147 ಟೆಸ್ಟ್‌ಗಳ ಇತಿಹಾಸದಲ್ಲಿ ಹೀಗೆ ಆಗಿದ್ದು ಮೊದಲು: ಬೇಡವಾದ ದಾಖಲೆ ಬರೆದ ಟೀಮ್ ಇಂಡಿಯಾ
ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯ ಮುಗಿದಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ. ಟೀಮ್ ಇಂಡಿಯಾದ ಬ್ಯಾಟರ್‌ಗಳ ಅಬ್ಬರದ ಹೊರತಾಗಿಯೂ, ಇಂಗ್ಲೆಂಡ್ ಸೊಗಸಾದ ಬ್ಯಾಟಿಂಗ್ ಪ್ರದರ್ಶನ ನೀಡಿ ಅಬ್ಬರಿಸಿದೆ. ಲೀಡ್ಸ್‌ನಲ್ಲಿ ಟೀಮ್ ಇಂಡಿಯಾ ಐದು ವಿಕೆಟ್ ಸೋಲು ಕಾಣುತ್ತಿದ್ದಂತೆ ಶುಭಮನ್ ಗಿಲ್ ಮುಡಿಗೆ ಬೇಡವಾದ ದಾಖಲೆ ಅಂಟಿಕೊಂಡಿದೆ. ಆ ದಾಖಲೆ ಏನು ಎಂಬ ಬಗ್ಗೆ ವರದಿ ಇಲ್ಲಿದೆ.
ಮಂಗಳವಾರ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ 371 ರನ್‌ಗಳ ಗುರಿಯನ್ನು ಬೆನ್ನಟ್ಟಿ 5 ವಿಕೆಟ್ ಇರುವಂತೆಯೇ ಜಯ ಸಾಧಿಸಿತು. ಈ ವೇಳೆ ಆತಿಥೇಯ ತಂಡದ ಪರ ಬೆನ್ ಡಕೆಟ್ ಹಾಗೂ ಜೋ ರೂಟ್ ಸ್ಥಿರ ಪ್ರದರ್ಶನ ನೀಡಿ ತಂಡದ ಜಯದಲ್ಲಿ ಮಿಂಚಿದರು. ಟೀಮ್ ಇಂಡಿಯಾ ಟೆಸ್ಟ್ ಪಂದ್ಯದ ನಾಲ್ಕನೇ ಇನಿಂಗ್ಸ್‌ನಲ್ಲಿ ಬೃಹತ್ ಮೊತ್ತವನ್ನು ಡಿಫೆಂಡ್ ಮಾಡಿಕೊಳ್ಳುವಲ್ಲಿ ಎಡವಿದೆ. ಈ ಮೂಲಕ ಟೀಮ್ ಇಂಡಿಯಾ ಹೊಸ ದಾಖಲೆ ಬರೆದಿದೆ.

ಟೀಮ್ ಇಂಡಿಯಾ ಪರ ಬ್ಯಾಟಿಂಗ್ ಮಾಡಿದ ಬ್ಯಾಟರ್‌ಗಳು ಒಂದು ಟೆಸ್ಟ್ ಪಂದ್ಯದಲ್ಲಿ 5 ಶತಕ ಬಾರಿಸಿದ್ದರು. ಮೊದಲ ಇನಿಂಗ್ಸ್‌ನಲ್ಲಿ ಆರಂಭಿಕ ಯಸಶ್ವಿ ಜೈಸ್ವಾಲ್, ನಾಲ್ಕನೇ ಕ್ರಮಾಂಕದಲ್ಲಿ ನಾಯಕ ಶುಭಮನ್ ಗಿಲ್, ಉಪನಾಯಕ ರಿಷಭ್ ಪಂತ್ ಶತಕ ಬಾರಿಸಿ ತಂಡಕ್ಕೆ ಆಧಾರವಾಗಿದ್ದರು. ಅಲ್ಲದೆ ಎರಡನೇ ಇನಿಂಗ್ಸ್‌ನಲ್ಲಿ ಆರಂಭಿಕ ಕೆಎಲ್ ರಾಹುಲ್ ಹಾಗೂ ಉಪನಾಯಕ ರಿಷಭ್ ಶತಕ ಬಾರಿಸಿ ಅಬ್ಬರಿಸಿದರು. ಪಂದ್ಯದಲ್ಲಿ ಟೀಮ್ ಇಂಡಿಯಾ ಒಟ್ಟು 5 ಶತಕ ಬಾರಿಸಿತ್ತು. ಆದರೂ ಪಂದ್ಯವನ್ನು ಗೆಲ್ಲುವಲ್ಲಿ ವಿಫಲವಾಯಿತು. ಈ ಮೂಲಕ ಟೀಮ್ ಇಂಡಿಯಾ ಬೇಡವಾದ ದಾಖಲೆ ಬರೆಯಿತು.
ಬೇಡವಾದ ದಾಖಲೆ ಬರೆದ ಭಾರತ
ಟೆಸ್ಟ್ ಕ್ರಿಕೆಟ್‌ನ 147 ವರ್ಷಗಳ ಇತಿಹಾಸದಲ್ಲಿ ಹೀಗೆ ಸಂಭವಿಸಿದ್ದು, ಇದೇ ಮೊದಲು. ಈ ಹಿಂದೆ ಈ ರೀತಿ ಬೇಡವಾದ ದಾಖಲೆ ಆಸ್ಟ್ರೇಲಿಯಾ ಹೆಸರಿನಲ್ಲಿತ್ತು. ಮೆಲ್ಬೋರ್ನ್‌ನಲ್ಲಿ 1928ರಲ್ಲಿ ನಡೆದಿದ್ದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆಸೀಸ್ ಪರ 4 ಶತಕಗಳು ದಾಖಲಾಗಿದ್ದವು. ಆದರೂ ಸಹ ತಂಡ ಸೋಲು ಕಂಡಿತ್ತು.

ಟೆಸ್ಟ್‌ನಲ್ಲಿ ಬೆಸ್ಟ್ ಚೇಸ್ ಯಾವುದು?
ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ 404 ರನ್‌ಗಳ ಗುರಿಯನ್ನು 1948 ರಲ್ಲಿ ಈ ಸಾಧನೆ ಮಾಡಿತ್ತು. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ದೊಡ್ಡ ಮೊತ್ತ ಚೇಸ್ ಮಾಡಿದ ದಾಖಲೆ ಹೊಂದಿದೆ. ಈ ಪಟ್ಟಿಯಲ್ಲಿ ಇಂಗ್ಲೆಂಡ್ ಸದ್ಯ ಎರಡನೇ ಸ್ಥಾನದಲ್ಲಿದೆ. 2019ರಲ್ಲಿ ಇಂಗ್ಲೆಂಡ್, ಆಸ್ಟ್ರೇಲಿಯಾ ವಿರುದ್ಧ ಇದೇ ಅಂಗಳದಲ್ಲಿ 369 ರನ್‌ಗಳ ಗುರಿಯನ್ನು ಯಶಸ್ವಿಯಾಗಿ ಚೇಸ್ ಮಾಡಿತ್ತು. ಈಗ ಇಂಗ್ಲೆಂಡ್ ತನ್ನದೇ ದಾಖಲೆಯನ್ನು ಮತ್ತಷ್ಟು ಬಲಿಷ್ಠ ಪಡಿಸಿಕೊಂಡಿದೆ.
ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಎರಡನೇ ಟೆಸ್ಟ್ ಪಂದ್ಯವನ್ನು ಜುಲೈ 2 ರಂದು ಬರ್ನಿಂಗ್‌ಹ್ಯಾಮ್‌ನಲ್ಲಿ ಆಡಲಿದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications