ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಡಗು; ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಚಾಲನೆ

|
Google Oneindia Kannada News

ಮಡಿಕೇರಿ, ಜನವರಿ 04; ಕೊಡಗು ಜಿಲ್ಲೆಯಲ್ಲಿ ಅನೇಕ ಕಾರಣಗಳಿಂದಾಗಿ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಯೋಜನೆಗೆ ತಡೆ ಉಂಟಾಗಿತ್ತು. ಈಗ ಯೋಜನೆಗೆ ಚಾಲನೆ ಸಿಕ್ಕಿದ್ದು, 2025ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಮಡಿಕೇರಿ ತಾಲೂಕಿನ ಹೆದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲೆಮಾಡುವಿನಲ್ಲಿ 12.70 ಎಕರೆ ಜಾಗದಲ್ಲಿ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣವಾಗಲಿದೆ. ಕಳೆದ ಬುಧವಾರ ಕಾಮಗಾರಿಗೆ ಭೂಮಿ ಪೂಜೆ ನಡೆದಿದೆ.

ಬೆಂಗಳೂರಿನಲ್ಲಿ ಎಮ್‍ಎಸ್ ಧೋನಿ ಕ್ರಿಕೆಟ್ ಅಕಾಡೆಮಿ ಪ್ರಾರಂಭ ಬೆಂಗಳೂರಿನಲ್ಲಿ ಎಮ್‍ಎಸ್ ಧೋನಿ ಕ್ರಿಕೆಟ್ ಅಕಾಡೆಮಿ ಪ್ರಾರಂಭ

ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಇದ್ದ ಎಲ್ಲಾ ಅಡೆ-ತಡೆಗಳನ್ನು ಬಗೆಹರಿಸಿರುವ ಕೊಡಗು ಜಿಲ್ಲಾಧಿಕಾರಿ ಡಾ ಬಿ. ಸಿ. ಸತೀಶ ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಚಿನ್ ತೆಂಡೂಲ್ಕರ್ ಮನೆತನದ ಮೂಲ ಉಡುಪಿಯ ಅತ್ರಾಡಿ!ಸಚಿನ್ ತೆಂಡೂಲ್ಕರ್ ಮನೆತನದ ಮೂಲ ಉಡುಪಿಯ ಅತ್ರಾಡಿ!

International Cricket Stadium At Kodagu Project May Complete In 2025

ಕ್ರೀಡಾಂಗಣ ನಿರ್ಮಾಣದ ಕುರಿತು ಮಾತನಾಡಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕೊಡಗು ಜಿಲ್ಲಾ ಸಂಚಾಲಕರಾದ ಪೃಥ್ವಿ ದೇವಯ್ಯ, "ಕೊಡಗು ಜಿಲ್ಲೆಯ ಗ್ರಾಮೀಣ ಪ್ರದೇಶದ ಕ್ರಿಕೆಟ್ ಕ್ರೀಡಾಪಟುಗಳ ಬೆಳವಣಿಗೆಗೆ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ಸಹಕಾರಿ ಆಗಲಿದೆ" ಎಂದು ಅಭಿಪ್ರಾಯಪಟ್ಟರು.

 ಸಾಮಾನ್ಯ ಕೃಷಿಕನಿಂದ ಭಾರತ ಕ್ರಿಕೆಟ್ ತಂಡಕ್ಕೆ ಚಿಯರ್ ಅಪ್ ಮಾಡಿಸಿದ ಸ್ಟಾರ್ ಸ್ಪೋರ್ಟ್ಸ್! ಸಾಮಾನ್ಯ ಕೃಷಿಕನಿಂದ ಭಾರತ ಕ್ರಿಕೆಟ್ ತಂಡಕ್ಕೆ ಚಿಯರ್ ಅಪ್ ಮಾಡಿಸಿದ ಸ್ಟಾರ್ ಸ್ಪೋರ್ಟ್ಸ್!

ಪ್ರವಾಸಿಗರ ಸ್ವರ್ಗ; ಕರ್ನಾಟಕದ ಪಾಲಿನ ಪ್ರವಾಸಿಗರಿಗೆ ಸ್ವರ್ಗವಾಗಿರುವ ಕೊಡಗು ಜಿಲ್ಲೆಯಲ್ಲಿ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂಗಿಂತಲೂ ತುಸು ದೊಡ್ಡದಾಗಿ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ.

ಸುಮಾರು ಆರು ವರ್ಷಗಳ ಹಿಂದೆಯೇ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಮೂಲಕ ಕೊಡಗು ಜಿಲ್ಲೆಯಲ್ಲಿ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಒಪ್ಪಿಗೆ ಸಿಕ್ಕಿತ್ತು. ಆದರೆ ಯೋಜನೆಗೆ ಚಾಲನೆ ಸಿಗಲಿಲ್ಲ. ಈಗ ಭೂಮಿ ಪೂಜೆ ನಡೆದಿದ್ದು, ಟೆಂಡರ್ ಪ್ರಕ್ರಿಯೆ ಮುಗಿದ ಬಳಿಕ ಕಾಮಗಾರಿ ಆರಂಭವಾಗಲಿದೆ.

ಹೆದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲೆಮಾಡುವಿನಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಭೂ ವಿವಾದವೇ ತಡೆಯಾಗಿತ್ತು. ಕೊಡಗು ಜಿಲ್ಲಾಧಿಕಾರಿ ಡಾ ಬಿ. ಸಿ. ಸತೀಶ ಎಲ್ಲಾ ವಿವಾದ ಬಗೆಹರಿಸಿದ್ದಾರೆ. ಮೊದಲು ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದವರು ಬುಧವಾರ ನಡೆದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಭೂ ವಿವಾದ ಏನು?; 2015ರಲ್ಲಿ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದಂತೆ ಪಾಲೆಮಾಡುವಿನಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಸೆರ್ವೆ ನಂ 167/10ರಲ್ಲಿ 12.70 ಎಕರೆ ಜಾಗವನ್ನು ಅಧಿಕೃತವಾಗಿ ಮಂಜೂರು ಮಾಡಲಾಗಿತ್ತು. ಆದರೆ ಈ ಜಾಗ ಬಡವರ ಸ್ಮಶಾನಕ್ಕೆ ನಿಗದಿಯಾಗಿದ್ದ ಜಾಗ ಎಂಬುದು ವಿವಾದಕ್ಕೆ ಕಾರಣವಾಗಿತ್ತು.

ಭೂ ವಿವಾದ ಪರ, ವಿರೋಧ ಪ್ರತಿಭಟನೆಗೂ ಕಾರಣವಾಯಿತು. ಬಳಿಕ ವಿವಾದ ಕೋರ್ಟ್‌ ಮೆಟ್ಟಿಲೇರಿತು. ನ್ಯಾಯಾಲಯದಲ್ಲಿ ಕೆಎಸ್‌ಸಿಎ ಪರವಾಗಿಯೇ ತೀರ್ಪು ಬಂದಿತು. 2018ರ ಅಕ್ಟೋಬರ್ 9ರಂದು ಸರ್ಕಾರ ತಿದ್ದುಪಡಿ ಆದೇಶ ಹೊರಡಿಸಿತ್ತು.

ಕ್ರೀಡಾಂಗಣ ನಿರ್ಮಾಣಕ್ಕೆ ಮಂಜೂರು ಮಾಡಿದ್ದ 12.70 ಎಕರೆ ಜಾಗದಲ್ಲಿ 0.50 ಎಕರೆ ಜಮೀನನ್ನು ಹೆದ್ದೂರು ಪಾಲೆಮಾಡು ನಿವಾಸಿಗಳ ಸ್ಮಶಾನ ಉದ್ದೇಶಕ್ಕೆ ಕಾಯ್ದಿರಿಸಲು ಸರ್ಕಾರದ ತಿದ್ದುಪಡಿ ಆದೇಶ ಹೇಳಿತ್ತು. 11.70 ಜಾಗದಲ್ಲಿ ಸ್ಟೇಡಿಯಂ, 50 ಸೆಂಟ್ ಜಾಗದಲ್ಲಿ ಪಾರ್ಕ್ ನಿರ್ಮಾಣವಾಗಲಿದೆ.

ಈಗ ಭೂ ವಿವಾದ ಬಗೆಹರಿದಿದ್ದು ಸ್ಟೇಡಿಯಂ ನಿರ್ಮಾಣಕ್ಕೆ ಭೂಮಿ ಪೂಜೆ ನಡೆದಿದೆ. ಸ್ಟೇಡಿಯಂ ಜೊತೆಗೆ ಈಜುಕೊಳ, ರೆಸ್ಟೋರೆಂಟ್, 1000 ಜನರ ಸಾಮರ್ಥ್ಯದ ಕನ್ವೆನ್‌ಷನ್‌ ಹಾಲ್, ಶಟಲ್ ಕೋರ್ಟ್, ಬ್ಯಾಸ್ಕೆಟ್ ಬಾಲ್ ಕೋರ್ಟ್ ಸೇರಿದಂತೆ ವಿವಿಧ ಚಟುವಟಿಕೆಗಳಿಗೆ ಜಾಗ ಮೀಸಲಿಡಲಾಗಿದೆ.

ಕಾಮಗಾರಿಗೆ ಶೀಘ್ರವೇ ಟೆಂಡರ್ ಕರೆಯಲಾಗುತ್ತದೆ. ಅಂತರರಾಷ್ಟ್ರೀಯ ಗುಣಮಟ್ಟದಲ್ಲೇ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತದೆ. 2025ರ ವೇಳೆಗೆ ಯೋಜನೆ ಪೂರ್ಣಗೊಳ್ಳುವ ವಿಶ್ವಾಸವಿದೆ. ಈ ಮೂಲಕ ದಶಕಗಳ ಕನಸು ಈಡೇರಲಿದೆ.

ಸ್ಟೇಡಿಯಂ ನಿರ್ಮಾಣವಾದರೆ ಧರ್ಮಶಾಲಾ ಮಾದರಿಯಲ್ಲಿ ಕೊಡಗಿನಲ್ಲಿಯೂ ಕ್ರಿಕೆಟ್ ವೀಕ್ಷಣೆ ಮಾಡಬಹುದಾಗಿದೆ. ಈಗಾಗಲೇ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ಕೊಡಗಿನಲ್ಲಿ ಪ್ರವಾಸೋದ್ಯಮ ಮತ್ತಷ್ಟು ಅಭಿವೃದ್ಧಿಯಾಗಲಿದೆ.

Recommended Video

Virat Kohli ಏಕದಿನ ಸರಣಿಯಿಂದಲೂ ಹೊರಗುಳಿಯಲಿದ್ದಾರೆ | Oneindia Kannada

English summary
Ground breaking ceremony held for international cricket stadium construction at Kodagu district Madikeri. Stadium will come up in 12.70 acre of land and project cost around 50 crore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X