Ind vs Eng: ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಆಡಲಿರುವ ಕೊಹ್ಲಿ, ರೋಹಿತ್‌

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಸೋತಿರುವ ಭಾರತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪುವ ಅವಕಾಶ ಕಳೆದುಕೊಂಡಿದೆ. ಈಗ ಮುಂಬರುವ ಚಾಂಪಿಯನ್ಸ್ ಟ್ರೋಫಿ ಸರಣಿ ಮೇಲೆ ಕಣ್ಣಿಟ್ಟಿದ್ದು ಅದಕ್ಕಾಗಿ ಸಿದ್ಧತೆ ಆರಂಭಿಸಲಿದೆ. ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗೆ ಮುನ್ನ ಭಾರತ ಇಂಗ್ಲೆಂಡ್ ವಿರುದ್ಧ 5 ಟಿ20 ಪಂದ್ಯಗಳು ಮತ್ತು 3 ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದೆ.

ಇಂಗ್ಲೆಂಡ್ ಈಗಾಗಲೇ ಭಾರತದ ವಿರುದ್ಧದ ಸರಣಿಗೆ ಮತ್ತು ಚಾಂಪಿಯನ್ಸ್ ಟ್ರೋಫಿಗಾಗಿ ತಂಡವನ್ನು ಘೋಷಿಸಿದೆ. ಭಾರತ ಇನ್ನೂ ತಂಡವನ್ನು ಘೋಷಿಸಬೇಕಾಗಿದ್ದು ಯಾರಿಗೆ ಅವಕಾಶ ಸಿಗಲಿದೆ ಎನ್ನುವ ಕುತೂಹಲವಿದೆ. ಜಸ್ಪ್ರೀತ್ ಬುಮ್ರಾಗೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ವಿಶ್ರಾಂತಿ ನೀಡುವುದು ಖಚಿತವಾಗಿದೆ. ಬುಮ್ರಾ ಬೆನ್ನು ನೋವಿನಿಂದ ಬಳಲುತ್ತಿದ್ದು ಫಿಟ್ ಆದರೆ ಮಾತ್ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲು ಅವಕಾಶ ಸಿಗಲಿದೆ.

Indias squad for england odis kohli sharma future confirmed

ರೋಹಿತ್, ಕೊಹ್ಲಿ ಆಡಲೇಬೇಕು

ಇತ್ತಿಚಿನ ದಿನಗಳಲ್ಲಿ ಫಾರ್ಮ್‌ ಕಳೆದುಕೊಂಡಿರುವ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೂ ವಿಶ್ರಾಂತಿ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಇಬ್ಬರೂ ಇಂಗ್ಲೆಂಡ್ ವಿರುದ್ದದ ಸರಣಿಯಲ್ಲಿ ಆಡುವುದು ಬಹುತೇಕ ಖಚಿತವಾಗಿದೆ. ಭಾರತ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗೆ ಸಿದ್ಧವಾಗಲು ಈ ಸರಣಿ ಮುಖ್ಯವಾಗಿದ್ದು, ರೋಹಿತ್ ಮತ್ತು ಕೊಹ್ಲಿಗೆ ಫಾರ್ಮ್‌ಗೆ ಮರಳಲು ಉತ್ತಮ ಅವಕಾಶವಾಗಿದೆ.

ಸ್ಪೋರ್ಟ್ಸ್ ತಕ್ ವರದಿ ಮಾಡಿರುವ ವರದಿ ಪ್ರಕಾರ, ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಬ್ಬರನ್ನೂ ಆಯ್ಕೆ ಮಾಲಡಾಗುತ್ತದೆ. ಬೆನ್ನು ನೋವಿನಿಂದ ಬಳಲುತ್ತಿರುವ ಬುಮ್ರಾ ವಿಶ್ರಾಂತಿ ಪಡೆಯಲಿದ್ದಾರೆ. ಮೊಹಮ್ಮದ್ ಶಮಿ ಫಿಟ್‌ನೆಸ್‌ ಪರೀಕ್ಷೆ ಪಾಸಾದರೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಆಡುವ ಸಾಧ್ಯೆತ ಇದೆ.

ಏಕದಿನ ಸರಣಿ ವೇಳಾಪಟ್ಟಿ

ಫೆಬ್ರವರಿ 6, ನಾಗ್ಪುರದಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದ್ದು, ಫೆಬ್ರವರಿ 9ರಂದು ಕಟಕ್‌ನಲ್ಲಿ ಎರಡನೇ ಏಕದಿನ ಪಂದ್ಯ ನಡೆಯಲಿದೆ. ಫೆಬ್ರವರಿ 12ರಂದು ಅಹಮದಾಬಾದ್‌ನಲ್ಲಿ ಮೂರನೇ ಏಕದಿನ ಪಂದ್ಯ ನಡೆಯಲಿದೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗೆ ತಂಡವನ್ನು ಆಯ್ಕೆ ಮಾಡಲು ಫೆಬ್ರವರಿ 13ರವರೆಗೂ ಅವಕಾಶವಿದ್ದು ಇಂಗ್ಲೆಂಡ್ ವಿರುದ್ಧದ ಸರಣಿಗೆ ತಂಡವನ್ನು ಆಯ್ಕೆ ಮಾಡುವ ಸಂದರ್ಭದಲ್ಲೇ ಚಾಂಪಿಯನ್ಸ್ ಟ್ರೋಫಿಗೆ ತಂಡವನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.

2014ರಲ್ಲಿ ಭಾರತ ಕೊನೆಯದಾಗಿ ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು, 2023ರ ಏಕದಿನ ವಿಶ್ವಕಪ್ ಸೋತ ಬೇಜಾರು ಕಡಿಮೆ ಮಾಡಲು ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ಅವಕಾಶ ತಂಡಕ್ಕಿದೆ. ಪಾಕಿಸ್ತಾನ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಗೆ ಆತಿಥ್ಯ ವಹಿಸುತ್ತಿದ್ದು ಭಾರತದ ಪಂದ್ಯಗಳು ದುಬೈನಲ್ಲಿ ನಡೆಯಲಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+