IPL 2023: ಸನ್‌ರೈಸರ್ಸ್ ಹೈದರಾಬಾದ್‌ನ ಬಲಿಷ್ಠ ಆಡುವ ಬಳಗವನ್ನು ಹೆಸರಿಸಿದ ಆಕಾಶ್ ಚೋಪ್ರಾ
ಐಪಿಎಲ್ 2023ರ ಮಿನಿ ಹರಾಜಿನಲ್ಲಿ ಪ್ರಮುಖ ಆಟಗಾರರನ್ನು ಖರೀದಿ ಮಾಡುವ ಮೂಲಕ ಸನ್‌ರೈಸರ್ಸ್ ಹೈದರಾಬಾದ್ ತಂಡ ಸಾಕಷ್ಟು ಬಲಿಷ್ಠವಾಗಿ ಕಾಣುತ್ತಿದೆ. ನಾಯಕ ಕೇನ್ ವಿಲಿಯಮ್ಸನ್ ಸೇರಿದಂರೆ ಒಟ್ಟು 12 ಆಟಗಾರರನ್ನು ಮಿನಿ ಹರಾಜಿಗೆ ಮುನ್ನ ಬಿಡುಗಡೆ ಮಾಡಿತ್ತು.
ಡಿಸೆಂಬರ್ 2022ರಲ್ಲಿ ನಡೆದ ಮಿನಿ ಹರಾಜಿನಲ್ಲಿ ಸನ್‌ರೈಸರ್ಸ್ ಹೈದರಾಬಾದ್ 13 ಆಟಗಾರರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದೆ. 2023ರ ಐಪಿಎಲ್‌ನಲ್ಲಿ ಆಲ್‌ರೌಂಡರ್ ಐಡೆನ್ ಮಾರ್ಕ್ರಾಮ್ ತಂಡವನ್ನು ಮುನ್ನಡೆಸುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಬಲಿಷ್ಠ ತಂಡವನ್ನೇ ಕಟ್ಟಿರುವ ಸನ್‌ರೈಸರ್ಸ್ ಹೈದರಾಬಾದ್ ಯಾವ ಪ್ಲೇಯಿಂಗ್ 11 ಕಣಕ್ಕಿಳಿಸಲಿದೆ ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ. ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಸನ್‌ರೈಸರ್ಸ್ ಹೈದರಾಬಾದ್‌ನ ಬಲಿಷ್ಠ ಪ್ಲೇಯಿಂಗ್ 11 ಅನ್ನು ಹೆಸರಿಸಿದ್ದಾರೆ. ಜಿಯೋ ಸಿನಿಮಾದಲ್ಲಿನ "ಆಕಾಶವಾಣಿ" ಶೋನಲ್ಲಿ ಮಾತನಾಡಿದ ಅವರು, ಪ್ಲೇಯಿಂಗ್ ಇಲೆವೆನ್‌ನಲ್ಲಿ ಆಡಬಹುದಾದ ಆಟಗಾರರ ಬಗ್ಗೆ ಮಾತನಾಡಿದ್ದಾರೆ.
ಅಗ್ರ 6 ಆಟಗಾರರಲ್ಲಿ ಮೂವರು ಭಾರತೀಯ ಆಟಗಾರರು ಇದ್ದರೆ ಮೂವರು ವಿದೇಶಿ ಆಟಗಾರರು ಇದ್ದಾರೆ. ಅಭಿಷೇಕ್ ಶರ್ಮಾ ಮತ್ತು ಮಯಾಂಕ್ ಅಗರ್ವಾಲ್ ಆರಂಭಿಕರಾಗಿ ಕಣಕ್ಕಿಳಿಯಬೇಕು ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ. ಮೂರನೇ ಕ್ರಮಾಂಕದಲ್ಲಿ ರಾಹುಲ್ ತ್ರಿಪಾಠಿ ಆಡಿದರೆ, ನಾಲ್ಕನೇ ಕ್ರಮಾಂಕದಲ್ಲಿ ಐಡೆನ್ ಮಾರ್ಕ್ರಾಮ್, ಐದನೇ ಕ್ರಮಾಂಕದಲ್ಲಿ ಹ್ಯಾರಿ ಬ್ರೂಕ್ ಮತ್ತು 6ನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಹೆನ್ರಿಚ್ ಕ್ಲಾಸೆನ್ ಆಡಬೇಕು ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ.

ವೇಗಿಗಳೇ ತಂಡದ ಬೌಲಿಂಗ್ ಶಕ್ತಿ
ವಾಷಿಂಗ್ಟನ್ ಸುಂದರ್ ತಂಡದಲ್ಲಿ ಇರುವುದರಿಂದ ತಂಡದ ಬ್ಯಾಟಿಂಗ್ ಮತ್ತಷ್ಟು ಶಕ್ತಿಯುತವಾಗುತ್ತದೆ ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ. ಇನ್ನು ಪರಿಸ್ಥಿತಿಗಳ ಆಧಾರದ ಮೇಲೆ ನಾಲ್ಕನೇ ವಿದೇಶಿ ಆಟಗಾರರನ್ನು ಆಯ್ಕೆ ಮಾಡಬಹುದು ಎಂದು ಅವರು ಹೇಳಿದರು.
ಮಾರ್ಕೊ ಜಾನ್ಸೆನ್, ಫಜಲ್ಹಕ್ ಫಾರೂಕಿ ಅಥವಾ ಅಕೇಲ್ ಹೊಸೇನ್‌ರನ್ನು ಪಿಚ್‌ಗಳ ಆಧಾರದ ಮೇಲೆ ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಬಹುದು ಎಂದು ಹೇಳಿದರು. ಇವರನ್ನು ಹೊರತುಪಡಿಸಿ ಟಿ ನಟರಾಜನ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್ ಮತ್ತು ಕಾರ್ತಿಕ್ ತ್ಯಾಗಿ ಈ ನಾಲ್ವರಲ್ಲಿ ಮೂವರು ವೇಗಿಗಳು ತಂಡದಲ್ಲಿ ಆಡಬೇಕು ಎಂದು ಆಕಾಶ್ ಚೋಪ್ರಾ ಹೇಳಿದರು.

ಉಮ್ರಾನ್ ಮಲಿಕ್ ಹೆಚ್ಚು ವಿಕೆಟ್ ಪಡೆಯುತ್ತಾರೆ
ಸನ್‌ರೈಸರ್ಸ್ ಹೈದರಾಬಾದ್ ಅಬ್ದುಲ್ ಸಮದ್ ಅಥವಾ ಟಿ ನಟರಾಜನ್ ಮತ್ತು ಉಮ್ರಾನ್ ಮಲಿಕ್ ಅವರಲ್ಲಿ ಒಬ್ಬರನ್ನು ತಮ್ಮ ಪ್ರಭಾವಿ ಆಟಗಾರನಾಗಿ ಬಳಸಿಕೊಳ್ಳಬಹುದು ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ.
"ಸನ್‌ರೈಸರ್ಸ್ ಹೈದರಾಬಾದ್ ತಂಡ ಚೇಸಿಂಗ್ ಮಾಡುವ ಸಮಯದಲ್ಲಿ ಅಬ್ದುಲ್ ಸಮದ್‌ರನ್ನು ಪ್ರಭಾವಿ ಆಟಗಾರನಾಗಬಹುದು. ಮೊದಲು ಬ್ಯಾಟಿಂಗ್ ಮಾಡಿದ ಅಬ್ದುಲ್ ಸಮದ್ ಪ್ಲೇಯಿಂಗ್ 11ರಲ್ಲಿ ಸ್ಥಾನ ಪಡೆಯಬೇಕು, ನಂತರ ಪ್ರಭಾವಿ ಆಟಗಾರನಾಗಿ ಬೌಲರ್ ಅನ್ನು ಪಡೆಯಬಹುದು ಅದು ಟಿ ನಟರಾಜನ್ ಅಥವಾ ಉಮ್ರಾನ್ ಮಲಿಕ್ ಉತ್ತಮ ಆಯ್ಕೆಯಾಗುತ್ತಾರೆ" ಎಂದು ಹೇಳಿದರು.
ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ಈ ಬಾರಿ ಐಪಿಎಲ್‌ನಲ್ಲಿ ಎಸ್‌ಆರ್ ಹೆಚ್ ತಂಡಕ್ಕಾಗಿ ಹೆಚ್ಚು ರನ್ ಗಳಿಸುವ ಆಟಗಾರನಾಗಬಹುದು ಎಂದು ಆಕಾಶ್ ಚೋಪ್ರಾ ಭವಿಷ್ಯ ನುಡಿದಿದ್ದಾರೆ. ಇನ್ನು ಉಮ್ರಾನ್ ಮಲಿಕ್ ತಂಡದ ಪರವಾಗಿ ಅತಿ ಹೆಚ್ಚು ರನ್ ಗಳಿಸುವ ಬೌಲರ್ ಎಂದು ಹೇಳಿದ್ದಾರೆ. 2016ರಲ್ಲಿ ಉಮ್ರಾನ್ ಮಲಿಕ್ 22 ವಿಕೆಟ್ ಪಡೆಯುವ ಮೂಲಕ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು.












Click it and Unblock the Notifications