾರದಿಂದ ಭಾರತ ಮತ್ತು ಶ್ರೀಲಂಕಾ ನಡುವಿನ 3 ಪಂದ್ಯಗಳ T20 ಕ್ರಿಕೆಟ್ ಸರಣಿ ನಡೆಯಲಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾದ 4 ಯುವ ಆಟಗಾರರು ಶ್ರೀಲಂಕಾ ವಿರುದ್ಧ ಪದಾರ್ಪಣೆ ಮಾಡಬಹುದು. ನಾಯಕ ಸೂರ್ಯಕುಮಾರ್ ಯಾದವ್ ಗೆಲುವಿನೊಂದಿಗೆ ನಾಯಕತ್ವದ ಜವಾಬ್ದಾರಿಯನ್ನು ನಿಭಾಯಿಸುವ ಕನಸು ಹೊಂದಿದ್ದಾರೆ.

ಈ ಪಂದ್ಯಕ್ಕೆ ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಸಾಕ್ಷಿ ಆಗಲಿದೆ. ಸಂಜೆ 7 ಗಂಟೆಗೆ ನಡೆಯಲಿರುವ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ವೇಳೆ ಟೀಮ್ ಇಂಡಿಯಾ ಕೋಚ್‌ ಗೌತಮ್‌ ಗಂಭೀರ್‌ ಅವರಿಗೂ ಈ ಪ್ರವಾಸ ಮೊದಲ ಪರೀಕ್ಷೆ ಆಗಿರಲಿದೆ. ಅಲ್ಲದೆ ನೂತನ ನಾಯಕ ಸೂರ್ಯಕುಮಾರ್‌ ಯಾದವ್‌ ಅವರಿಗೂ ತಮ್ಮಲ್ಲಿನ ನಾಯಕತ್ವದ ಗುಣಗಳನ್ನು ಪ್ರದರ್ಶಿಸುವ ವೇದಿಕೆ ಆಗಿರಲಿದೆ.

India s New Era Young Stars to Shine as Rohit and Virat Retire from T20I

ಆರಂಭಿಕರಾಗಿ ಕಾಣಿಸಿಕೊಳ್ಳುವುದು ಯಾರು?

ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಪರ ಇನ್ನಿಂಗ್ಸ್ ಆರಂಭಿಸಿದ್ದ ಅನುಭವಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರು ಈಗಾಗಲೇ ಈ ಫಾರ್ಮೆಟ್‌ಗೆ ಗುಡ್‌ ಬೈ ಹೇಳಿದ್ದಾರೆ. ಹೀಗಾಗಿ ಭಾರತ ಯಾವ ಕಾಂಬಿನೇಷನ್ನೊಂದಿಗೆ ಕಣಕ್ಕೆ ಇಳಿಯುತ್ತದೆ ಎಂಬುದು ಕುತೂಹಲ ಮೂಡಿಸಿದೆ. ಅಲ್ಲದೆ ಪ್ಲೇಯಿಂಗ್ ಇಲೆವೆನ್‌ ಹೇಗಿರಲಿದೆ ಎಂಬ ಪ್ರಶ್ನೆಯೂ ಅಭಿಮಾನಿಗಳಲ್ಲಿ ಮೂಡಿದೆ.

ಟೀಮ್ ಇಂಡಿಯಾ ಪರ ಈ ಬಾರಿ ಇನ್ನಿಂಗ್ಸ್‌ ಆರಂಭಿಸುವ ಅವಕಾಶವನ್ನು ಉಪನಾಯಕ ಶುಭಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಅವರಿಗೆ ಲಭಿಸುವ ಸಾಧ್ಯತೆ ಇದೆ. ವಿಶ್ವಕಪ್ ನಂತರ, ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಇಬ್ಬರೂ ಓಪನ್‌ ಸ್ಥಾನಕ್ಕೆ ನ್ಯಾಯ ಒದಗಿಸಿದ್ದರು.. ಆದಾಗ್ಯೂ, ಯಶಸ್ವಿ ಜೈಸ್ವಾಲ್ ಅನುಪಸ್ಥಿತಿಯಲ್ಲಿ, ಅಭಿಷೇಕ್ ಶರ್ಮಾ ಜಿಂಬಾಬ್ವೆ ಪ್ರವಾಸದಲ್ಲಿ ಶುಭಮನ್ ಗಿಲ್ ಅವರೊಂದಿಗೆ ಆರಂಭಿಕರಾಗಿ ಕಾಣಿಸಿಕೊಂಡಿದ್ದರು.

ಹೇಗಿರಲಿದೆ ಪ್ಲೇಯಿಂಗ್ ಇಲೆವೆನ್‌?

ರಿಷಬ್ ಪಂತ್ 3ನೇ ಕ್ರಮಾಂಕದಲ್ಲಿ ಹಾಗೂ ನಾಯಕ ಸೂರ್ಯಕುಮಾರ್ ಯಾದವ್ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದನ್ನು ಕಾಣಬಹುದು.
ರಿಂಕು ಸಿಂಗ್, ಶಿವಂ ದುಬೆ ಮತ್ತು ಹಾರ್ದಿಕ್ ಪಾಂಡ್ಯ ಮೊದಲ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡುವುದನ್ನು ಕಾಣಬಹುದು. ಇನ್ನು ಬೌಲಿಂಗ್‌ನಲ್ಲಿ ಮೊಹಮ್ಮದ್ ಸಿರಾಜ್ ಅವರ ಗಾಯಕ್ಕೆ ತುತ್ತಾಗಿದ್ದು, ಇನ್ನು ಯಾವುದೇ ಅಪ್‌ಡೇಟ್ ಲಭ್ಯವಾಗಿಲ್ಲ. ಅವರ ಸ್ಥಾನದಲ್ಲಿ ಖಲೀಲ್ ಅಹ್ಮದ್ ಪ್ಲೇಯಿಂಗ್-11 ರಲ್ಲಿ ಸ್ಥಾನ ಪಡೆಯಬಹುದು. ಇದಲ್ಲದೇ ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್ ಮತ್ತು ಅಕ್ಷರ್ ಪಟೇಲ್ ಬೌಲಿಂಗ್‌ನಲ್ಲಿ ತಮ್ಮ ಶಕ್ತಿ ಪ್ರದರ್ಶಿಸುವುದನ್ನು ಕಾಣಬಹುದು.

ಭಾರತದ ಸಂಭಾವ್ಯ ತಂಡ:

ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್), ರಿಂಕು ಸಿಂಗ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್ ಮತ್ತು ಮೊಹಮ್ಮದ್ ಸಿರಾಜ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+