Get Updates
Get notified of breaking news, exclusive insights, and must-see stories!

Women's T20 World Cup: ಭಾರತಕ್ಕೆ ನ್ಯೂಜಿಲೆಂಡ್ ಸವಾಲು; ಕನ್ನಡತಿ ಶ್ರೇಯಾಂಕಾ ಪಾಟೀಲ್‌ಗೆ ಸಿಗುತ್ತಾ ಅವಕಾಶ?

ದುಬೈನಲ್ಲಿ ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಗೆ ಇಂದು (ಗುರುವಾರ) ಚಾಲನೆ ಸಿಕ್ಕಿದೆ. ಮೊದಲ ಪಂದ್ಯದಲ್ಲೇ ಬಾಂಗ್ಲಾದೇಶ ಸ್ಕಾಟ್ಲೆಂಡ್ ವಿರುದ್ಧ 16 ರನ್‌ಗಳ ಗೆಲುವಿನ ಮೂಲಕ ಪಂದ್ಯಾವಳಿಯನ್ನು ಆರಂಭಿಸಿದೆ. ಭಾರತ ತಂಡ ಶುಕ್ರವಾರ ನ್ಯೂಜಿಲೆಂಡ್ ತಂಡವನ್ನು ಎದುರಿಸಲು ಸಜ್ಜಾಗಿದ್ದು, ಹಲವು ವಿಚಾರಗಳು ಭಾರತ ತಂಡದ ಚಿಂತೆಯನ್ನು ಹೆಚ್ಚಿಸಿವೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ.

ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸ್ಪಿನ್ನರ್ ಗಳಿಗೆ ಹೆಚ್ಚಿನ ನೆರವು ಸಿಗುವ ಸಾಧ್ಯತೆ ಇರುವುದರಿಂದ, ಭಾರತ ನ್ಯೂಜಿಲೆಂಡ್ ವಿರುದ್ಧ ಗೆಲ್ಲುವ ವಿಶ್ವಾಸದಲ್ಲಿದೆ. ಆದರೆ ನಾಯಕಿ ಹರ್ಮನ್‌ಪ್ರೀತ್ ಕೌರ್, ಶಫಾಲಿ ವರ್ಮಾ ಮತ್ತು ಸ್ಮೃತಿ ಮಂದಾನ ಅವರ ಫಾರ್ಮ್‌ ಭಾರತದ ಚಿಂತೆಯನ್ನು ಹೆಚ್ಚಿಸಿದೆ.

India s Women s T20 World Cup 2024 opener Against New Zealand

ಈ ಮೂವರ ಮಿಂಚಿದರೆ ಭಾರತದ ಗೆಲುವು ಸುಲಭವಾಗುತ್ತದೆ. ಆದರೆ ಮೂವರು ಸ್ಥಿರವಾಗಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿರುವುದು ದೊಡ್ಡ ಸಮಸ್ಯೆಯಾಗಿದೆ. ಭಾರತಕ್ಕೆ ಇನ್ನೂ ಬ್ಯಾಟಿಂಗ್ ಲೈನ್‌ ಅಪ್‌ ಬಗ್ಗೆ ಸ್ಪಷ್ಟನೆ ಇಲ್ಲದಂತಾಗಿದೆ.

ಸ್ಮೃತಿ ಮಂಧಾನ ಆರಂಭಿಕ ಆಟಗಾರ್ತಿಯಾಗಿ ಉತ್ತಮ ಪ್ರದರ್ಶನ ನೀಡಿದರೂ, ಮತ್ತೊಬ್ಬ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಅವರ ಫಾರ್ಮ್ ಚಿಂತೆಗೆ ಕಾರಣವಾಗಿದೆ. 81 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿದ್ದರೂ ಅವರ ಸರಾಸರಿ 25 ಆಗಿದ್ದು, ಅಭ್ಯಾಸ ಪಂದ್ಯಗಳಲ್ಲಿ ಅವರು 0 ಮತ್ತು 7 ರನ್ ಗಳಿಸಿರುವುದು ಚಿಂತೆಯನ್ನು ಹೆಚ್ಚಿಸಿದೆ. ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರ ಫಾರ್ಮ್ ಕೂಡ ದೊಡ್ಡ ಸಮಸ್ಯೆಯಾಗಿದೆ. 2019 ರಿಂದ ಅವರ ಸ್ಟ್ರೈಕ್‌ರೇಟ್ 120 ಇದ್ದು, ನಿಧಾನಗತಿಯ ಬ್ಯಾಟಿಂಗ್‌ ತಂಡಕ್ಕೆ ಹಿನ್ನಡೆಯಾಗುವ ಅಪಾಯ ಕೂಡ ಇದೆ.

ಶ್ರೇಯಾಂಕಾಗೆ ಸಿಗುತ್ತಾ ಅವಕಾಶ

ಕನ್ನಡತಿ ಶ್ರೇಯಾಂಕಾ ಪಾಟೀಲ್ ಕೂಡ ಟಿ20 ವಿಶ್ವಕಪ್ ಭಾರತ ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ಮೊದಲ ಪಂದ್ಯದಲ್ಲಿ ಅವರಿಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಅವಕಾಶ ಸಿಗುತ್ತದಾ ಎಂದು ಕಾದು ನೋಡಬೇಕಿದೆ. ಸ್ಪಿನ್‌ ಪಿಚ್‌ಗಳಲ್ಲಿ ಶ್ರೇಯಾಂಕಾ ಪಾಟೀಲ್ ಉತ್ತಮ ದಾಖಲೆ ಹೊಂದಿದ್ದಾರೆ. ಅದನ್ನು ಪರಿಗಣಿಸಿ ಅವಕಾಶ ಸಿಗುವ ಸಾಧ್ಯತೆ ಇದೆ.

ನ್ಯೂಜಿಲೆಂಡ್‌ಗೂ ಇದೆ ಸವಾಲು

ಸೋಫಿ ಡಿವೈನ್ ನಾಯಕತ್ವದಲ್ಲಿ ನ್ಯೂಜಿಲೆಂಡ್ ಟಿ20 ವಿಶ್ವಕಪ್‌ಗೆ ಬಂದಿದ್ದು, ಭಾರತವನ್ನು ಸೋಲಿಸಿ ಶುಭಾರಂಭ ಮಾಡುವ ವಿಶ್ವಾಸದಲ್ಲಿದೆ. 2024ರ ಮಾರ್ಚ್ ತಿಂಗಳಿನಿಂದ ಈವರೆಗೆ 10 ಪಂದ್ಯಗಳನ್ನು ಆಡಿದ್ದರೂ ಒಂದೂ ಪಂದ್ಯವನ್ನು ಗೆದ್ದಿಲ್ಲ, ಆದರೆ ಭಾರತ 11 ಪಂದ್ಯಗಳನ್ನು ಗೆದ್ದು ನಾಲ್ಕು ಪಂದ್ಯಗಳನ್ನು ಸೋತಿದೆ. ದುಬೈನಲ್ಲಿ ಸ್ಪಿನ್ ಪಿಚ್ ಆಗಿರುವ ಕಾರಣ ಭಾರತವೇನೋ ನ್ಯೂಜಿಲೆಂಡ್ ವಿರುದ್ಧ ಗೆಲ್ಲುವ ವಿಶ್ವಾಸದಲ್ಲಿದೆ. ಒಟ್ಟಾರೆ ಶುಕ್ರವಾರ ರೋಚಕ ಪಂದ್ಯವನ್ನು ನಿರೀಕ್ಷೆ ಮಾಡಬಹುದಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+